ಏ.2ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ
ಕ.ಪ್ರ.ವಾರ್ತೆ ಟಿ ಶಿವಮೊಗ್ಗ ಟಿ ಮಾ.30
ಮಾಚೇನಹಳ್ಳಿಯಲ್ಲಿರುವ ಟಿಎಂಎಇಎಸ್ ಆಯುರ್ವೇದ ಮಹಾ ವಿದ್ಯಾಲಯ ಮತ್ತು ಆಸ್ಪತ್ರೆಯು ಶ್ರೀ ಚಂದ್ರಮೌಳೀಶ್ವರ ಶಿವಾಚಾರ್ಯ ಸ್ವಾಮಿಗಳ 75ನೇ ವರ್ಷದ ಅಮೃತ ಮಹೋತ್ಸವ ಆಚರಣೆ ಅಂಗವಾಗಿ ಏಪ್ರಿಲ್ 2 ರಂದು ಬೆಳಗ್ಗೆ 10ರಿಂದ ಸಂಜೆ 5 ಗಂಟೆವರೆಗೆ ನಗರದ ವೀರಶೈವ ಸಮುದಾಯ ಭವನದಲ್ಲಿ ಸಾರ್ವಜನಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಏರ್ಪಡಿಸಿದೆ.
ಶನಿವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಕಾಲೇಜಿನ ಆಡಳಿತಾಧಿಕಾರಿ ಜಿ.ಎ. ಹಿರೇಮಠ, ಶ್ರೀ ಶಿವಗಂಗಾ ಯೋಗ ಕೇಂದ್ರದ ಕಾರ್ಯಾಧ್ಯಕ್ಷ ಯೋಗಚಾರ್ಯ ಸಿ.ಯು. ರುದ್ರಾರಾದ್ಯ ಶಿಬಿರ ಉದ್ಘಾಟಿಸಲಿದ್ದು, ಶ್ರೀ ಜಗದ್ಗುರು ಪಂಚಾಚಾರ್ಯ ಕೈಗಾರಿಕಾ ತರಬೇತಿ ಕೇಂದ್ರದ ಪ್ರಾಂಶುಪಾಲ ವಿಘ್ನೇಶ್ವರಯ್ಯ ಸೊಲ್ಲಾಪುರ, ಟಿಎಂಎಇಎಸ್ ಕಾಲೇಜು ಉಪಪ್ರಾಂಶುಪಾಲ ಡಾ. ಪಂಕಜ್ ಪ್ರಸಾದ್ ಮತ್ತಿತರರು ಉಪಸ್ಥಿತರಿರುವರು ಎಂದರು.
ಸ್ವರ್ಣ ಬಿಂದು ಪ್ರಾಶನ: ಶಿಬಿರಕ್ಕೆ ಬರುವ ರೋಗಿಗಳು ಹಳೇಯ ಕಾಯಿಲೆಗೆ ಸಂಬಂಧಿಸಿದ ವೈದ್ಯರ ಚೀಟಿ ತರುವುದು ಕಡ್ಡಾಯವಾಗಿದ್ದು, ಸ್ತ್ರೀಯರಿಗೆ ನುರಿತ ಸ್ತ್ರೀ ವೈದ್ಯರಿಂದ ತಪಾಸಣೆ ಮಾಡಲಾಗುವುದು ಎಂದ ಅವರು, ಒಂದು ವರ್ಷಗಳ ಕಾಲ ಸತತವಾಗಿ ಕಾಲೇಜು ಆವರಣದಲ್ಲಿ ಆಯ್ದ ದಿನಗಳಂದು ಮಕ್ಕಳಿಗೆ ರಿಯಾಯಿತಿ ದರದಲ್ಲಿ ಸ್ವರ್ಣ ಬಿಂದು ಪ್ರಾಶನ ನೀಡಲಾಗಿದ್ದು, ಆಸಕ್ತರು ತಮ್ಮ ಹೆಸರನ್ನು ನೋಂದಾಯಿಕೊಳ್ಳಬಹುದು ಎಂದರು.
ಶಿಬಿರದಲ್ಲಿ ಚಿಕಿತ್ಸೆ ಪಡೆಯಲಿಚ್ಚಿಸುವ ವ್ಯಕ್ತಿಗಳು 08182-290360 ಸಂಪರ್ಕಿಸಬಹುದು ಎಂದು ವೈದ್ಯರು ತಿಳಿಸಿದ್ದಾರೆ. ಡಾ. ಸದಾನಂದ ಜೋಶಿ, ಡಾ. ಪ್ರಶಾಂತ್, ಡಾ. ಪಂಕಜ್ ಪ್ರಸಾದ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

