ಪ್ರೇಯಸಿ ಕೊಂದು ಆತ್ಮಹತ್ಯೆಗೆ ಯತ್ನಿಸಿದ ಯುವಕ
ಕ.ಪ್ರ.ವಾರ್ತೆ ಟಿ ತೀರ್ಥಹಳ್ಳಿ ಟಿ ಮಾ.28
ಪ್ರೀತಿಸಲು ನಿರಾಕರಿಸಿದ ಕಾಲೇಜು ವಿದ್ಯಾರ್ಥಿನಿಗೆ ಚಾಕುವಿನಿಂದ ಇರಿದು ಕೊಲೆಗೈದ ಯುವಕ ತಾನೂ ವಿಷಸೇವಿಸಿ ಆತ್ಯಹತ್ಯೆಗೆ ಪ್ರಯತ್ನಿಸಿದ ಘಟನೆ ತೀರ್ಥಹಳ್ಳಿ ಬಾಳೆಬೈಲಿನಲ್ಲಿ ಗುರುವಾರ ನಡೆದಿದೆ.
ತಾಲೂಕಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತಿಮ ಬಿಕಾಂ ಓದುತ್ತಿದ್ದ ಕೋಣಂದೂರಿನ ಸೋನಂ (20) ಕೊಲೆಯಾದ ವಿದ್ಯಾರ್ಥಿನಿ. ಈಕೆಯನ್ನು ಹುಂಚದಕಟ್ಟೆಯ ಅಭಿಷೇಕ (26) ಹಲವು ದಿನಗಳಿಂದ ಪ್ರೀತಿಸುವಂತೆ ಒತ್ತಡ ಹೇರುತ್ತಿದ್ದ ಎನ್ನಲಾಗಿದೆ.
ಇದಕ್ಕೆ ಒಪ್ಪಿರಲಿಲ್ಲ ಇದರಿಂದ ಕೆರಳಿದ ಅಭಿಷೇಕ್ ಗುರುವಾರ ಕಾಲೇಜಿನಿಂದ ಮನೆಗೆ ಹೋಗುತ್ತಿದ್ದ ಸೋನಂಳನ್ನು ಮಾರ್ಗಮಧ್ಯದಲ್ಲಿ ತಡೆದು ಏಕಾಏಕಿ ಚಾಕುವಿನಿಂದ ಇರಿದಿದ್ದಾನೆ. ಈ ದೃಶ್ಯ ಕಂಡ ಸ್ಥಳೀಯರು ಘಟನೆ ತಡೆಯಲು ಪ್ರಯತ್ನಿಸಿದರಾದರೂ ಯಾವುದೇ ಪ್ರಯೋಜನವಾಗಿಲ್ಲ. ತೀವ್ರವಾಗಿ ಗಾಯಗೊಂಡ ಸೋನಂಳನ್ನು ಹತ್ತಿರದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ, ತೀವ್ರವಾಗಿ ಗಾಯಗೊಂಡಿದ್ದ ಯುವತಿ ಮಾರ್ಗಮಧ್ಯದಲ್ಲೇ ಕೊನೆಯುಸಿರೆಳೆದಿದ್ದಾಳೆ. ಆಗುಂಬೆಯಲ್ಲಿ ಈಕೆಯ ಮರಣೋತ್ತರ ಪರೀಕ್ಷೆ ಮುಗಿದ ನಂತರ ಕೋಣಂದೂರಿಗೆ ಶವವನ್ನು ಸಾಗಿಸಲಾಗಿದೆ. ವಿಷಸೇವಿಸಿ ಆತ್ಯಹತ್ಯೆಗೆ ಪ್ರಯತ್ನಿಸಿದ ಯುವಕನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲಗೆ ಕೊಂಡೊಯ್ಯಲಾಯಿತು. ಪ್ರಕರಣ ತೀರ್ಥಹಳ್ಳಿಯ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಘಟನೆ ನಡೆದ ಕೆಲ ಹೊತ್ತಿನಲ್ಲೇ ಪಟ್ಟಣದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಯಿತು. ಆಸ್ಪತ್ರೆ ಮುಂಭಾಗದಲ್ಲಿ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಜಮಾಯಿಸಿದ್ದರು. ಇವರನ್ನು ಚದರಿಸಲು ಪೊಲೀಸರು ಹರಸಾಹಸ ಪಟ್ಟರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

