ಶಿವಮೊಗ್ಗ

ಸಮುದಾಯ ಆರೈಕೆ ಕೇಂದ್ರ ಮುಂದುವರಿಸಲು ಆಗ್ರಹ

Published On :

ಶಿವಮೊಗ್ಗ: ಎಚ್‌ಐವಿ ಸೋಂಕಿತ ವ್ಯಕ್ತಿಗಳನ್ನು ಆರೈಕೆ ಮಾಡುತ್ತಿರುವ ಭದ್ರಾವತಿ ಬೊಮ್ಮನಕಟ್ಟೆಯಲ್ಲಿನ ಸಮುದಾಯ ಆರೈಕೆ ಕೇಂದ್ರವನ್ನು ಮುಂದುವರೆಸುವಂತೆ ಆಗ್ರಹಿಸಿ ಬುಧವಾರ ಜಿಲ್ಲಾಧಿಕಾರಿ ಕಚೇರಿ ಎದುರು ಆರೈಕೆ ಕೇಂದ್ರದ ಸದಸ್ಯರು ಪ್ರತಿಭಟನೆ ಮಾಡಿದರು. ಸಮುದಾಯ ಆರೈಕೆ ಕೇಂದ್ರ ಕಳೆದ ಐದು ವರ್ಷಗಳಿಂದ ಸುಮಾರು 5 ಸಾವಿರ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿದ್ದು, ಆಪ್ತಸಮಾಲೋಚನೆ ನಡೆಸುತ್ತಿದೆ. ಸೋಂಕಿತ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ ತರಲು ಸಹಾಯ ಮಾಡುತ್ತಿದೆ. ಆದರೆ, ಇದೀಗ ಆರೈಕೆ ಮತ್ತು ಬೆಂಬಲ ಕೇಂದ್ರ ಎಂದು ಬದಲಿಸಲಾಗಿದ್ದು, ಇದರಿಂದ ಸೋಂಕಿತರಿಗೆ ಔಷಧಿ, ಚಿಕಿತ್ಸೆ ಸೌಲಭ್ಯ ಸಿಗುತ್ತಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಸರ್ಕಾರ ಸಮುದಾಯ ಆರೈಕೆ ಕೇಂದ್ರದ ಬದಲಾಗಿ ಆರೈಕೆ ಮತ್ತು ಬೆಂಬಲ ಕೇಂದ್ರವನ್ನು ಮಾತ್ರ ನಡೆಸುವಂತೆ ಸೂಚಿಸಿದೆ. ಈ ಕೇಂದ್ರದಲ್ಲಿ ಕೇವಲ ಆಪ್ತಸಮಾಲೋಚನೆ ಮತ್ತು ಮನರಂಜನೆ ಮಾತ್ರ ಇರುತ್ತದೆ. ಆದ್ದರಿಂದ ಆರೈಕೆ ಮತ್ತು ಬೆಂಬಲ ಕೇಂದ್ರದ ಬದಲಾಗಿ ಸಮುದಾಯ ಆರೈಕೆ ಕೇಂದ್ರವನ್ನೇ ಮುಂದುವರೆಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ವಸಂತ, ಪ್ರೇಮಾ, ಸುಮ ಮತ್ತಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.