ಉಚಿತ ಪರೀಕ್ಷಾ ಕಾರ್ಯಾಗಾರ
ಶಿವಮೊಗ್ಗ: ಜ್ಞಾನಗಂಗ ಐಎಎಸ್ ಅಕಾಡೆಮಿ ಏಪ್ರಿಲ್ 2ರಂದು ಮಧ್ಯಾಹ್ನ 2.30ಕ್ಕೆ ಮತ್ತು 3ರಂದು ಸಂಜೆ 5.30ಕ್ಕೆ ಉಚಿತ ಪರೀಕ್ಷಾ ಕಾರ್ಯಾಗಾರ ಹಮ್ಮಿಕೊಂಡಿದೆ. ಡಾ.ಪಿ. ಸುರೇಶ್ ಬಾಬು ಕಾರ್ಯಾಗಾರದಲ್ಲಿ ಮಾರ್ಗದರ್ಶನ ನೀಡಲಿದ್ದಾರೆ. ಆಸಕ್ತ ವಿದ್ಯಾರ್ಥಿಗಳು ಪಾಲ್ಗೊಳ್ಳಬಹುದು ಎಂದು ಅಕಾಡೆಮಿಯ ಸಂಚಾಲಕರು ತಿಳಿಸಿದ್ದಾರೆ. ವಿವರಗಳಿಗಾಗಿ- 8123545636.
ವಿದ್ಯುತ್ ವ್ಯತ್ಯಯ: ಕಾಂಗ್ರೆಸ್ ಖಂಡನೆ
ಶಿವಮೊಗ್ಗ: ನಿರಂತರ 7-8 ಗಂಟೆಗಳ ಕಾಲ ವಿದ್ಯುತ್ ಕಡಿತಗೊಳಿಸುತ್ತಿರುವ ಕ್ರಮವನ್ನು ಜಿಲ್ಲಾ ಕಾಂಗ್ರೆಸ್ ಸಮಿತಿ ಅಲ್ಪ ಸಂಖ್ಯಾತರ ವಿಭಾಗ ಖಂಡಿಸಿದೆ. ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯುತ್ತಿದ್ದು, ಇದರಿಂದ ವಿದ್ಯಾಭ್ಯಾಸಕ್ಕೆ ತೊಂದರೆಯಾಗುತ್ತಿದೆ ಎಂದು ಸಮಿತಿ ಆರೋಪಿಸಿದೆ. ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರು ಇದೇ ಕ್ಷೇತ್ರದವರಾಗಿದ್ದು, ಪರಿಸ್ಥಿತಿ ನಿಯಂತ್ರಿಸುವಲ್ಲಿ ವಿಫಲರಾಗಿದ್ದಾರೆ. ಈ ಕೂಡಲೇ ಸಮರ್ಪಕ ವಿದ್ಯುತ್ ನೀಡುವಂತೆ ಕ್ರಮಕೈಗೊಳ್ಳಬೇಕು ಎಂದು ಸಮಿತಿ ಜಿಲ್ಲಾ ಅಧ್ಯಕ್ಷ ಸೈಯದ್ ಒತ್ತಾಯಿಸಿದ್ದಾರೆ.
ಎನ್ಸಿಸಿ ವಾರ್ಷಿಕ ದಿನಾಚರಣೆ
ಶಿವಮೊಗ್ಗ: ಎನ್ಸಿಸಿ ವಾರ್ಷಿಕೋತ್ಸವ ಸಮಾರಂಭವನ್ನು ಇತ್ತೀಚೆಗೆ ಜವಹರಲಾಲ್ ನೆಹರು ವಿದ್ಯಾಲಯ, ಗಾಜನೂರಿನಲ್ಲಿ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ವಿದ್ಯಾಲಯದ ಪ್ರಾಂಶುಪಾಲರಾದ ಶ್ರೀಕಲಾ, ಮಕ್ಕಳಲ್ಲಿ ಶಿಸ್ತು, ಧೈರ್ಯ, ದೇಶಪ್ರೇಮ ಮತ್ತು ಸನ್ನಡತೆಯನ್ನು ಬೆಳಸುವುದರಲ್ಲಿ ಎನ್ಸಿಸಿ ಪಾತ್ರ ಶ್ಲಾಘನೀಯವೆಂದರು.
ಮುಖ್ಯ ಅತಿಥಿಯಾಗಿದ್ದ ಲೆಫ್ಟಿನೆಂಟ್ ಜರ್ನಲ್ ಕೆ.ಎನ್.ಎನ್. ಮೂರ್ತಿ, ಮಕ್ಕಳಲ್ಲಿ ಬಾಲ್ಯದಿಂದಲೆ ದೇಶಪ್ರೇಮ, ಶಿಸ್ತು, ಧೈರ್ಯ ಮತ್ತು ಸಕಾರಾತ್ಮಕ ನಡತೆಯನ್ನು ಬೆಳಸಿಕೊಳ್ಳುವಂತೆ ನೋಡಿಕೊಳ್ಳಬೇಕು ಎಂದು ಕರೆ ನೀಡಿದರು.
ಇದೇ ಸಂದರ್ಭದಲ್ಲಿ ಲೆಫ್ಟಿನೆಂಟ್ ಕೆ.ಎನ್.ಎನ್. ಮೂರ್ತಿ, ಸುಬೇದಾರ್ ದಿಗಂಬರ್ಸಿಂಗ್, ಹವಾಲ್ದಾರ್ ನಾಗೇಶ್, ಹವಾಲ್ದಾರ್ ಗುಲಾಮ್ ಖಾದರ್ ಮತ್ತು ಸಿ.ಎಚ್.ಎಂ. ವಿವೇಕ್ ಅವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

