ಶಿವಮೊಗ್ಗ

ಚರ್ಚೆ ನಡೆಯುತ್ತಿರುವುದು ಆಶಾದಾಯಕ ಬೆಳವಣಿಗೆ: ಪ್ರೊ. ಪೂರ್ಣಾನಂದ

Published On :

ಶಿವಮೊಗ್ಗ: ಮಾಧ್ಯಮಗಳು ನೀಡುವ ಹಲವಾರು ಸುದ್ದಿಗಳಿಗೆ ಸಂಬಂಧಿಸಿದಂತೆ ಸಮಾಜದಲ್ಲಿ ಚರ್ಚೆಗಳು ನಡೆಯುತ್ತಿರುವುದು ಆಶಾದಾಯಕ ಬೆಳವಣಿಗೆ ಎಂದು ಕುವೆಂಪು ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಅಧ್ಯಕ್ಷ ಪ್ರೊ. ಡಿ.ಎಸ್. ಪೂರ್ಣಾನಂದ ಅಭಿಪ್ರಾಯಪಟ್ಟರು.
ಜಿಲ್ಲಾ ಸಾಹಿತ್ಯ ಪರಿಷತ್ ಹಾಗೂ ಡಾ.ಬಿ.ಆರ್. ಅಂಬೇಡ್ಕರ್ ಕಾಲೇಜಿನಲ್ಲಿ ಬುಧವಾರ ನಾಗಡಿ ಕೆರೆ ಕಿಟ್ಟಪ್ಪಗೌಡ ರುಕ್ಮಣಿ ದತ್ತಿ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ಅವರು, ಮಾಧ್ಯಮವೆಂಬುದು ಕ್ರಿಯಾಶೀಲತೆಯಿಂದ ಕೂಡಿದ ಕ್ಷೇತ್ರ. ಇದು ಪ್ರತಿಯೊಂದು ವಯೋವಾನದವರಿಗೂ ಹೆಚ್ಚು ಆಸಕ್ತಿ ಹುಟ್ಟಿಸುತ್ತದೆ ಎಂದು ತಿಳಿಸಿದರು.
ಸರ್ಕಾರಕ್ಕೆ ಎಚ್ಚರಿಕೆ: ಮಾಧ್ಯಮಗಳು ಸಮಾಜದ ಕಠೋರ ಸತ್ಯಗಳನ್ನು ತಿಳಿಸದಿದ್ದರೆ ಆತ್ಮವಂಚನೆ ಮಾಡಿಕೊಂಡಂತೆ ಎಂದ ಅವರು, ದೇಶದಲ್ಲಿ ಮಾಧ್ಯಮಗಳಿಗೆ ಪತ್ರಿಕಾ ಸ್ವಾತಂತ್ರ್ಯ ನೀಡಿರುವುದರಿಂದ, ಸರ್ಕಾರಗಳು ಎಚ್ಚರಿಕೆಯಿಂದ ಆಡಳಿತ ನಡೆಸಲು ಸಾಧ್ಯವಾಗಿದೆ ಎಂದು ಹೇಳಿದರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಿ. ಮಂಜುನಾಥ್, ಲತಾ ಶಾಂತವೀರನಾಯ್ಕ, ಡಿವಿಎಸ್. ಪ್ರಥಮ ದರ್ಜೆ ಕಾಲೇಜು ಸಹ ಪ್ರಾಧ್ಯಾಪಕ ಜಿ. ವೆಂಕಟೇಶ್, ಅಂಬೇಡ್ಕರ್ ಕಾಲೇಜಿನ ಪ್ರಾಂಶುಪಾಲೆ ಡಾ. ಭಾಗ್ಯಲಕ್ಷ್ಮಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.