ಶಿವಮೊಗ್ಗ

ಪ್ರಹ್ಲಾದ್ ಜೋಶಿ ವಜಾಕ್ಕೆ ಆಗ್ರಹ

Published On :

ಕ.ಪ್ರ.ವಾರ್ತೆ, ಶಿವಮೊಗ್ಗ, ಮಾ.26 ಪ್ರಜಾಪ್ರಭುತ್ವದ ಅಂಗಾಂಗಗಳನ್ನು ಮಂಗಕ್ಕೆ ಹೋಲಿಸಿ ವ್ಯಾಖ್ಯಾನ ಮಾಡಿರುವ ಬಿಜೆಪಿ ರಾಜಾಧ್ಯಕ್ಷ ಪ್ರಹ್ಲಾದ್ ಜೋಷಿ ಅವರ ಸಂಸದ ಸ್ಥಾನವನ್ನು ವಜಾಗೊಳಿಸುವಂತೆ ಆಗ್ರಹಿಸಿ ಮಂಗಳವಾರ ವಿಧಾನಸಭಾ ಯುವ ಕಾಂಗ್ರೆಸ್ ಕಾರ್ಯಕರ್ತರು ನಗರದ ಗೋಪಿ ವೃತ್ತದ ಬಳಿ ಪ್ರತಿಭಟನೆ ನಡೆಸಿ, ಜೋಷಿ ಅವರ ಪ್ರತಿಕೃತಿ ದಹಿಸಿದರು.
ಧಾರವಾಡದ ಬಿಜೆಪಿ ವಿಜಯ ಸಂಕಲ್ಪಯಾತ್ರೆ ಸಂದರ್ಭದಲ್ಲಿ ಪ್ರಹ್ಲಾದ್ ಜೋಷಿ ನ್ಯಾಯಾಂಗ ವ್ಯವಸ್ಥೆ ಹಾಗೂ ದೇಶದ ಪ್ರಧಾನಿ ಅವರನ್ನು ಮಂಗಕ್ಕೆ ಹೋಲಿಸಿ ವ್ಯಾಖ್ಯಾನ ಮಾಡಿರುವುದು ಖಂಡನೀಯ. ಪ್ರಜಾಪ್ರಭುತ್ವ ವ್ಯವಸ್ಥೆಯ ಉನ್ನತ ಸ್ಥಾನದಲ್ಲಿರುವ ಜೋಷಿ ಅವರು ಈ ರೀತಿ ಹೇಳಿಕೆ ನೀಡುವುದರೊಂದಿಗೆ ಪ್ರಜಾಪ್ರಭುತ್ವಕ್ಕೆ ದಕ್ಕೆ ತಂದಿದ್ದಾರೆ ಎಂದು ಪ್ರತಿಭಟನಕಾರರು ಆರೋಪಿಸಿದರು.
ಅಪಚಾರ: ದೇಶದ ಸಂವಿಧಾನದ ಭದ್ರತೆ, ಐಕ್ಯತೆ ಬಗ್ಗೆ ಮಾತನಾಡುವ ನಾಯಕರೇ ಶಾಸಕಾಂಗ, ನ್ಯಾಯಾಂಗ ಮತ್ತು ಕಾರ್ಯಾಂಗಗಳ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ, ಸಂವಿಧಾನಕ್ಕೆ ಅಪಚಾರ ಎಸಗಿದ್ದಾರೆ. ಆದ್ದರಿಂದ ಈ ಕೂಡಲೇ ಜೋಷಿ ನೈತಿಕ ಹೊಣೆ ಹೊತ್ತು ರಾಜಿನಾಮೆ ನೀಡಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು.
ಅಧ್ಯಕ್ಷ ಕೆ. ರಂಗನಾಥ್, ಉಪಾಧ್ಯಕ್ಷ ಟಿ.ವಿ. ರಂಜಿತ್, ಪ್ರಧಾನ ಕಾರ್ಯದರ್ಶಿ ಎಂ. ಪ್ರಮೀಣ್, ಎಚ್.ಪಿ. ಗಿರೀಶ್, ಧರ್ಮ, ಕಾರ್ಯದರ್ಶಿ ರಿಯಾಜ್, ವಸಂತ, ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.