ಶಿವಮೊಗ್ಗ

ಏ.12ರಿಂದ ಮಕ್ಕಳ ರಂಗಶಿಬಿರ (ಸುದ್ದಿ ಸಂಕ್ಷೇಪ)

Published On :

ಶಿವಮೊಗ್ಗ: ರಂಗಬೆಳಕು ಏಪ್ರಿಲ್ 12ರಿಂದ ಮೇ1ರ ವರೆಗೆ ನಗರದ ದುರ್ಗಿಗುಡಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಮಕ್ಕಳ ರಂಗಶಿಬಿರ ಏರ್ಪಡಿಸಿದೆ. ಶಿಬಿರಕ್ಕೆ 12ರಿಂದ 16 ವಯೋವಾನ ಮಕ್ಕಳು ಅರ್ಹರಾಗಿದ್ದು, 40 ಮಕ್ಕಳಿಗೆ ಅವಕಾಶವಿರುತ್ತದೆ. ಪ್ರತಿ ನಿತ್ಯ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರಗೆ ನಡೆಯುವ ಕಾರ್ಯಕ್ರಮಕ್ಕೆ ರಂಗಭೂಮಿಯ ಗಣ್ಯರು ಪಾಲ್ಗೊಳ್ಳಲಿದ್ದಾರೆ. ಮಕ್ಕಳಿಗಾಗಿ ಏರ್ಪಡಿಸಿದ್ದ ಎರಡು ನಾಟಕಗಳು ಮೇ 1 ರಂದು ಕುವೆಂಪು ರಂಗಮಂದಿರದಲ್ಲಿ ಪ್ರದರ್ಶನಗೊಳ್ಳಲಿದೆ. ಆಸಕ್ತರು ಕೊಟ್ರಪ್ಪ ಜಿ. ಹಿರೇಮಾಗಡಿ ಇವರ ಬಳಿ ಹೆಸರು ನೋಂದಾಯಿಸಿವಂತೆ ತಂಡದ ಕಾರ್ಯದರ್ಶಿ ಉಮೇಶ್ ಎಂ. ಪಿಳ್ಳಂಗಿರಿ ತಿಳಿಸಿದ್ದಾರೆ. ವಿವರಗಳಿಗಾಗಿ- 9844569645.
ತರಬೇತಿ ಶಿಬಿರ
ಶಿವಮೊಗ್ಗ: ದುರ್ಗಿಗುಡಿ ಕ್ರಿಕೆಟ್ ಅಸೋಸಿಯೇಷನ್ ಏಪ್ರಿಲ್ 1ರಿಂದ 15ರವರೆಗೆ ನಗರದ ಎನ್‌ಇಎಸ್ ಮೈದಾನದಲ್ಲಿ ಬೇಸಿಗೆ ಕ್ರಿಕೆಟ್ ತರಬೇತಿ ಶಿಬಿರ ಏರ್ಪಡಿಸಿದೆ. ಪ್ರತಿ ನಿತ್ಯ ಬೆಳಗ್ಗೆ 6.30ರಿಂದ ನುರಿತ ಕ್ರಿಕೆಟ್ ತರಬೇತಿದಾರರಿಂದ ತರಬೇತಿ ನೀಡಲಾಗುವುದು ಎಂದು ಕ್ಲಬ್‌ನ ಬಿ.ಕೆ. ನಾಗರಾಜ ತಿಳಿಸಿದ್ದಾರೆ. ವಿವರಗಳಿಗಾಗಿ- 9986419637.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.