ಶಿವಮೊಗ್ಗ

ರಾಘವೇಂದ್ರ ಸ್ವಾಮಿಗೆ ಪಿಎಚ್.ಡಿ

Published On :

ಬೆಂಗಳೂರು: ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ನಿವೃತ್ತ ಶಿಕ್ಷಕ ರಾಘವೇಂದ್ರ ಸ್ವಾಮಿ ಕೆ.ವಿ. ಅವರು ಮಂಡಿಸಿದ ಇಂಗ್ಲಿಷ್‌ನ ಪ್ರಬಂ ಧಕ್ಕೆ ಕುವೆಂಪು ವಿವಿಯಿಂದ ಪಿಎಚ್.ಡಿ ಪದವಿ ಪಡೆದಿದ್ದಾರೆ. ಖಾಸಗಿ ಶಾಲೆಯೊಂದರಲ್ಲಿ ಮುಖ್ಯೋಪಾಧ್ಯರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿರುವ ರಾಘವೇಂದ್ರ ಸ್ವಾಮಿ 'ಟಿ.ಎಸ್. ಇಲಿಯಟ್ಸ್ ಪ್ಲೇಸ್ ಎಂಡ್ ಮಿಥ್ಸ್: ರಿ ಎನ್ ಪ್ಲೋರಿಂಗ್ ಮೈನ್ ಟು ಮಾಡಾರ್ನಿಟಿ' ಎಂಬ ವಿಷಯವನ್ನು ಮೂಡಬಿದ್ರೆ ಆಳ್ವಾಸ್ ಕಾಲೇಜಿನ ಡೀನ್ ಅಂಡ್ ಡೈರೆಕ್ಟರ್ ಡಾ. ಪ್ರೊ. ಬಿ.ವೈ. ಪಾಟೀಲ್ ಮಾರ್ಗದರ್ಶನದಲ್ಲಿ ಮಂಡಿಸಿದ್ದರು.
ಪಾದಯಾತ್ರೆ ಮೂಲಕ ಕೃತಜ್ಞತೆ
ಸಾಗರ: ಕಳೆದ ನಗರಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ ಮತದಾರರಿಗೆ ಮಾಜಿ ಸಚಿವ ಕಾಗೋಡು ತಿಮ್ಮಪ್ಪನವರು ಬುಧವಾರ ಕೆಲವು ವಾರ್ಡ್‌ಗಳಲ್ಲಿ ಪಾದಯಾತ್ರೆ ನಡೆಸಿ ಕೃತಜ್ಞತೆ ಸಲ್ಲಿಸಿದರು.  ಈ ವೇಳೆ ಮಾತನಾಡಿ, ನಗರದ ಜನರು ಕಾಂಗ್ರೆಸ್ ಮೇಲೆ ವಿಶ್ವಾಸವಿರಿಸಿ ನಗರಸಭೆಯಲ್ಲಿ ಸ್ಪಷ್ಟ ಬಹುಮತ ನೀಡಿದ್ದಾರೆ. ರಾಜ್ಯದಲ್ಲಿಯೆ ಮಾದರಿ ಎನ್ನುವ ರೀತಿಯಲ್ಲಿ ಕೈ ಚಿಹ್ನೆಯಡಿ ಸ್ಪರ್ಧಿದ ಕಾಂಗ್ರೆಸ್ 24 ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ನಗರದಲ್ಲಿ ಕಾಂಗ್ರೆಸ್ ಬಲವರ್ಧನೆಗೆ ಸಹಕಾರ ನೀಡಿದ್ದಾರೆ ಎಂದು ಹೇಳಿದರು.  ನಗರ ಕಾಂಗ್ರೆಸ್ ಸಮಿತಿ ಕಾರ್ಯಾಧ್ಯಕ್ಷ ಸುರೇಶಬಾಬು, ಕಾರ್ಯದರ್ಶಿ ಡಿ. ದಿನೇಶ್, ರಮೇಶ್ ಗಾಳಿಪುರ, ನಗರಸಭೆ ಸದಸ್ಯರಾದ ಸುಂದರಸಿಂಗ್, ಪರಿಮಳ, ಲಲಿತಮ್ಮ, ತೀ.ನ. ಶ್ರೀನಿವಾಸ್, ತಿಮ್ಮಪ್ಪ, ಮಹಮದ್ ಜಿಕ್ರಿಯಾ, ನಾರಾಯಣ ಅರಮನೆಕೇರಿ ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.