ಮತದಾರರನ್ನು ಭ್ರಷ್ಟರನ್ನಾಗಿಸಿದ ಬಿಜೆಪಿ
ಕ.ಪ್ರ.ವಾರ್ತೆನರಸಿಂಹರಾಜಪುರಮಾ.23
ಕಳೆದ 50 ವರ್ಷಗಳಲ್ಲಿ ಕಾಂಗ್ರೆಸ್ ಅಥವಾ ಜೆಡಿಎಸ್ ಮತದಾರರನ್ನು ಭ್ರಷ್ಚರನ್ನಾಗಿ ಮಾಡಿರಲಿಲ್ಲ. ಆದರೆ, ಕೇವಲ 5 ವರ್ಷದ ಆಳ್ವಿಕೆಯಲ್ಲಿ ಬಿಜೆಪಿ ಮತದಾರರನ್ನು ಭ್ರಷ್ಟರನ್ನಾಗಿ ಮಾಡಿತು ಎಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಚ್.ಟಿ. ರಾಜೇಂದ್ರ ಆರೋಪಿಸಿದರು.
ಅವರು ಶನಿವಾರ ಪಟ್ಟಣದ ಟಿಎಪಿಸಿಎಂಎಸ್ ಮುಂಭಾಗದ ಸಮುದಾಯ ಭವನದಲ್ಲಿ ನಡೆದ ಜೆಡಿಎಸ್ನಿಂದ ಪಪಂ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಎಲ್ಲಾ 11 ಅಭ್ಯರ್ಥಿಗಳನ್ನು ಅಭಿನಂದಿಸಿ ಮಾತನಾಡಿದರು.
ನ.ರಾ.ಪುರ ಪಟ್ಟಣ ಪಂಚಾಯ್ತಿ ಚುನಾವಣೆಯಲ್ಲಿ ಜೆಡಿಎಸ್ಗೆ 1,195 ಮತದಾರರು ಮತ ನೀಡಿದ್ದಾರೆ. ಈಗ ಜೆಡಿಎಸ್ ಜವಬ್ದಾರಿಯೂ ಹೆಚ್ಚಾಗಿದೆ. ನಮಗೆ ಮತ ನೀಡಿದವರ ಋಣ ತೀರಿಸುವ ಜವಬ್ದಾರಿ ನಮ್ಮ ಮೇಲಿದೆ. ಎಚ್.ಡಿ. ಕುಮಾರಸ್ವಾಮಿ ಅವರ ಮೇಲೆ ಜೆಡಿಎಸ್ ಕಾರ್ಯಕರ್ತರಿಗೆ ಕೇವಲ ಅಭಿಮಾನವಿದ್ದರೆ ಸಾಲದು. ಅವರನ್ನು ಮುಖ್ಯಮಂತ್ರಿಯಾಗಿ ಮಾಡುವುದೇ ಜೆಡಿಎಸ್ ಕಾರ್ಯಕರ್ತರ ಗುರಿಯಾಗಬೇಕು ಎಂದರು.
ಪ್ರಜಾಪ್ರಭುತ್ವದ ಕೊಲೆ: ಕಳೆದ 5 ವರ್ಷದಲ್ಲಿ ಬಿಜೆಪಿ ಸರ್ಕಾರ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದೆ. ಆಪರೇಷನ್ ಕಮಲದಂತಹ ಕೀಳು ಮಟ್ಟದ ರಾಜಕೀಯ ಮಾಡಿದೆ. ಈ ಬಾರಿಯ ವಿಧಾನ ಸಭೆಯ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿಯನ್ನು ಸೋಲಿಸುವ ಮೂಲಕ ಸರಿಯಾದ ಪಾಠ ಕಲಿಸಬೇಕಾಗಿದೆ ಎಂದರು.
ಜೆಡಿಎಸ್ ರಾಜ್ಯ ಯುವ ಮೋರ್ಚಾ ಕಾರ್ಯದರ್ಶಿ ಕಣುವೆ ವಿನಯ್ ಮಾತನಾಡಿ, ಶೃಂಗೇರಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಚ್.ಟಿ. ರಾಜೇಂದ್ರ ಅವರು ಸರಳ, ಸಜ್ಜನ ಅಭ್ಯರ್ಥಿಯಾಗಿದ್ದಾರೆ. ಜೆಡಿಎಸ್ ಕಾರ್ಯಕರ್ತರು ಅವರನ್ನು ಗೆಲ್ಲಿಸುವ ಪಣ ತೊಡಬೇಕು. ಮತದಾರರು ಮತದಾನ ಮಾಡುವಾಗ ಸೂಕ್ತ ಅಭ್ಯರ್ಥಿಯನ್ನು ಗೆಲ್ಲಿಸಬೇಕು. ಹಣ, ಹೆಂಡಗಳಿಗೆ ಮತಗಳನ್ನು ಮಾರಿಕೊಳ್ಳದೆ ಜನರ ಧ್ವನಿಯಾಗಿ ಕೆಲಸ ಮಾಡುವ ಅಭ್ಯರ್ಥಿಗಳಿಗೆ ಮತನೀಡಬೇಕು ಎಂದು ಕರೆ ನೀಡಿದರು.
ಜೆಡಿಎಸ್ ಕ್ಷೇತ್ರ ಅಧ್ಯಕ್ಷ ಹೂವಪ್ಪಗೌಡ, ಜೆಡಿಎಸ್ ಜಿಲ್ಲಾ ಮುಖಂಡ ತಲಕಾನೆ ರಾಜೇಂದ್ರ, ಜೆಡಿಎಸ್ ನ ಗರ ಘಟಕದ ಅಧ್ಯಕ್ಷ ಸತ್ಯನಾರಾಯಣಶ್ರೇಷ್ಠಿ ಹಾಗೂ ಪಪಂ ಚುನಾವಣೆಯಲ್ಲಿ ಜೆಡಿಎಸ್ನಿಂದ ಸ್ಪರ್ಧಿಸಿದ್ದ ಎಲ್ಲಾ 11 ಅಭ್ಯರ್ಥಿಗಳು ಉಪಸ್ಥಿತರಿದ್ದರು. ಪ್ರಕಾಶ್ ಸ್ವಾಗತಿಸಿದರು. ಶ್ರೀಕಾಂತ್ ನಿರೂಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

