ರಕ್ತದಾನದಿಂದ ಹೃದಯಾಘಾತಕ್ಕೆ ತಡೆ
ಕ.ಪ್ರ ವಾರ್ತೆ, ಶಿವಮೊಗ್ಗ, ಮಾ.25
ನಿಯಮಿತವಾಗಿ ರಕ್ತದಾನ ಮಾಡುವುದರಿಂದ ಶೇ.80ರಷ್ಟು ಹೃದಯಾಘಾತವನ್ನು ತಡೆಗಟ್ಟಬಹುದು ಹಾಗೂ ಉತ್ತಮ ಆರೋಗ್ಯ ಮತ್ತು ನೆನಪಿನ ಶಕ್ತಿ ವೃದ್ಧಿಯಾಗುತ್ತದೆ ಎಂದು ಅಮೆರಿಕಾದ ವಿಜ್ಞಾನಿಗಳ ಇತ್ತೀಚಿನ ಸಂಶೋಧನಾ ವರದಿ ವಿವರಿಸಿದೆ ಎಂದು ಭಾರತೀಯ ರೆಡ್ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ಡಾ. ವಿ.ಎಲ್.ಎಸ್. ಕುಮಾರ್ ತಿಳಿಸಿದರು.
ಸ್ವಯಂ ಪ್ರೇರಿತ ರಕ್ತದಾನಿಗಳ ಸೇವಾ ಸಂಸ್ಥೆ, ರೋಟರಿ ಕ್ಲಬ್ ಶಿವಮೊಗ್ಗ ಜ್ಯೂಬಿಲಿ, ರಾಷ್ಟ್ರೀಯ ಶಿಕ್ಷಣ ಸಮಿತಿ, ಭಾರತೀಯ ರೆಡ್ಕ್ರಾಸ್ ಸಂಸ್ಥೆ, ಜವಹರ್ಲಾಲ್ ನೆಹರೂ ರಾಷ್ಟ್ರೀಯಯ ತಾಂತ್ರಿಕ ಮಹಾವಿದ್ಯಾಲಯದ ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ರಕ್ತದಾನದ ಅರಿವು ಮೂಡಿಸಲು ಹಾಗೂ ಉಚಿತವಾಗಿ ರಕ್ತದ ಗುಂಪು ವಿಂಗಡನೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಒತ್ತಡದ ಜೀವನ: ರಕ್ತಕ್ಕೆ ಪರ್ಯಾಯವಾದ ವಸ್ತುವಿಲ್ಲ ಮತ್ತು ರಕ್ತವನ್ನು ಕೃತಕವಾಗಿ ಉತ್ಪಾದಿಸಲು ಸಾಧ್ಯವಿಲ್ಲ. 18ವರ್ಷದಿಂದ 60 ವರ್ಷದೊಳಗಿನ ಎಲ್ಲಾ ಆರೋಗ್ಯವಂತ ವ್ಯಕ್ತಿಗಳು ರಕ್ತದಾನ ಮಾಡಬಹುದು. ಇಂದಿನ ಆಧುನಿಕ ಯುಗದಲ್ಲಿ ವಿದ್ಯಾರ್ಥಿಗಳು ಒತ್ತಡದ ಜೀವನದಲ್ಲಿ ಬಹು ಬೇಗ ಆರೋಗ್ಯ ಸ್ಥಿತಿಯನ್ನು ಹಾಳುಮಾಡಿಕೊಳ್ಳುತ್ತಿದ್ದು ತುಂಬಾ ವಿಷಾದನೀಯ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಉತ್ತಮ ಜೀವನ ಶೈಲಿ ಹಾಗೂ ಉತ್ತಮ ಆರೋಗ್ಯ ಕ್ರಮ ಮತ್ತು ನಿರಂತರ ವ್ಯಾಯಮ ಮಾಡುವುದರಿಂದ, ದೀರ್ಘಯುಷಿಗಳಾಗಬಹುದು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸ್ವಯಂಪ್ರೇರಿತ ರಕ್ತದಾನಿಗಳ ಅಧ್ಯಕ್ಷ ಎ.ಎಮ್. ಸುರೇಶ್ ವಹಿಸಿದ್ದರು. ಇದೇ ಸಂದರ್ಭದಲ್ಲಿ ಶಿವಮೊಗ್ಗ ನಗರದ 3 ಬ್ಲಡ್ ಬ್ಯಾಂಕುಗಳ ಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಬ್ಲಡ್ ಗ್ರೂಪಿಂಗ್ ಮಾಡಲಾಯಿತು.
ವೇದಿಕೆಯಲ್ಲಿ ರೋಟರಿ ಜ್ಯೂಬಿಲಿ ಕ್ಲಬ್ಬ್ನ ಅಧ್ಯಕ್ಷ ನರೇಶ್ಜೈನ್, ಕಾರ್ಯದರ್ಶಿ ರೇವಣ್ಣ ಸಿದ್ದಪ್ಪ, ಬಾಲಚಂದರ್, ರಕ್ತದಾನಿ ಸೇವಾ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಜಿ. ವಿಜಯಕುಮಾರ್, ಧರಣೇಂದ್ರ ದಿನಕರ್, ಡಾ. ಸಂಜಯ್, ಎನ್.ಎಸ್.ಎಸ್. ಅಧಿಕಾರಿ ಮಹೇಶ್ವರಪ್ಪ, ಬಸವರಾಜ್ ಹಾಗೂ ಅಶೋಕ್ ನಿರ್ದೇಶಕ ಲೋಕೇಶ್ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

