ಶಿವಮೊಗ್ಗ

ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಕೆಎಂಕೆ

Published On :

ಕ.ಪ್ರ.ವಾರ್ತೆ ಟಿ ಹೊಸನಗರ ಟಿ  ಮಾ.30
ಬರುವ ವಿಧಾನಸಭಾ ಚುನಾವಣೆಯಲ್ಲಿ ಸಾಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ. ಆಕಾಂಕ್ಷಿ ಕೂಡ ಅಲ್ಲ ಎಂದು ಕಳೆದ ಬಾರಿ ಜೆಡಿಎಸ್ ಅಭ್ಯರ್ಥಿಯಾಗಿದ್ದ ಜಿಪಂ ಮಾಜಿ ಉಪಾಧ್ಯಕ್ಷ ಕೆ.ಎಂ. ಕೃಷ್ಣಮೂರ್ತಿ ಸ್ಪಷ್ಟಪಡಿಸಿದರು.
ಪಟ್ಟಣದ ಗಾಯತ್ರಿ ಮಂದಿರದಲ್ಲಿ ನಡೆದ ಜೆಡಿಎಸ್ ಕಾರ್ಯಕರ್ತರ ಸಮಾವೇಶ ಮತ್ತು ಪಟ್ಟಣ ಪಂಚಾಯ್ತಿಗೆ ಆಯ್ಕೆಯಾದ ಸದಸ್ಯರನ್ನು ಸನ್ಮಾನಿಸಿದ ಅವರು ಪಕ್ಷದ ಅಭ್ಯರ್ಥಿಗಳ ಗೆಲವಿಗಾಗಿ ಶಕ್ತಿಮೀರಿ ಶ್ರಮಿಸುತ್ತೇನೆ ಎಂದರು.
ಬೇಳೂರಿಗೆ ಸ್ವಾಗತ: ಬಿಜೆಪಿ ಬಾವುಟ ತೆಗೆದು, ಜೆಡಿಎಸ್ ಬಾವುಟ ಹಿಡಿಯಲು ಶಾಸಕ ಬೇಳೂರು ಗೋಪಾಲಕೃಷ್ಣ ಬರುವುದಾದರೆ ಸ್ವಾಗತಿಸುತ್ತೇನೆ ಮತ್ತು ಇದಕ್ಕೆ ಕಾರ್ಯಕರ್ತರ ಬೆಂಬಲ ಕೂಡ ಇದೆ ಎಂದ ಅವರು, ಒಟ್ಟಿನಲ್ಲಿ ಹೆಚ್ಚಿನ ಸ್ಥಾನ ಗೆದ್ದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರನ್ನು ಮತ್ತೆ ಸಿಎಂ ಮಾಡಲು ಕಾರ್ಯಕರ್ತರು ಸನ್ನದ್ಧರಾಗುವಂತೆ ಕರೆ ನೀಡಿದರು.
ತೀರ್ಥಹಳ್ಳಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಆರ್. ಮದನ್, ಶಾಸಕನಾಗುವ ಆಸೆಯಿಂದ ಕೆಜೆಪಿ ಅಭ್ಯರ್ಥಿಯೊಬ್ಬರು ಕ್ಷೇತ್ರಾದ್ಯಂತ ಸೀರೆ ರಾಜಕೀಯ ಮಾಡುತ್ತಿದ್ದಾರೆ. ಅಂತಹ ತಂತ್ರ ಪ್ರಯೋಜನವಾಗುವುದಿಲ್ಲ. ಎಂದು ಇರದ ಅಕ್ಕತಂಗಿ ಪ್ರೀತಿಯನ್ನು ಚುನಾವಣೆ ಸಂದರ್ಭದಲ್ಲಿ ತೋರಿಸುವವರ ಬಗ್ಗೆ ಮಹಿಳೆಯರು ಎಚ್ಚರವಾಗಿರಬೇಕು ಎಂದರು.
ಈ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಗೆದ್ದು ಪಟ್ಟಣ ಪಂಚಾಯ್ತಿ ಅಧಿಕಾರ ಹಿಡಿದ ಜೆಡಿಎಸ್ ಸದಸ್ಯರನ್ನು ಗೌರವಿಸಿ ಸನ್ಮಾನಿಸಲಾಯಿತು.
ತಾಲೂಕು ಜೆಡಿಎಸ್ ಅಧ್ಯಕ್ಷ ಬಿ.ಜಿ.ನಾಗರಾಜ ಅಧ್ಯಕ್ಷತೆ ವಹಿಸಿದ್ದರು. ಪಕ್ಷದ ಪ್ರಮುಖರಾದ ಎಂ.ವಿ. ಜಯರಾಂ, ಆರ್.ಎ. ಚಾಬುಸಾಬ್, ಕಲ್ಲೂರು ಮೇಘರಾಜ್, ಸುಮತಿ ರಾಮಪೂಜಾರ್,
ಅಮೀರ ಹಂಜಾ, ಎನ್. ವರ್ತೇಶ್, ಚರಿತ್ರಾ, ಸತೀಶಭಟ್, ಸಂಕೂರು ಶಾಂತಮೂರ್ತಿ ಪಪಂ ಸದಸ್ಯರಾದ ಶ್ರೀಪತಿರಾವ್, ಕೃಷ್ಣವೇಣಿ, ಚಂದ್ರಿಕಾಮಹೇಶ್, ಸುಜಾತ ಉಡುಪ, ಸಯ್ಯದ್ ಮತ್ತಿತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.