4 ರಂದು ಶೃಂಗೇರಿ ಶ್ರೀ ಹೊಸಗುಂದಕ್ಕೆ
ಸಾಗರ: ತಾಲೂಕಿನ ಹೊಸಗುಂದದ ಶ್ರೀ ಉಮಾಮಹೇಶ್ವರ ದೇವಾಲಯಕ್ಕೆ ಶೃಂಗೇರಿಯ ಜಗದ್ಗುರುಗಳಾದ ಶ್ರೀ ಭಾರತೀತೀರ್ಥ ಮಹಾಸ್ವಾಮಿಗಳು ಏ. 4 ರಂದು ಆಗಮಿಸಲಿದ್ದಾರೆ.
ಏ. 4ರಂದು ಆನಂದಪುರಂನಲ್ಲಿ ಶ್ರೀಗಳಿಗೆ ಭವ್ಯ ಸ್ವಾಗತ ನೀಡಿ, ಆನಂದಪುರಂನಿಂದ ಹೊಸೂರು ಮಾರ್ಗವಾಗಿ ದೇವಸ್ಥಾನಕ್ಕೆ ಪೂರ್ಣಕುಂಭ ಸ್ವಾಗತದೊಂದಿಗೆ ಬರಮಾಡಿಕೊಳ್ಳಲಾಗುವುದು. ನಂತರ ಶ್ರೀಗಳಿಗೆ ಪಾದಪೂಜೆ ಹಾಗೂ ರಾತ್ರಿ 8ಕ್ಕೆ ಶ್ರೀಗಳಿಂದ ಶ್ರೀ ಶಾರದಾ ಚಂದ್ರಮೌಳೀಶ್ವರ ಪೂಜೆ ನೆರವೇರಲಿದೆ.
ಏ. 5ರಂದು ಬೆಳಿಗ್ಗೆ 10-30ಕ್ಕೆ ದೇಶದ ನಾನಾ ರಾಜ್ಯಗಳ ವಿವಿಧ ಗೋ-ತಳಿಗಳ ಗೋಶಾಲೆಗೆ ಶಂಕುಸ್ಥಾಪನೆ, ಹೊಸಗುಂದ ಕುರಿತು ಕಿರುಹೊತ್ತಿಗೆ ಅನಾವರಣ, ಹೊಸಗುಂದ ಕುರಿತ ಸಂಗೀತ ಧ್ವನಿಸುರಳಿ ಬಿಡುಗಡೆ ಇರುತ್ತದೆ. ನಂತರ ಶ್ರೀಗಳಿಂದ ಆಶೀರ್ವಚನ ಇರುತ್ತದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಕೋರಲಾಗಿದೆ.
ಪ್ರಾದೇಶಿಕ ಪಕ್ಷಕೇಂದ್ರ ಸರ್ಕಾರದ ಬಾಲಗೊಂಚಿ
ಶಿವಮೊಗ್ಗ: ದೇಶದಲ್ಲಿ ಪ್ರಾದೇಶಿಕ ಪಕ್ಷಗಳು ಹುಟ್ಟಿಕೊಂಡು ಕೇಂದ್ರ ಸರ್ಕಾರವನ್ನು ನಿಯಂತ್ರಿಸುತ್ತಿವೆ. ಆದರೆ, ಕರ್ನಾಟಕದಲ್ಲಿನ ಪ್ರಾದೇಶಿಕ ಪಕ್ಷಗಳು ಕೇಂದ್ರ ಸರ್ಕಾರದ ಬಾಲಗೊಂಚಿಯಾಗಿವೆ ಎಂದು ಕನ್ನಡ ಪ್ರಾಧ್ಯಾಪಕ ಡಾ. ಶ್ರೀನಿವಾಸ ಮೂರ್ತಿ ಬೇಸರ ವ್ಯಕ್ತಪಡಿಸಿದರು.
ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್, ಕರ್ನಾಟಕ ಪರಿಷತ್ ಭಾನುವಾರ ಕಮಲಾ ನೆಹರು ಮಹಿಳಾ ಕಾಲೇಜು ಆವರಣದಲ್ಲಿ ಆಯೋಜಿಸಿದ್ದ ಎಚ್.ಎಂ. ಮಲ್ಲಿಕಾರ್ಜುನಪ್ಪ ಸೇವಾ ಪ್ರತಿಷ್ಠಾನ ದತ್ತಿ ಅಂಗವಾಗಿ ಕೇಂದ್ರ ಮತ್ತು ರಾಜ್ಯಗಳ ಸಂಬಂಧ ಮರುಚಿಂತನೆ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು.
ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವುದರ ಮೂಲಕ ಅಭಿವೃದ್ಧಿ ಕಾರ್ಯಗಳನ್ನು ಚುರುಕಗೊಳಿಸಬಹುದು. ಏಕೆಂದರೆ ಪ್ರಾದೇಶಿಕ ಪಕ್ಷಗಳನ್ನು ನಿರ್ಲಕ್ಷ್ಯ ಮಾಡಿ ಅಧಿಕಾರ ನಡೆಸಲು ಸಾಧ್ಯವಿಲ್ಲ ಎಂಬುದು ಕೇಂದ್ರ ಸರ್ಕಾರಕ್ಕೆ ಮನವರಿಕೆಯಾಗಿದೆ.
ಆದರೆ, ಕರ್ನಾಟಕದಲ್ಲಿನ ಪ್ರಾದೇಶಿಕ ಪಕ್ಷಗಳು ಅಧಿಕಾರಕ್ಕಾಗಿ ಕೇಂದ್ರ ಸರ್ಕಾರ ಹೇಳಿದಂತೆ ಕೇಳುತ್ತಿರುವುದು ವಿಪರ್ಯಾಸ ಎಂದರು. ರಾಜ್ಯದ ಆರ್ಥಿಕ ಸಂಪನ್ಮೂಲ ಉತ್ಪಾದನೆಯ ಶೇ.67ರಷ್ಟು ಕೇಂದ್ರಕ್ಕೆ, 33ರಷ್ಟು ರಾಜ್ಯಕ್ಕೆ ಎಂಬ ನೀತಿ ಇದೆ. ಎಂದು ತಿಳಿಸಿದರು. ಕೇಂದ್ರದಿಂದ ಸ್ವಾತಂತ್ರ್ಯ ಪಡೆಯಲು ಭಾರತದಲ್ಲಿರುವ ಎಲ್ಲಾ ರಾಜ್ಯಗಳು ಹೊಸದಾಗಿ ಮತ್ತೊಂದು ಸ್ವಾತಂತ್ರ್ಯ ಹೋರಾಟಕ್ಕೆ ಸಜ್ಜಾಗಬೇಕಿದೆ ಎಂದರು. ಕಾರ್ಯಕ್ರಮದಲ್ಲಿ ಟಿ. ಗೋವಿಂದರಾಜು, ಶ್ರೀಕಂಠ ಕೂಡಗಿ, ಕತ್ತಿಗೆ ಚನ್ನಪ್ಪ ಮತ್ತಿತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

