ಬೃಹತ್ ಉದ್ಯಮವಾಗುತ್ತಿರುವ ಹೈನುಗಾರಿಕೆ
ಕ.ಪ್ರ.ವಾರ್ತೆ, ಶಿಕಾರಿಪುರ, ಮಾ.24
ಜಿಲ್ಲೆಯಲ್ಲಿಯೇ ಅತಿ ಹೆಚ್ಚು ಹಾಲು ಉತ್ಪಾದಿಸುವ ತಾಲೂಕು ಕೇಂದ್ರವಾಗಿ ಶಿಕಾರಿಪುರ ಹೆಚ್ಚಿನ ಮಾನ್ಯತೆ ಪಡೆದಿದೆ ಎಂದು ಶಿವಮೊಗ್ಗ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕ ಟಿ. ಶಿವಶಂಕರಪ್ಪ ತಿಳಿಸಿದರು.
ಗುರುವಾರ ತಾಲೂಕಿನ ಮಾರವಳ್ಳಿ ಗ್ರಾಮದಲ್ಲಿನ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ಹೈನುಗಾರಿಕೆ ಇತ್ತೀಚಿನ ದಿನದಲ್ಲಿ ಬಹು ದೊಡ್ಡ ಉದ್ಯಮವಾಗಿ ಹೊರಹೊಮ್ಮಿದ್ದು, ಸರ್ಕಾರ ಹೈನುಗಾರಿಕೆಯತ್ತ ಕೃಷಿಕರನ್ನು ಪ್ರೇರೇಪಿಸಲು ಹೆಚ್ಚಿನ ರೀತಿಯಲ್ಲಿ ಪ್ರೋತ್ಸಾಹ ನೀಡುತ್ತಿದೆ ಎಂದರು.
ಉತ್ತಮ ಕಾರ್ಯನಿರ್ವಹಣೆ: ಕೃಷಿಯ ಜತೆಗೆ ಜತೆಗೆ ಪರ್ಯಾಯವಾಗಿ ಹೈನುಗಾರಿಕೆ ಮೂಲಕ ಗ್ರಾಮೀಣ ಭಾಗದಲ್ಲಿ ಇತ್ತೀಚಿನ ದಿನದಲ್ಲಿ ಸಹಕಾರಿ ಸಂಘವನ್ನು ಅವಲಂಬಿಸಿ ಗ್ರಾಮಸ್ಥರು ಆರ್ಥಿಕ ಅಭಿವೃದ್ಧಿ ಹೊಂದುತ್ತಿದ್ದು, ಸಹಕಾರಿ ಸಂಘಗಳ ಉತ್ತಮ ಕಾರ್ಯನಿರ್ವಹಣೆಯಿಂದಾಗಿ ಹೈನುಗಾರಿಕೆಗೆ ಹೆಚ್ಚಿನ ಮಹತ್ವ ದೊರೆತಿದೆ ಎಂದರು. ಪ್ರಜಾಪ್ರಭುತ್ವದಲ್ಲಿ ಸಹಕಾರಿ ಸಂಘಗಳ ಪಾತ್ರ ಬಹು ಮುಖ್ಯವಾಗಿದ್ದು, ಸಹಕಾರಿ ಕ್ಷೇತ್ರವನ್ನು ರಾಜಕೀಯ ವ್ಯವಸ್ಥೆಯಿಂದ ಮುಕ್ತಗೊಳಿಸುವಂತೆ ಮನವಿ ಮಾಡಿದರು.
ಜಿಪಂ ಸದಸ್ಯೆ ಶಾಂತಮ್ಮ ಮಾತನಾಡಿ, ಮಹಿಳೆಯರ ಸ್ವಾವಲಂಬನೆಗೆ ಸಹಕಾರಿ ಸಂಘಗಳ ಪಾತ್ರ ಬಹು ಮುಖ್ಯವಾಗಿದ್ದು, ಸಹಕಾರಿ ಸಂಘಗಳ ಮೂಲಕ ಹಲವು ಕುಟುಂಬಗಳು ಆರ್ಥಿಕವಾಗಿ ಸದೃಢವಾಗಿದೆ ಎಂದ ಅವರು, ಹಾಲು ಉತ್ಪಾದಕರ ಸಹಕಾರಿ ಸಂಘಗಳು ಪ್ರತಿ ಗ್ರಾಮದಲ್ಲಿಯೂ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದರು.
ಪ್ರಮುಖ ಪಾತ್ರ: ಅಧ್ಯಕ್ಷತೆ ವಹಿಸಿದ್ದ ಮಾರವಳ್ಳಿ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಎಂ.ಎಸ್. ಸತ್ಯನಾರಾಯಣರಾವ್ ಮಾತನಾಡಿ, ಕೃಷಿ ಕ್ಷೇತ್ರ ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದು, ಗ್ರಾಮೀಣರ ಆರ್ಥಿಕ ಸ್ವಾವಲಂಬನೆಗೆ ದೊಡ್ಡ ಕೊಡುಗೆ ನೀಡುತ್ತಿದೆ ಎಂದರು.
ಸರ್ಕಾರ ಹೈನುಗಾರಿಕೆಗೆ ಹೆಚ್ಚಿನ ಉತ್ತೇಜನ ದೊರಕಿಸಲು ಪ್ರತಿ ಲೀಟರ್ ಹಾಲಿಗೆ ನೀಡುತ್ತಿರುವ ರು. 2 ಪ್ರೋತ್ಸಾಹ ಧನವನ್ನು ಯಾವುದೇ ಲಂಚದ ಆಮಿಷವಿಲ್ಲದೆ ಪ್ರತಿ ಫಲಾನುಭವಿಗಳಿಗೆ ತಲುಪಿಸಲಾಗುತ್ತಿದೆ. ಸರ್ಕಾರದ ಸೌಲಭ್ಯ ಸದುಪಯೋಗಪಡಿಸಿಕೊಂಡು ಪ್ರತಿಯೊಬ್ಬರೂ ಆರ್ಥಿಕವಾಗಿ ಸಬಲರಾಗಬೇಕು ಎಂದು ಅವರು ಸೂಚಿಸಿದರು.
ಶಿವಮೊಗ್ಗ ಹಾಲು ಉತ್ಪಾದಕರ ಒಕ್ಕೂಟದ ವ್ಯವಸ್ಥಾಪಕ ಡಾ.ಕೆ.ಸಿ. ಶಿವಶಂಕರ್, ಉಪವ್ಯವಸ್ಥಾಪಕ ಕೆ.ಆರ್,ರ್. ಮುರಳೀಧರ್, ವಿಸ್ತರಣಾಧಿಕಾರಿ ರಾಮು, ತಾಪಂ ಅಧ್ಯಕ್ಷ ಹನುಮಂತಪ್ಪ, ಗ್ರಾಮದ ಮುಖಂಡ ರುದ್ರಗೌಡ್ರು, ಅಡಿಕೆ ಬೆಳೆಗಾರರ ಸಂಘದ ನಿರ್ದೇಶಕ ಉಜ್ಜಪ್ಪ, ರವಿ, ಕಿರಣಕುಮಾರ್, ಮಂಜಪ್ಪ, ಸುಶೀಲಮ್ಮ, ಕೌಶಲಮ್ಮ ಮೊದಲಾದವರು ಉಪಸ್ಥಿತರಿದ್ದರು.
ಪ್ರದೀಪಕುಮಾರ್ ಸ್ವಾಗತಿಸಿದರು. ಮಹೇಶಪ್ಪ ನಿರೂಪಿಸಿದರು. ಸುಮಂತ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

