ಶಿವಮೊಗ್ಗ

ಪಡಿತರ ಚೀಟಿ ವಿತರಣೆ ಸರಳೀಕರಣಕ್ಕೆ ಆಗ್ರಹ

Published On :

ಕ.ಪ್ರ.ವಾರ್ತೆ, ಶಿವಮೊಗ್ಗ, ಮಾ. 26  ಹೊಸ ಪಡಿತರ ಚೀಟಿ ವಿತರಣೆ ವ್ಯವಸ್ಥೆಯಲ್ಲಿನ ನಿಯಮ ಸರಳೀಕರಣಕ್ಕೆ ಆಗ್ರಹಿಸಿ ಜಿಲ್ಲಾ ಯುವ ಜೆಡಿಎಸ್ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು.
  ರಾಜ್ಯ ಸರ್ಕಾರ ಪಡಿತರ ಚೀಟಿ ಹೊಂದಿರದ ಜನರಿಗೆ ಹೊಸ ಪಡಿತರ ಚೀಟಿ ನೀಡಲು ಆದೇಶ ಹೊರಡಿಸಿದ್ದು, ಈ ವ್ಯವಸ್ಥೆಯಲ್ಲಿ ಅತ್ಯಂತ ಕಠಿಣ ನಿಯಾಮವಳಿಗಳನ್ನು ಮಾಡಲಾಗಿದೆ. ಇದ್ದರಿಂದ ಬಡವರಿಗೆ ತೀವ್ರ ತೊಂದರೆಯಾಗಿದೆ ಎಂದು ಪ್ರತಿಭಟನಕಾರರು ಆರೋಪಿಸಿದರು.
 ಹೊಸ ಪಡಿತರ ಚೀಟಿ ಪಡೆಯಲು ಇಚ್ಛಿಸುವವ ಪ್ರತಿಯೊಬ್ಬರೂ ಈಗಾಗಲೇ ಪಡಿತರ ಚೀಟಿ ಹೊಂದಿರುವ  ಸ್ಥಳೀಯರನ್ನು ನೋಂದಣಿ ಮಾಡುವ ಕೇಂದ್ರಕ್ಕೆ ಕರೆದೊಯ್ಯಬೇಕಾಗಿದೆ. ಅಲ್ಲದೇ, ಪಡಿತರ ಚೀಟಿ ಪಡೆಯಲು ದಿನಗಟ್ಟಲೇ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಪ್ರತಿಭಟನಕಾರರು ತಿಳಿಸಿದರು.
ಆದಾಯ ಪ್ರಮಾಣಪತ್ರ: ಬಿಪಿಎಲ್ ಕಾರ್ಡ್ ಪಡೆಯಲು ಆದಾಯ ಪ್ರಮಾಣ ಪತ್ರದ ಅವಶ್ಯಕತೆಯಿದ್ದು, ಬಡವರು   ಮುಂಜಾನೆಯೇ ನೆಮ್ಮದಿ ಕೇಂದ್ರಗಳ ಮುಂದೆ ಕ್ಯೂ ನಿಲ್ಲಬೇಕಾದ ಸ್ಥಿತಿ ನಿರ್ಮಾಣವಾಗಿದೆ. ನಿತ್ಯ ಕೂಲಿ ಮಾಡುವ ಜನರಿಗೆ ಇದು ಕಷ್ಟಕರವಾಗಿದೆ.
 ಅಲ್ಲದೇ ಕುಟುಂಬದ ಎಲ್ಲಾ ಸದಸ್ಯರ ಬೆರಳಚ್ಚು ಪಡೆಯುವುದರಿಂದ ಮಕ್ಕಳು ಶಾಲೆಗೆ ತರೆಳದೆ ದಿನಗಟ್ಟಲೆ ಪಡಿತರ ಚೀಟಿ ಪಡೆಯಲು ಅಲೆದಾಡಬೇಕಾಗಿದೆ ಎಂದು ಪ್ರತಿಭಟನಕಾರರು ಆಪಾದಿಸಿದರು.
ಜೆಡಿಎಸ್ ಯುವ ಜಿಲ್ಲಾಧ್ಯಕ್ಷ ಜಿ.ಡಿ. ಮಂಜುನಾಥ್, ಮಹಾಪ್ರಧಾನ ಕಾರ್ಯದರ್ಶಿ ನಾಗರಾಜ್ ಕಂಕಾರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಚ್. ಪಾಲಕ್ಷಿ, ವಿ. ಶ್ರೀನಿವಾಸ್, ರವಿ ಕುಮಾರ್, ನಗರ ಘಟಕದ ಅಧ್ಯಕ್ಷ ಕೇಬಲ್ ಬಾಬು ಮೊದಲಾದವರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.