ಶಿವಮೊಗ್ಗ

ವೀರಪ್ಪ ಮೊಯ್ಲಿ ವಜಾಗೆ ಆಗ್ರಹ

Published On :

ಕನ್ನಡಪ್ರಭ ವಾರ್ತೆ   ಸಾಗರ  ಮಾ.22
ಭ್ರಷ್ಟಚಾರದ ಆರೋಪ ಹೊಂದಿರುವ ಕೇಂದ್ರ ಸಚಿವ ವೀರಪ್ಪ ಮೊಯ್ಲಿ ಅವರನ್ನು ಸಚಿವ ಸಂಪುಟದಿಂದ ಕೈಬಿಡುವಂತೆ ಒತ್ತಾಯಿಸಿ ತಾಲ್ಲೂಕು ಬಿಜೆಪಿ ಘಟಕ ಶುಕ್ರವಾರ ಪ್ರತಿಭಟನೆ ನಡೆಸಿತು.
ಈ ಸಂದರ್ಭದಲ್ಲಿ ನಗರಸಭೆ ಸದಸ್ಯ ಸಂತೋಷ್ ಶೇಟ್ ಮಾತನಾಡಿ, ಕೇಂದ್ರ ಸಚಿವ ವೀರಪ್ಪ ಮೊಯ್ಲಿ ಹಗರಣಗಳಲ್ಲಿ ಭಾಗಿಯಾಗಿದ್ದರೂ, ಅವರ ವಿರುದ್ದ ಯುಪಿಎ ಸರ್ಕಾರ ಚಕಾರವೆತ್ತದೆ ಭ್ರಷ್ಟಾಚಾರವನ್ನು ಪೋಷಿಸುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು.
ಭ್ರಷ್ಟರ ರಕ್ಷಣೆ: ಭ್ರಷ್ಟಾಚಾರದಲ್ಲಿ ಸಿಲುಕಿರುವ ಅನೇಕ ಸಚಿವರು ಕಾಂಗ್ರೆಸ್ ಪಕ್ಷದವರಾಗಿದ್ದು, ಅವರ ವಿರುದ್ದ ಕ್ರಮ ಕೈಗೊಳ್ಳಲು ವಿಫಲವಾಗಿರುವ ಕೇಂದ್ರ ಸರ್ಕಾರ, ಸಿಬಿಐಯನ್ನು ತನ್ನ ಅಸ್ತ್ರವಾಗಿ ಉಪಯೋಗಿಸಿಕೊಂಡು ಬೇರೆಯವರ ಮೇಲೆ ಛೂ ಬಿಡುವ ಕೆಲಸ ಮಾಡುತ್ತಿದೆ ಎಂದು ದೂರಿದರು.
 ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಒಂದಿಲ್ಲೊಂದು ಹಗರಣ ನಡೆಯುತ್ತಿದೆ.
ಜೊತೆಗೆ ಜನಸಾಮಾನ್ಯರು ಬಳಕೆ ಮಾಡುವ ಅಗತ್ಯ ವಸ್ತುಗಳ ಬೆಲೆ, ಡಿಸೇಲ್, ಪೆಟ್ರೋಲ್, ಅಡುಗೆ ಅನಿಲಗಳ ಬೆಲೆಯು ಗಗನಕ್ಕೆ ಏರಿದೆ. ಇಂತಹ ಜನವಿರೋಧಿ ಆಡಳಿತ ನೀಡುವ ಬದಲು ರಾಜಿನಾಮೆ ನೀಡುವುದು ಸೂಕ್ತ ಎಂದು ಹೇಳಿದರು.
ಕೇಂದ್ರದ ಕೈಗೊಂಬೆ: ಬಿಜೆಪಿ ನಗರ ಘಟಕದ ಅಧ್ಯಕ್ಷ ಎಸ್.ವಿ.ಕೃಷ್ಣ ಮೂತರ್, ಕೇಂದ್ರ ಸರ್ಕಾರ ಸಿಬಿಐಯನ್ನು ತನ್ನ ಕೈಗೊಂಬೆ ಮಾಡಿಕೊಂಡು ತಮಗೆ ಆಗದವರ ಮೇಲೆ ದಾಳಿ ಮಾಡಿಸಿ, ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತಿದೆ.
ತಮ್ಮ ಪಕ್ಷದ ಸಚಿವರುಗಳೆ ದೊಡ್ಡದೊಡ್ಡ ಹಗರಣಗಳಲ್ಲಿ ಭಾಗಿಯಾಗಿದ್ದರೂ ಅವರ ವಿರುದ್ದ ಕ್ರಮ ಕೈಗೊಳ್ಳದೆ ವಿಪಕ್ದದವರ ಮೇಲೆ ಸಿಬಿಐ ಮೂಲಕ ದಾಳಿ ಮಾಡಿಸಿ ಅನೈತಿಕ ರಾಜಕೀಯ ನಡೆಸುತ್ತಿದೆ ಎಂದು ದೂರಿದರು.
ನಗರ ಯುವ ಮೋರ್ಚಾ ಅಧ್ಯಕ್ಷ ರಾಜು ಮಡಿವಾಳ, ನಗರಸಭೆ ಸದಸ್ಯರಾದ ಅರವಿಂದ್, ನಾಗರತ್ನಮ್ಮ, ನಗರಸಭೆ ಮಾಜಿ ಸದಸ್ಯರಾದ ಸತೀಶಬಾಬು, ಗಂಗಮ್ಮ, ಪ್ರಮುಖರಾದ ಪುರುಷೋತ್ತಮ, ರವೀಶ್ ಕುಮಾರ್, ಕೆ.ವಿ.ಪ್ರವೀಣ್, ಅನುಪಮ, ದಿನಕರ ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.