ಶಿವಮೊಗ್ಗ

ಉಚಿತ ದಂತ ತಪಾಸಣೆ

Published On :

ಶಿವಮೊಗ್ಗ: ಹಾರ್ನಳ್ಳಿ ಸರ್ಕಾರಿ ಪ್ರಾಥಮಿಕ ಶಾಲಾ ಮಕ್ಕಳಿಗೆ ರೋಟರಿ ಶಿವಮೊಗ್ಗ ಪೂರ್ವ ಮತ್ತು ಇನ್ನರ್‌ವ್ಹೀಲ್ ಕ್ಲಬ್ ಪೂರ್ವ ಹಾಗೂ ಶರಾವತಿ ದಂತ ವೈದಕೀಯ ಕಾಲೇಜು ಸಂಯುಕ್ತಾಶ್ರಯದಲ್ಲಿ ಉಚಿತ ದಂತ ತಪಾಸಣೆ ಹಾಗೂ ಮಾಹಿತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಮುನ್ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಕಾರ್ಯಕ್ರಮದ ಸದುಪಯೋಗಪಡೆದುಕೊಂಡರು. ತಪಾಸಣಾ ಶಿಬಿರದಲ್ಲಿ ಡಾ. ರಾಮಚಂದ್ರ, ಡಾ. ಶ್ರೀನಿವಾಸ್ ದಂತ ರಕ್ಷಣೆಯ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು.  ಅಧ್ಯಕ್ಷತೆ ವಹಿಸಿದ್ದ ರೋಟರಿ ಅಧ್ಯಕ್ಷ ಕೆ.ಬಿ. ರವಿಶಂಕರ್, ರೋಟರಿ ಸಂಸ್ಥೆಯ ಮುಖಾಂತರ ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಗಳ ಆರೋಗ್ಯ ತಪಾಸಣೆ ಬಗ್ಗೆ ಹೆಚ್ಚು ಗಮನ ನೀಡುವುದಾಗಿ ತಿಳಿಸಿದರು.
    ವೇದಿಕೆಯಲ್ಲಿ ಶರಾವತಿ ದಂತ ವೈದಕೀಯ ಕಾಲೇಜಿನ ವೈದ್ಯರು, ಇನ್ನರ್‌ವ್ಹೀಲ್ ಕ್ಲಬ್ ಅಧ್ಯಕ್ಷೆ ಅನಿತಾ ರವಿಶಂಕರ್, ಕಾರ್ಯದರ್ಶಿ ಬಿಂದು ವಿಜಯಕುಮಾರ್, ರೋಟರಿ ಪೂರ್ವ ವಿದ್ಯಾ ಸಂಸ್ಥೆಯ ಜಿ. ವಿಜಯಕುಮಾರ್, ಕಾರ್ಯದರ್ಶಿ ಕೇಶವಪ್ಪ ಮುಖ್ಯೋಪಾಧ್ಯಯರಾದ ಪುಟ್ಟರಂಗಮ್ಮ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.