ಶಿವಮೊಗ್ಗ

ರೋಗಗಳ ಬಗ್ಗೆ ತಿಳಿವಳಿಕೆ ಕೊರತೆ: ಡಾ. ನಡಹಳ್ಳಿ ರವಿ

Published On :

ಸಾಗರ: ಕ್ಯಾನ್ಸರ್‌ನಂತಹ ಮಾರಕ ಕಾಯಿಲೆಯ ಜನರಿಗೆ ತಿಳಿವಳಿಕೆಯ ಕೊರತೆಯಿದೆ ಎಂದು ಶಿವಮೊಗ್ಗ ಮಲ್ನಾಡು ಕ್ಯಾನ್ಸರ್ ಆಸ್ಪತ್ರೆಯ ವೈದ್ಯ ಡಾ. ನಡಹಳ್ಳಿ ರವಿ ಹೇಳಿದರು.
ಇಲ್ಲಿನ ಉಪವಿಭಾಗೀಯ ಆಸ್ಪತ್ರೆಯಲ್ಲಿ ಶನಿವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೆಲವು ಸಂಘಟನೆಗಳ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ಕ್ಯಾನ್ಸರ್ ರೋಗ ಪತ್ತೆ ಹಾಗೂ ಸಲಹಾ ಶಿಬಿರ ಉದ್ಘಾಟಿಸಿ, ಕ್ಯಾನ್ಸರ್ ಇದೆ ಎಂದು ತಿಳಿದ ತಕ್ಷಣ ಜನರು ಭಯದಿಂದ ಕಾಯಿಲೆ ಉಲ್ಭಣಗೊಳ್ಳುವ ಸಾಧ್ಯತೆ ಇದೆ ಎಂದು ಅಭಿಪ್ರಾಯಪಟ್ಟರು.
ತಾಲೂಕು ಆರೋಗ್ಯಾಧಿಕಾರಿ ಡಾ.ಕೆ.ಪಿ. ಅಚ್ಚುತ್, ಕ್ಯಾನ್ಸರ್, ಮಧುಮೇಹ, ಹೃದಯ ಸಂಬಂಧಿ ಕಾಯಿಲೆಗಳ ಬಗ್ಗೆ ಜನರು ಜಾಗೃತಿ ಹೊಂದಬೇಕು. ಉತ್ತಮ ಆಹಾರ, ವ್ಯಾಯಾಮ, ನಾರಿನಾಂಶ ಇಲ್ಲದ ಆಹಾರ ಸೇವನೆ ಮಾಡಿದರೆ, ವ್ಯಸನಮುಕ್ತರಾದರೆ ಕಾಯಿಲೆಗಳಿಂದ ದೂರ ಇರಲು ಸಾಧ್ಯ ಎಂದು ತಿಳಿಸಿದರು.
ಸಿವಿಲ್ ಸರ್ಜನ್ ಡಾ. ಬಿ.ಜಿ. ಸಂಗಂ, ಡಾ. ಶಾಹೀನಾ, ಸುಮಾ, ಧರ್ಮಪ್ಪ, ಶಂಕರ್, ಆರೋಗ್ಯ ಇಲಾಖೆ ನೌಕರರ ಒಕ್ಕೂಟದ ಅಧ್ಯಕ್ಷ ಬಿ.ಎಸ್.ಪ್ರಭಾಕರ್, ವೈ. ಮೋಹನ್ ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.