ಶಿವಮೊಗ್ಗ

ಪ್ರತಿಯೊಂದು ಕ್ರೀಡೆಗೂ ಪ್ರೋತ್ಸಾಹ ಅಗತ್ಯ

Published On :

ಕ.ಪ್ರ ವಾರ್ತೆಶಿವಮೊಗ್ಗಮಾ. 23
ಪ್ರಸ್ತುತ ಕ್ರೀಡೆ ವ್ಯಾಪಾರವಾಗುತ್ತಿದ್ದು, ಕ್ರೀಡಾ ಮನೋಭಾವದಿಂದ ಆಡುತ್ತಿರುವವರ ಸಂಖ್ಯೆ ಕಡಿಮೆಯಾಗುತ್ತಿದೆ ಎಂದು ಅಂತರಾಷ್ಟ್ರೀಯ ಕಬ್ಬಡಿ ಕ್ರೀಡಾಪಟು ಎಚ್.ಎನ್. ಕೃಷ್ಣೇಗೌಡ ಆತಂಕ ವ್ಯಕ್ತಪಡಿಸಿದರು.
ನಗರದ ಕಮಲಾ ನೆಹರು ಸ್ಮಾರಕ ರಾಷ್ಟ್ರೀಯ ಮಹಿಳಾ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕ್ರೀಡಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು, ಇಂದು ಹೆಚ್ಚಿನ ಕ್ರೀಡಾಪಟುಗಳು ಕೇವಲ ಹಣಕ್ಕಾಗಿ ಆಡುತ್ತಿದ್ದಾರೆ. ಈ ಬೆಳವಣಿಗೆ ಕ್ರೀಡಾಕ್ಷೇತ್ರಕ್ಕೆ ಮಾರಕವಾಗಲಿದೆ ಎಂದರು.
ಪ್ರೋತ್ಸಾಹ ಅಗತ್ಯ: ಇತ್ತೀಚಿನ ದಿನಗಳಲ್ಲಿ ಕೇವಲ ಕ್ರಿಕೆಟ್‌ಗೆ ಹೆಚ್ಚಿನ ಪ್ರೊತ್ಸಾಹ ಸಿಗುತ್ತಿದ್ದು, ಮತ್ತಿತರರ ಕ್ರೀಡೆಗಳು ಮೂಲೆಗುಂಪಾಗುತ್ತಿವೆ. ಆದ್ದರಿಂದ ಪ್ರತಿಯೊಂದು ಕ್ರೀಡೆಯನ್ನು ಪ್ರೋತ್ಸಾಹ ನೀಡುವ ಮೂಲಕ ಬೆಳೆಸುವ ಅಗತ್ಯವಿದೆ ಎಂದರು.
ಕಾಲೇಜು ಶಿಕ್ಷಣ ಎಂಬುದು ವಿದ್ಯಾರ್ಥಿ ಜೀವನದ ಒಂದು ಮಹತ್ತರ ಘಟ್ಟ. ಈ ವೇಳೆ ತೆಗೆದುಕೊಳ್ಳುವ ತೀರ್ಮಾನ ನಿಮ್ಮ ಭವಿಷ್ಯವನ್ನೇ ಬದಲಿಸುತ್ತದೆ. ಹಾಗೇ ಈ ಕಾಲಘಟ್ಟದಲ್ಲಿ ನೀವು ಸ್ವಲ್ಪ ಎಚ್ಚರ ತಪ್ಪಿದರೂ ನಿಮ್ಮ ಜೀವನ ದುಸ್ತರವಾಗುತ್ತದೆ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.
ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಎಸ್.ವಿ. ತಿಮ್ಮಯ್ಯ, ಟಿ.ಆರ್. ಅಶ್ವತ್ಥನಾರಾಯಣ ಶೆಟ್ಟಿ, ಪ್ರಾಂಶುಪಾಲ ಪ್ರೊ. ಸತ್ಯನಾರಾಯಣ, ದೈಹಿಕ ಶಿಕ್ಷಣ ನಿರ್ದೇಶಕಿ ಎಚ್.ಎಲ್. ರುದ್ರಮ್ಮ ಮತ್ತಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.