ಶಿವಮೊಗ್ಗ

ಸುದ್ದಿ ಸಂಕ್ಷೇಪ

Published On :

ಪರೀಕ್ಷಾರ್ಥಿಗಳಿಗೆ ಸೂಚನೆ
ಶಿವಮೊಗ್ಗ:
2013-14ನೇ ಸಾಲಿಗೆ ಮೊರಾರ್ಜಿ ದೇಸಾಯಿ, ಅಟಲ್ ಬಿಹಾರಿ ವಾಜಪೇಯಿ ಮತ್ತು ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗಳಿಗೆ 6ನೇ ತರಗತಿ ದಾಖಲಾತಿಗಾಗಿ ಮಾರ್ಚ್ 24ರಂದು ಬೆಳಿಗ್ಗೆ 11ರಿಂದ ಮಧ್ಯಾಹ್ನ 1.30ರವರೆಗೆ ಪ್ರವೇಶ ಪರೀಕ್ಷೆ ನಡೆಯುವುದು. ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಪ್ರವೇಶ ಪರೀಕ್ಷೆ ನಡೆಯುತ್ತಿದ್ದು, ಅರ್ಜಿ ಸಲ್ಲಿಸಿದ ಪರೀಕ್ಷಾರ್ಥಿಗಳು ಪ್ರವೇಶ ಪತ್ರದೊಂದಿಗೆ ಪರೀಕ್ಷೆ ಆರಂಭಗೊಳ್ಳುವ ಅರ್ಧ ಗಂಟೆ ಮುಂಚಿತವಾಗಿ ಪರೀಕ್ಷಾ ಕೇಂದ್ರದಲ್ಲಿ ಹಾಜರಿರುವಂತೆ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಜಿ ಆಹ್ವಾನ
ಶಿವಮೊಗ್ಗ:
ಮೈಸೂರು ಮಾನಸ ಗಂಗೋತ್ರಿಯ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು 2011-12ನೇ ಶೈಕ್ಷಣಿಕ ಸಾಲಿನಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ತರಗತಿಗಳಿಗೆ ದಾಖಲಾದ ವಿದ್ಯಾರ್ಥಿಗಳಿಂದ ಮುಕ್ತ ಸಂಜೀವಿನಿ ವಿದ್ಯಾರ್ಥಿ ವೇತನಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಯು ಪ್ರಥಮ ಬಿಎ, ಬಿಕಾಂ ಮತ್ತು ಪ್ರಥಮ ವರ್ಷದ ಎಂಎ, ಎಂಕಾಂ, ಸ್ಪೆಷಲ್ ಬಿ.ಎಡ್, ಪದವಿಗೆ ಪ್ರವೇಶ ಪಡೆದವರಾಗಿರಬೇಕು. 2012ರ ಎಪ್ರಿಲ್, ಮೇ, ಜೂನ್ ಮಾಹೆಯಲ್ಲಿ ನಡೆದ ವಾರ್ಷಿಕ ಪರೀಕ್ಷೆಗಳಲ್ಲಿ ಮೊದಲ ಪ್ರಯತ್ನದಲ್ಲಿ ಶೇ.50ಅಂಕಗಳೊಂದಿಗೆ ಅಥವಾ ಅದಕ್ಕೂ ಹೆಚ್ಚಿನ ಅಂಕ ಗಳಿಸಿ ಒಂದೇ ಬಾರಿಗೆ ಉತ್ತೀರ್ಣರಾಗಿರಬೇಕು. ಪ್ರಸ್ತುತ ದ್ವಿತೀಯ ಬಿಎ, ಬಿಕಾಂ, ಮತ್ತು ಅಂತಿಮ ವರ್ಷದ ಎಂಎ, ಎಂಕಾಂ, ಸ್ಪೆಷಲ್ ಬಿ.ಎಡ್, ಪದವಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಆರ್ಥಿಕವಾಗಿ ಹಿಂದುಳಿದವರಾಗಿರಬೇಕು. ಅಭ್ಯರ್ಥಿಯು 30ವರ್ಷ ವಯೋವುತಿಯೊಳಗಿನವರಾಗಿದ್ದು,  ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯ ಅರ್ಜಿಗಳನ್ನು ಕರಾಮುವಿ ಅಂತರ್ಜಾಲ ತಾಣ ನಿಂದ ಅಥವಾ ಸಮೀಪದ ಪ್ರಾದೇಶಿಕ ಅಧ್ಯಯನ ಕೇಂದ್ರದಿಂದ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಏಪ್ರಿಲ್ 6ರೊಳಗಾಗಿ ಖುದ್ದಾಗಿ ಅಥವಾ ನೋಂದಾಯಿಸಿದ ಅಂಚೆ ಮೂಲಕ ಸಲ್ಲಿಸಬೇಕು.
ಲೆವಿ ಅಕ್ಕಿ ಖರೀದಿಗೆ ಅವಧಿ ವಿಸ್ತರಣೆ
ಶಿವಮೊಗ್ಗ:
ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮವು ಪ್ರಸಕ್ತ ಸಾಲಿನ ಬೆಂಬಲಬೆಲೆ ಯೋಜನೆಯಡಿಯಲ್ಲಿ ರೈತರಿಂದ ಖರೀದಿಸಲಾಗುತ್ತಿರುವ ಭತ್ತ ಮತ್ತು ಅಕ್ಕಿ ಗಿರಣಿಗಳಿಂದ ಮಿಲ್ಪಾಯಿಂಟ್ ಅಕ್ಕಿಯನ್ನು ಖರೀದಿಸಲು ನಿಗದಿಗೊಳಿಸಿದ್ದ ದಿನಾಂಕವನ್ನು ಮಾರ್ಚ್ 30ರವರೆಗೆ ವಿಸ್ತರಿಸಲಾಗಿದೆ. ರೈತ ಬಾಂಧವರು ಹಾಗೂ ಅಕ್ಕಿ ಗಿರಣಿಗಳ ಮಾಲಿಕರು ಈ ಅವಕಾಶದ ಲಾಭ ಪಡೆದುಕೊಳ್ಳುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.