ಶಿವಮೊಗ್ಗ

ನೀರು ಪೂರೈಕೆಯಲ್ಲಿ ವ್ಯತ್ಯಯ ಇಂದು

Published On :

ಶಿವಮೊಗ್ಗ: ಮಾ.22ರಂದು ಮೆಸ್ಕಾಂನವರು ವಿದ್ಯುತ್ ಮಾರ್ಗಗಳ ದುರಸ್ಥಿಗಾಗಿ ಕೃಷ್ಣರಾಜೇಂದ್ರ ನೀರು ಶುದ್ದೀಕರಣ ಕೇಂದ್ರ ಹಾಗೂ ಗಾಜನೂರು ನೀರು ಸರಬರಾಜು ಕೇಂದ್ರಕ್ಕೆ ವಿದ್ಯುತ್ ಪೂರೈಕೆಯನ್ನು ನಿಲ್ಲಿಸಲಿದೆ. ಹೀಗಾಗಿ 22ರ ಮಧ್ಯಾಹ್ನ ಮತ್ತು 23ರಂದು ಶಿವಮೊಗ್ಗ ನಗರದಲ್ಲಿ ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿದ್ಯುತ್‌ವ್ಯತ್ಯಯ
ಮಂಗಳೂರು ವಿದ್ಯುತ್ ಸರಬರಾಜು ಕಂಪನಿಯು ಮಾರ್ಚ್ 22ರಂದು ಬೆಳಿಗ್ಗೆ 9ರಿಂದ ಸಂಜೆ 6ಗಂಟೆಯವರೆಗೆ ಮಂಡ್ಲಿಯ ವಿದ್ಯುತ್ ಪ್ರಸರಣಾ ಕೇಂದ್ರದಲ್ಲಿನ ಉಪಕರಣಗಳು ಹಾಗೂ ಸ್ಟ್ರಕ್ಚರ್‌ಗಳಿಗೆ ಬಣ್ಣ ಹಚ್ಚುವ ಕಾರ್ಯ ಕೈಗೆತ್ತಿಕೊಂಡಿರುವುದರಿಂದ ನಗರದ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಈ ಪ್ರದೇಶದ ವ್ಯಾಪ್ತಿಗೊಳಪಡುವ ಎನ್.ಟಿ. ರಸ್ತೆ, ಗಾಜನೂರು ನಗರ ಸಭೆಗಳ ವಾಟರ್ ವರ್ಕ್ಸ್, ಓ.ಟಿ.ರಸ್ತೆ, ಕಲ್ಲೂರು ಮಂಡ್ಲಿ, ನ್ಯೂ ಮಂಡ್ಲಿ, ಹರಕೆರೆ, ಬಸ್ ಸ್ಟಾಂಡ್ ಮತ್ತು ಸುತ್ತಮುತ್ತಲ ಪ್ರದೇಶ, ಸೀಗೆಹಟ್ಟಿ, ಮಿಳಘಟ್ಟ, ಗಾಂಧಿ ಬಜಾರ್, ಕುಂಬಾರಗುಂಡಿ, ಬಿ.ಬಿ.ರಸ್ತೆ, ಬಿ.ಎಚ್.ರಸ್ತೆ, ಗಾರ್ಡನ್ ಏರಿಯಾ, ನೆಹರು ರಸ್ತೆ, ಹೊಸಹಳ್ಳಿ ಮತ್ತಿತರ ಕಡೆಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.