ವಿಪತ್ತು ನಿರ್ವಹಣೆ ಕಾರ್ಯಾಗಾರ
ಕನ್ನಡಪ್ರಭ ವಾರ್ತೆ ಶಿವಮೊಗ್ಗ ಮಾ.22
ವಿದ್ಯಾರ್ಥಿಗಳು ವಿಪತ್ತು ನಿರ್ವಹಣೆ ಸಂದರ್ಭದಲ್ಲಿ ಮಾನವೀಯತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಭಾರತೀಯ ರೆಡ್ಕ್ರಾಸ್ ಸಂಸ್ಥೆ ಅಧ್ಯಕ್ಷ ಎಸ್. ಪಿ. ದಿನೇಶ್ ಹೇಳಿದರು.
ಭಾರತೀಯ ರೆಡ್ ಕ್ರಾಸ್ ಘಟಕ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆಶ್ರಯದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗಾಗಿ ಪ್ರಥಮ ಚಿಕಿತ್ಸೆ, ವಿಪತ್ತು ನಿರ್ವಹಣೆ ಹಾಗೂ ಅಗ್ನಿ ಅನಾಹುತಗಳ ಜಾಗೃತಿ ಪ್ರಾತ್ಯಕ್ಷಿಕೆ ಒಂದು ದಿನದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ಸಮಾಜದ ಹಿತ ಕಾಪಾಡುವ ದೃಷ್ಟಿಯಿಂದ ರೆಡ್ ಕ್ರಾಸ್ ಸಂಸ್ಥೆ ಕಾರ್ಯನಿರ್ವಹಿಸುತ್ತಿದ್ದು, ಇಂತಹ ಮೌಲ್ಯಯುತ ಗುಣವನ್ನು ಪ್ರತಿಯೊಬ್ಬ ನಾಗರೀಕನು ಅಳವಡಿಸಿಕೊಳ್ಳಬೇಕು ಎಂದರು.
ಕಾಲೇಜು ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಡಿ.ಎಸ್. ಅರುಣ್, ವಿಪತ್ತು ನಿರ್ವಹಣೆ ಮಾಡಲು ರೆಡ್ ಕ್ರಾಸ್ ಸಂಸ್ಥೆಯಿಂದ ಎಲ್ಲಾ ರೀತಿಯ ಸೌಲಭ್ಯಗಳನ್ನು ನೀಡಲಾಗಿದೆ. ಇದನ್ನು ವಿದ್ಯಾರ್ಥಿಗಳು ಸರಿಯಾಗಿ ಬಳಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಪ್ರೊ. ಎಂ.ಕೆ. ನಾರಾಯಣಸ್ವಾಮಿ, ಇಆರ್ಸಿಎಸ್ ರಾಜ್ಯ ಸಂಯೋಜನಾಧಿಕಾರಿ ಡಾ. ವಿ.ಎಲ್.ಎಸ್. ಕುಮಾರ್, ಪ್ರಾದೇಶಿಕ ಅಗ್ನಿಶಾಮಕ ಅಧಿಕಾರಿ ಕೆ. ಶಿವಕುಮಾರ್, ರೆಡ್ ಕ್ರಾಸ್ ಯುವ ಘಟಕದ ಅಧಿಕಾರಿ ರೇಷ್ಮ, ಇತಿಹಾಸ ವಿಭಾಗದ ಪ್ರಾಧ್ಯಾಪಕ ಆರ್. ರವಿ ಮತ್ತಿತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

