ಸಂಜಯ್ ದತ್‌ಗೆ ಕ್ಷಮಾದಾನ ನೀಡದಿರಲು ಆಗ್ರಹ
ಕ.ಪ್ರ. ವಾರ್ತೆ, ಶಿವಮೊಗ್ಗ, ಮಾ.31
1993ರ ಮುಂಬೈ ಸ್ಫೋಟದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಸಂಜಯ್‌ದತ್‌ಗೆ ಸುಪ್ರಿಂಕೋರ್ಟ್ ಶಿಕ್ಷೆಯನ್ನು ವಿಧಿಸಿದೆ. ದೇಶದ ಕಾನೂನಿನ ಮುಂದೆ ಎಲ್ಲರೂ ಸಮಾನರು ಯಾವುದೇ ಕಾರಣಕ್ಕೂ ನಟ ಸಂಜಯದತ್‌ಗೆ ಕ್ಷಮಾದಾನ ನೀಡಬಾರದೆಂದು ಎಬಿವಿಪಿ ಆಗ್ರಹಿಸಿದೆ.
ಈ ದೇಶದಲ್ಲಿ ಯಾರೇ ತಪ್ಪು ಮಾಡಿದ್ದರೂ ಅವರಿಗೆ ತಕ್ಕ ಶಿಕ್ಷೆಯಾಗಲೇಬೇಕು. ದೇಶದ ಭದ್ರತೆ ವಿಷಯದಲ್ಲಿ ಇಂತಹ ಕೃತ್ಯವನ್ನು ಎಸಗಲು ಕಾರಣವಾಗಿರುವ ಇಂತಹ ಆರೋಪಿಗಳ ಕುರಿತು ಯಾರೂ ನ್ಯಾಯಾಂಗದ ಶಿಕ್ಷೆ ವಿಧಿಸುವ ವಿಷಯದಲ್ಲಿ ತಾರತಮ್ಯ ಮಾಡಬಾರದು ಎಂದು ಎಬಿವಿಪಿ ಒತ್ತಾಯಿಸುತ್ತದೆ ಎಂದು ರಾಜ್ಯ ಕಾರ್ಯದರ್ಶಿ ರಮೇಶ್ ಹೇಳಿದ್ದಾರೆ.
ಸಂಜಯದತ್ ಸ್ವತಃ ಕ್ಷಮೆ ಬೇಡ ಎಂದು ಹೇಳಿದ್ದರೂ, ಪತ್ರಿಕಾ ಮಂಡಳಿ ಅಧ್ಯಕ್ಷ ಮಾರ್ಕಂಡೇಯ ಕಾಟ್ಜು ಅವರು ಸಂಜಯ್‌ದತ್‌ಗೆ ಕ್ಷಮಾದಾನ ನೀಡಬೇಕೆಂದು ಹೇಳಿದ್ದನ್ನು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತತ್ತೀವ್ರವಾಗಿ ಖಂಡಿಸುತ್ತದೆ ಎಂದು ರಮೇಶ್ ತಿಳಿಸಿದ್ದಾರೆ.
ಕಾಟ್ಜು ಅವರು ಈ ಹಿಂದೆ ಗೌರವಯುತ ಸ್ಥಾನದಲ್ಲಿ ಕಾರ್ಯನಿರ್ವಹಿಸಿದ್ದವರು ಹಾಗೂ ಪ್ರಸ್ತುತ ಭಾರತೀಯ ಪತ್ರಿಕಾ ಮಂಡಳಿಯ ಅಧ್ಯಕ್ಷ ಸ್ಥಾನದಲ್ಲಿ ಇದ್ದುಕೊಂಡು ಈ ರೀತಿ ಹೇಳಿಕೆ ನೀಡುತ್ತಿರುವುದು ಖಂಡನೀಯ ಹಾಗೂ ನೋವಿನ ಸಂಗತಿ ಎಂದು ಎಬಿವಿಪಿ ಭಾವಿಸುತ್ತದೆ.
ಇಂತಹ ಪ್ರಕರಣಗಳಲ್ಲಿ ಮುಗ್ಧ ಜನರಿದ್ದರೇ ಅವರ ಪರವಾಗಿ ಯಾರು ನಿಲ್ಲುತ್ತಿದ್ದರು, ಆದ್ದರಿಂದ ದೇಶದ ಕಾನೂನನ್ನು ಗೌರವಿಸದ, ಕಾನೂನು ಉಲ್ಲಂಘಿಸುವವರಿಗೆ ತಕ್ಷ ಶಿಕ್ಷೆಯಾಗಲೆಬೇಕೆಂದು ಸಂಘಟನೆ ಒತ್ತಾಯಿಸುತ್ತದೆ ಎಂದು ರಮೇಶ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

