'ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಗಮನ'
ಜೋಗ್ ಫಾಲ್ಸ್: ಸಾಗರ ಕ್ಷೇತ್ರದಲ್ಲಿ ಎರಡು ಬಾರಿ ಶಾಸಕನಾಗಿದ್ದಾಗಲೂ ಕ್ಷೇತ್ರದ ಸಂಪೂರ್ಣ ಅಭಿವೃದ್ಧಿಯ ಕಡೆಗೆ ಗಮನ ಹರಿಸಿದ್ದು, ಅನುದಾನ ತರಲು ಶ್ರಮಿಸಿ ಎಲ್ಲ ವರ್ಗದ ಜನರನ್ನು ಸಮಾನ ದೃಷ್ಟಿಯಿಂದ ನೋಡಿದ್ದೇನೆ. ಆದರೆ ಕಾಗೋಡು ತಿಮ್ಮಪ್ಪನವರು ಮಂತ್ರಿಗಳಾಗಿದ್ದರೂ ಅಭಿವೃದ್ಧಿ ಕಡೆ ಗಮನ ಹರಿಸದೇ ಒಂದು ವರ್ಗದ ಜನರ ಒಲೈಕೆಗೆ ತೊಡಗಿದ್ದರು ಎಂದು ಸಾಗರ ಜೆಡಿಎಸ್ ಅಭ್ಯರ್ಥಿ ಗೋಪಾಲಕೃಷ್ಣ ಬೇಳೂರು ಆರೋಪಿಸಿದರು.
ಕಾರ್ಗಲ್ನಲ್ಲಿ ನಡೆದ ಜೆಡಿಎಸ್ ಪ್ರಚಾರ ಭಾಷಣದಲ್ಲಿ ಮಾತನಾಡಿ, ಜೋಗ್ ಕಾರ್ಗಲ್ ಪಪಂಗೆ ಕಾಗೋಡು ತಿಮ್ಮಪ್ಪನವರ ಆಡಳಿತಾವಧಿಯಲ್ಲಿ ಕೇವಲ 80 ಸಾವಿರ ರು.ಗಳನ್ನು ನೀಡಲಾಗಿದ್ದು, ತಾವು ಶಾಸಕನಾಗಿ 11 ಕೋಟಿ ರು.ಗಳ ಅನುದಾನ ತಂದಿದ್ದೇನೆ ಎಂದು ತಿಳಿಸಿದರು.
ಯಡಿಯೂರಪ್ಪನವರು ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ತಮ್ಮ ಸ್ವಕ್ಷೇತ್ರ ಶಿಕಾರಿಪುರದ ಅಭಿವೃದ್ಧಿಗೆ ಹೆಚ್ಚಿನ ಗಮನ ಹರಿಸಿದ್ದರೂ ಹೆಚ್ಚು ಭ್ರಷ್ಟಾಚಾರವನ್ನು ನಡೆಸಿ 21 ದಿನಗಳ ಕಾಲ ಜೈಲುವಾಸವನ್ನೂ ಅನುಭವಿಸಿದರು. ಕಾಂಗ್ರೆಸ್ನ ಹೆಚ್ಚಿನ ಮುಖ್ಯಮಂತ್ರಿಗಳು ಆಡಳಿತ ನಡೆಸಿದರೂ ಅವು ಜನರ ಮನಸ್ಸಿನಲ್ಲಿ ಹೆಚ್ಚು ಕಾಲ ಉಳಿಯಲಿಲ್ಲ. ಆದರೆ ಜೆಡಿಎಸ್ನ ಎಚ್.ಡಿ. ಕುಮಾರಸ್ವಾಮಿ ಕೇವಲ 20 ತಿಂಗಳ ಕಾಲ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದರೂ ಹಲವಾರು ಜನಪ್ರಿಯ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಜೈನ ಸಮಾಜದ ಮುಖಂಡ ಪಾಯಪ್ಪಗೌಡ ಜೆಡಿಎಸ್ಗೆ ಸೇರ್ಪಡೆಗೊಂಡರು. ಅರುಣ್ ಪ್ರಸಾದ್, ರಾಜೇಂದ್ರ, ಎಚ್.ಎಸ್. ಸಾಧಿಕ್, ಅಮೃತರಾಜ್, ಅಣ್ಣಪ್ಪ, ಮಂಜುನಾಥ್, ಮಂಜು ದೇವರಮಕ್ಕಿ, ಸಿದ್ದರಾಜು, ಶ್ರೀರತ್ನ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

