ಕ್ಷಯ ರೋಗ ಉಚಿತ ಮಾಹಿತಿ ಕಾರ್ಯಕ್ರಮ
ಕ.ಪ್ರ.ವಾರ್ತೆ, ಶಿಕಾರಿಪುರ, ಮಾ.25
ವಿಶ್ವ ಕ್ಷಯ ರೋಗ ದಿನಾಚರಣೆ ಅಂಗವಾಗಿ ಪಟ್ಟಣದ ಸಂತೆ ಮೈದಾನದ ಸಮೀಪ ಕರ್ನಾಟಕ ಹೆಲ್ತ್ ಪ್ರಮೋಶನ್ ಟ್ರಸ್ಟ್ ಬೆಂಗಳೂರು ಇವರ ವತಿಯಿಂದ ಸಾರ್ವಜನಿಕರಿಗೆ ಉಚಿತವಾಗಿ ರೋಗದ ಬಗ್ಗೆ ಮಾಹಿತಿ ನೀಡುವ ಕಾರ್ಯಕ್ರಮವನ್ನು ಸೋಮವಾರ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮ ಉದ್ಘಾಟಿಸಿದ ಪುರಸಭಾ ಸದಸ್ಯ ಮಹೇಶ್ ಹುಲ್ಮಾರ್ ಮಾತನಾಡಿ, ಭಯಾನಕವಾಗಿ ಮಾನವ ಕುಲವನ್ನು ಕಾಡುತ್ತಿರುವ ಕ್ಷಯ ರೋಗವನ್ನು ಸಂಪೂರ್ಣ ಹತೋಟಿಗೆ ತರಲು ಕೇಂದ್ರ ಸರ್ಕಾರ ಹಲವು ಯೋಜನೆ ರೂಪಿಸಿದ್ದು, ಈ ದಿಸೆಯಲ್ಲಿ ಎಲ್ಲಾ ಸರ್ಕಾರ ಆಸ್ಪತ್ರೆಗಳಲ್ಲಿ ಕ್ಷಯ ರೋಗ ನಿಯಂತ್ರಣ ಕೇಂದ್ರವನ್ನು ತೆರೆದಿದೆ ಎಂದರು.
ಉಚಿತ ಚಿಕಿತ್ಸೆ: ಈ ಮೂಲಕ ರೋಗಿಗಳಿಗೆ ಉಚಿತವಾಗಿ ಚಿಕಿತ್ಸೆ ದೊರಕಿಸಲಾಗಿದ್ದು, ಅತೀವ ಕೆಮ್ಮು, ಕಫದಿಂದ ಬಳಲುವ ರೋಗಿಗಳು ನಿರ್ಲಕ್ಷ್ಯ ವಹಿಸದೆ ಚಿಕಿತ್ಸೆಯ ಪ್ರಯೋಜನ ಪಡೆಯಲು ಸೂಚಿಸಿದರು.
ತಾಲೂಕಿನಾದ್ಯಂತ ಕ್ಷೇತ್ರ ಪರ್ಯಟನೆ ನಡೆಸಿ ಮನೆ ಮನೆಗೆ ಭೇಟಿ ನೀಡಲಿದ್ದು, ಮಾಹಿತಿ ಹಾಗೂ ಪ್ರಯೋಜನ ಪಡೆಯಲು ಸೂಚಿಸಿದರು.
ಟ್ರಸ್ಟ್ನ ಉಷಾ ಮಾತನಾಡಿ, ಕ್ಷಯ ರೋಗ ಮೈಕೋ ಬ್ಯಾಕ್ಟೀರಿಯಂ ಟ್ಯುಬರ್ ಕ್ಯುಲೋಸಿಸ್ ಎಂಬ ಸೂಕ್ಷ್ಮಾಣು ರೋಗಾಣುವಿನಿಂದ ಹರಡಲಿದ್ದು, ರೋಗಿ ಕೆಮ್ಮಿದಾಗ, ಸೀನಿದಾಗ ಹೊರಬಂದ ತುಂತುರು ಗಳಿಂದ ಗಾಳಿಯ ಮೂಲಕ ಆರೋಗ್ಯವಂತ ವ್ಯಕ್ತಿಯ ಶ್ವಾಸಕೋಶ ಸೇರ್ಪಡೆಗೊಂಡು ಸೋಂಕು ಉಂಟಾಗಲಿದೆ ಎಂದರು. ಟ್ರಸ್ಟ್ನ ಪ್ರಶಾಂತ್, ಸುರೇಶ್ ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

