ಶಿವಮೊಗ್ಗ

'ಕ್ರೀಡೆಯಿಂದ ಮಾನಸಿಕ ನೆಮ್ಮದಿ'

Published On :

ಕ.ಪ್ರ.ವಾರ್ತೆ, ಶಿವಮೊಗ್ಗ,   ಮಾ.24
ಕ್ರೀಡೆಯಿಂದ ದೈಹಿಕವಾಗಿಯಷ್ಟೇ ಅಲ್ಲದೆ ಮಾನಸಿಕವಾಗಿಯೂ ಹಲವಾರು ರೀತಿಯ ಉಪಯೋಗವಿದೆ. ಮಾನಸಿಕ ಒತ್ತಡ ಕಡಿಮೆ ಮಾಡಿಕೊಳ್ಳಲು ಕ್ರೀಡೆ ಸಹಕಾರಿ. ಅದು ಮನುಷ್ಯನಿಗೆ ನೆಮ್ಮದಿ ನೀಡುತ್ತದೆ ಎಂದು  ಕಾಂಗ್ರೆಸ್ ಮುಖಂಡ ಮಂಜುನಾಥ ಭಂಡಾರಿ ಅಭಿಪ್ರಾಯಪಟ್ಟರು.
ಜಿಲ್ಲಾ ಥ್ರೋಬಾಲ್ ಸಂಸ್ಥೆಯು ನೆಹರೂ ಕ್ರೀಡಾಂಗಣದಲ್ಲಿ ಹಮ್ಮಿಕೊಂಡ ಜಿಲ್ಲಾ ಮಟ್ಟದ ಥ್ರೋಬಾಲ್ ಪಂದ್ಯಾವಳಿ ಉದ್ಘಾಟನೆ ನೆರವೇರಿಸಿ ಮಾತನಾಡಿ, ಕ್ರೀಡೆಯಲ್ಲಿ ಗೆಲ್ಲುವುದು ಮತ್ತು ಸೋಲುವುದು ಪ್ರಮುಖ  ಅಂಶವಲ್ಲ. ಭಾಗವಹಿಸುವುದೇ ಮುಖ್ಯ ಎಂದರು.
ಸಮಸ್ಯೆಗಳಿಂದ ಮುಕ್ತಿ: ಜನರು ತಮ್ಮದೇ ಆದ ಒತ್ತಡಕ್ಕೆ ಒಳಗಾಗಿರುತ್ತಾರೆ. ಈ ಒತ್ತಡ ಕಡಿಮೆ ಮಾಡಿಕೊಳ್ಳಲು ಕ್ರೀಡೆಯಲ್ಲಿ ತೊಡಗಿಕೊಳ್ಳುವುದು ಮುಖ್ಯ. ಇದರಿಂದ ಮಾನಸಿಕವಾಗಿಯಲ್ಲದೆ ದೈಹಿಕವಾಗಿಯೂ ಹೊಸತನ ಸಿಗುತ್ತದೆ. ವಾರದಲ್ಲಿ ಕನಿಷ್ಠ ಒಂದೆರೆಡು ಬಾರಿಯಾದರೂ ಕ್ರೀಡೆಯಲ್ಲಿ ತೊಡಗಬೇಕು. ಕ್ರೀಡೆಯಲ್ಲಿ ತೊಡಗುವುದರಿಂದ ಅರಿವಿಗೆ ಬಾರದೆ ಅನೇಕ ಸಮಸ್ಯೆಗಳಿಂದ ಮುಕ್ತಿ ಪಡೆಯಬಹುದೆಂದರು.
ಪ್ರಶಸ್ತಿ ಬಯಸದೇ ಉತ್ತಮ ರೀತಿಯಲ್ಲಿ ಪ್ರದರ್ಶನ ತೋರಿ ಸಾಧನೆ ಮೆರೆಯಿರಿ ಎಂದು ಇದೇ ಸಂದರ್ಭದಲ್ಲಿ ಕ್ರೀಡಾಳುಗಳಿಗೆ ಕರೆ ನೀಡಿದರು.
ಕಾಂಗ್ರೆಸ್ ಮುಖಂಡ ಎಸ್.ಪಿ. ದಿನೇಶ್ ಮಾತನಾಡಿ ಕ್ರೀಡಾಕೂಟಕ್ಕೆ ಶುಭಕೋರಿದರು. ಒಲಿಂಪಿಕ್  ಅಸೋಸಿಯೇಷನ್,ನ ಶಶಿ, ಅಸ್ಮತ್ ಪಾಶ, ಇಂದ್ರಾಣಿ, ನಾಗರಿಕ ಹಿತರಕ್ಷಣಾ ವೇದಿಕೆಗಳ ಒಕ್ಕೂಟದ ವಸಂತ ಕುಮಾರ್ ಮತ್ತಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.