ಶಿವಮೊಗ್ಗ

ಕುಡಿಯುವ ನೀರಿನ ಸಮಸ್ಯೆ: ಪಿಡಿಒ ಹೊಣೆ

Published On :

ಸೊರಬ: ತಾಲೂಕಿನ ಯಾವುದೇ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದರೆ ಅದಕ್ಕೆ ಪಿಡಿಒಗಳು ವೈಯುಕ್ತಿಕ ಜವಾಬ್ದಾರಿ ಹೊತ್ತುಕೊಳ್ಳಬೇಕು ಎಂದು ಎಸಿ ಉದಯಕುಮಾರ್ ಶೆಟ್ಟಿ ಎಚ್ಚರಿಸಿದರು.
ಬುಧವಾರ ಪಟ್ಟಣದಲ್ಲಿ ಅಧಿಕಾರಿಗಳೊಂದಿಗೆ ಮಾತನಾಡಿದರು. ಕುಡಿಯುವ ನೀರಿನ ಸಮಸ್ಯೆ ತಾಲ್ಲೂಕಿನ ಎಲ್ಲಿಯೂ ಆಗುವಂತಿಲ್ಲ, ಚುನಾವಣಾ ನೀತಿ ಸಂಹಿತೆ ಕುಡಿಯುವ ನೀರಿಗೆ ಅನ್ವಯಿಸುವುದಿಲ್ಲ, ಬರ ಎಂದರೆ ಮೂಲಭೂತ ಸೌಕರ್ಯದ ಕೊರತೆ ಇದೆ ಎಂದರ್ಥ. ಹಾಗಾಗಿ ಬೇರೆ ಏನನ್ನೂ ನೆಪ ಹೇಳದೆ ನೀರಿನ ಸಮಸ್ಯೆ ಉಂಟಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಸೂಚಿಸಿದರು.
ಪಿಡಿಒಗಳು ಗ್ರಾಮಕ್ಕೆ ಭೇಟಿ ನೀಡುತ್ತಿಲ್ಲ ಬದಲಿಗೆ ಕಚೇರಿಯಲ್ಲಿರುತ್ತಾರೆ ಎಂಬ ದೂರು ಬಂದಿದ್ದು, ಗೈರು ಹಾಜರಾಗುವವರ ಕುರಿತು ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಯಾವುದೇ ಪಕ್ಷದ ಕಾರ್ಯಕರ್ತರು, ಮುಖಂಡರು ಬರಲಿ ಅವರೊಡನೆ ಸೌಹಾರ್ಧಯುತವಾಗಿ ವರ್ತಿಸಿ,  ಪಕ್ಷಗಳ ಕಾರ್ಯಕರ್ತ, ಮುಖಂಡ, ಜನಪ್ರತಿನಿಧಿಗಳು ಕೂಡ ಅಧಿಕಾರಿಗಳೊಂದಿಗೆ ಸಹಕರಿಸಿ ಚುನಾವಣೆ ಶಾಂತಯುತವಾಗಿ ನಡೆಯಲು ಅವಕಾಶ ನೀಡಬೇಕು ಎಂದರು.
ತಹಸೀಲ್ದಾರ್ ಶ್ರೀಧರಮೂರ್ತಿ ಪಂಡಿತ್, ಪಪಂ ಮುಖ್ಯಾಧಿಕಾರಿ ಜಿ.ಟಿ. ವೀರೇಶ್ ಕುಮಾರ್, ಪಿಎಸ್‌ಐ ಮಹಬಲೇಶ್ವರ್, ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.