ಪರೀಕ್ಷಾ ಕೇಂದ್ರದಸುತ್ತ ಪ್ರತಿಬಂಧಕಾಜ್ಞೆ
ಶಿವಮೊಗ್ಗ: ಏಪ್ರಿಲ್ 2013ರ ಎಸ್ಎಸ್ಎಲ್ಸಿ ಪರೀಕ್ಷೆಗಳು ಏಪ್ರಿಲ್ 1ರಿಂದ 10ರ ವರೆಗೆ ಜಿಲ್ಲೆಯ ಎಲ್ಲಾ ತಾಲೂಕುಗಳ 90 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಈ ಪರೀಕ್ಷೆಯಲ್ಲಿ ಯಾವುದೇ ರೀತಿಯ ಅವ್ಯವಹಾರಗಳು ನಡೆಯದಿರಲು ಮತ್ತು ಪರೀಕ್ಷಾ ಕೇಂದ್ರದ ಸುತ್ತಲೂ ಶಾಂತಿ ಸುವ್ಯವಸ್ಥೆ ಕಾಪಾಡಿಕೊಂಡು ಬರುವ ನಿಟ್ಟಿನಲ್ಲಿ ಪರೀಕ್ಷಾ ಕೇಂದ್ರಗಳ 200 ಮೀ. ಪ್ರದೇಶದ ವ್ಯಾಪ್ತಿಯಲ್ಲಿ ಪರೀಕ್ಷೆಗಳು ನಡೆಯುವ ದಿನಾಂಕಗಳಂದು ಪ್ರತಿದಿನ ಬೆಳಿಗ್ಗೆ 8ರಿಂದ ಸಂಜೆ 6 ಗಂಟೆಯವರೆಗೆ ಪ್ರತಿಬಂಧಕಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ ವಿಪುಲ್ ಬನ್ಸಲ್ ಆದೇಶ ಹೊರಡಿಸಿದ್ದಾರೆ.
ಈ ಸಂದರ್ಭದಲ್ಲಿ ಪರೀಕ್ಷಾರ್ಥಿಗಳು ಹಾಗೂ ಸಿಬ್ಬಂದಿ, ಅಧಿಕಾರಿಗಳನ್ನು ಹೊರತುಪಡಿಸಿ, ಇತರೆ ವ್ಯಕ್ತಿಗಳು ಪರೀಕ್ಷಾ ಕೇಂದ್ರ ಪ್ರವೇಶಿಸುವುದನ್ನು ನಿಷೇಧಿಸಿದೆ. ಪರೀಕ್ಷಾ ಅವಧಿಯಲ್ಲಿ ಕೇಂದ್ರದ ಸುತ್ತಮುತ್ತಲಿರುವ ಟೈಪಿಂಗ್, ಝೆರಾಕ್ಸ್ ಮತ್ತು ಫ್ಯಾಕ್ಸ್ ಅಂಗಡಿಗಳು ತೆರೆಯುವುದನ್ನು ನಿಷೇಧಿಸಿರುವುದಾಗಿ ಜಿಲ್ಲಾಧಿಕಾರಿ ತಮ್ಮ ಆದೇಶದಲ್ಲಿತಿಳಿಸಿದ್ದಾರೆ.
ಸಂಗಮೇಶ್ವರಗೆಕಾಂಗ್ರೆಸ್ ಟಿಕೆಟ್
ಭದ್ರಾವತಿ:ಶಾಸಕ ಬಿ.ಕೆ. ಸಂಗಮೇಶ್ವರ ಅವರಿಗೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಭದ್ರಾವತಿ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ಕಾಂಗ್ರೆಸ್ಹೈಕಮಾಂಡ್ ಅನುಮೋದಿಸಿರುವ ಅಂತಿಮ ಪಟ್ಟಿಯಲ್ಲಿ ಅನುಮತಿ ದೊರಕಿದೆ ಎಂದು ಅವರ ಕಚೇರಿ ಮೂಲಗಳು ತಿಳಿಸಿವೆ. ಭದ್ರಾವತಿಯಲ್ಲಿ ಸಂಗಮೇಶ್ವರ್ ಅವರಿಗೆ ಕಾಂಗ್ರೆಸ್ ಟಿಕೆಟ್ ದೊರಕುವುದಿಲ್ಲವೆಂಬ ಬಗ್ಗೆ ಹಲವಾರು ಊಹಾಪೋಹಗಳು ಹಬ್ಬಿದ್ದವು. ಶಾಸಕ ಬಿ.ಕೆ. ಸಂಗಮೇಶ್ವರ್ ಅವುಗಳನ್ನು ತಳ್ಳಿಹಾಕಿ ಹಾಲಿ ಶಾಸಕರುಗಳಿಗೆ ಟಿಕೆಟ್ ನೀಡಬೇಕೆಂದು ಹೈಕಮಾಂಡ್ ತೀರ್ಮಾನ ಮಾಡಿದ್ದಾರೆಂದು ಜನರಿಗೆ ಹೇಳುತ್ತಲೇ ಬಂದಿದ್ದರೂ ಸಿ.ಎಂ. ಇಬ್ರಾಹಿಂಗೆ ಟಿಕೆಟ್ ನೀಡುತ್ತಾರೆಂಬ ಬಗ್ಗೆ ಬಲವಾದ ವದಂತಿಗಳು ಹಬ್ಬಿ ದ್ದವು. ಈಗ ಕಾಂಗ್ರೆಸ್ ಪಕ್ಷದ ಅಂತಿಮ ಪಟ್ಟಿ ಸಿದ್ಧವಾಗಿದ್ದು ಅದರಲ್ಲಿ ಸಂಗಮೇಶ್ವರ್ ಅವರ ಹೆಸರಿರುವುದು ದೃಢಪಟ್ಟಿದೆ.
ಎಂ.ಜೆ. ಅಪ್ಪಾಜಿ ಜೆಡಿಎಸ್ ಅಭ್ಯರ್ಥಿ: ಜೆಡಿಎಸ್ ಅಭ್ಯರ್ಥಿಯಾಗಿ ಮಾಜಿ ಶಾಸಕ ಎಂ.ಜೆ. ಅಪ್ಪಾಜಿ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದ್ದು ಅವರು ಈಗಾಗಲೇ ಚುನಾವಣೆಯ ತಯಾರಿಯಲ್ಲಿದ್ದಾರೆ. ನಗರಸಭಾ ಚುನಾವಣೆಯಲ್ಲಿ ಜೆಡಿಎಸ್ 35 ಸ್ಥಾನಗಳಲ್ಲಿ 23 ಸ್ಥಾನಗಳನ್ನು ಗೆದ್ದಿರುವುದು ಅವರಿಗೆ ಆನೆಬಲ ಬಂದಂದಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಅಪ್ಪಾಜಿ ಅವರೇ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

