ಶ್ರೀ ರೇಣುಕಾನಂದ ಸ್ವಾಮೀಜಿ ಪ್ರವಾಸ
ಶಿವಮೊಗ್ಗ: ರಾಮನಗರ ಜಿಲ್ಲೆ ಮಾಗಡಿ ತಾಲೂಕು ಸೋಲೂರಿನಲ್ಲಿರುವ ಆರ್ಯ ಈಡಿಗ ಮಹಾಸಂಸ್ಥಾನದ ಶ್ರೀ ನಾರಾಯಣಗುರು ಮಠದಲ್ಲಿ ಹಮ್ಮಿಕೊಂಡಿರುವ ಜಾತ್ರಾಮಹೋತ್ಸವ ಹಾಗೂ ಸಾಮೂಹಿಕ ವಿವಾಹ ಕಾರ್ಯಕ್ರಮದ ಪ್ರಯೋಜನ ಪಡೆದುಕೊಳ್ಳುವಂತೆ ಜನ ಸಾಮಾನ್ಯರಿಗೆ ತಿಳಿಸಲು ಜಿಲ್ಲಾದ್ಯಂತ ಶ್ರೀ ರೇಣುಕಾನಂದ ಸ್ವಾಮೀಜಿಯವರು ಪ್ರವಾಸ ಕೈಗೊಂಡಿದ್ದಾರೆ.
ಮಹಾಸಂಸ್ಥಾನದಲ್ಲಿ ಏಪ್ರಿಲ್ 20, 21ರಂದು ಶ್ರೀ ರೇಣುಕಾ ಯಲ್ಲಮ್ಮ ದೇವಿ ಜಾತ್ರಾಮಹೋತ್ಸವ ಮತ್ತು ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಲಿದೆ. ಈ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಸಂಸ್ಥಾನದ ರೇಣುಕಾನಂದ ಸ್ವಾಮೀಜಿಯವರು ಈ ತಿಂಗಳ 28ರಿಂದ ಮೂರು ದಿನಗಳ ಪ್ರವಾಸ ಕೈಗೊಂಡಿದ್ದಾರೆ. ಹೊಸನಗರ ಹಾಗೂ ತೀರ್ಥಹಳ್ಳಿ ತಾಲೂಕಿನ ಮುಖಂಡರ ಸಹಕಾರದೊಂದಿಗೆ ನಡೆಯುವ ಕಾರ್ಯಕ್ರಮದಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಶ್ರೀಮಠ ಕೋರಿದೆ.
ಎಲ್ಲೆಲ್ಲಿ ಪ್ರವಾಸ? ಮಾ.28ರಂದು ಬೇಗುವಳ್ಳಿ, ಸಂಕ್ಲಾಪುರ, ಸಂಪೆಕಟ್ಟೆ ಮತ್ತು ಮಾಸ್ತಿಕಟ್ಟೆಯಲ್ಲಿ ಪ್ರವಾಸ ಮಾಡುವರು. 29ರಂದು ಹುಂಚರೋಡ್, ಮಂಡಾನೆ , ಸೋನಲೆ, ನಾಗರಕೂಡಿಗೆ, ಇಟ್ಟಕ್ಕಿ 30ರಂದು ಹೆದ್ದಾರಿಪುರ, ಗರ್ತಿಕೆರೆ, ಹಾಲಂದೂರು, ಶಿರಿಗಾರು, ಕಲ್ಲಳ್ಳಿ, ಯೋಗಿ ಮಳಲಿ ಗ್ರಾಮಗಳಲ್ಲಿ ಪ್ರವಾಸ ಮಾಡಲಿದ್ದಾರೆ.
ಏಪ್ರಿಲ್ 21ರಂದು ಏರ್ಪಡಿಸಿರುವ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ವಿವಾಹ ಮಾಡಿಕೊಳ್ಳಲಿಚ್ಚಿಸುವವರು ಮಾರ್ಚ್ 31ರೊಳಗೆ ತಮ್ಮ ವ್ಯಕ್ತಿಗತ ವಿವರಗಳೊಂದಿಗೆ ನಿಗದಿತ ನಮೂನೆಯ ಅರ್ಜಿಯಲ್ಲಿ ನೋಂದಾಯಿಸಲು ಮಠದ ಪ್ರಕಟಣೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

