ಯುವತಿ ಚುಡಾಯಿಸಿದ ಇಬ್ಬರ ಬಂಧನ
ಕ.ಪ್ರ.ವಾರ್ತೆ ಟಿ ಶಿವಮೊಗ್ಗ ಟಿ ಮೇ 1
ರೈಲ್ವೆ ನಿಲ್ದಾಣದಲ್ಲಿ ರೈಲಿಗೆ ಕಾಯುತ್ತಿದ್ದ ಯುವತಿಯನ್ನು ಚುಡಾಯಿಸಿದ್ದ ಇಬ್ಬರು ಯುವಕರನ್ನು ರೈಲ್ವೆ ಪೊಲೀಸರು ಬಂಧಿಸಿದ ಘಟನೆ ಬುಧವಾರ ನಗರದಲ್ಲಿ ನಡೆದಿದೆ.
ಜಗದೀಶ್ (19) ಮತ್ತು ವಿಜಯಕುಮಾರ್ (18) ಬಂಧಿತ ಆರೋಪಿಗಳು. ಮದುವೆ ನಿಮಿತ್ತ ಯುವತಿಯೊಬ್ಬಳು ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಬಂದಿದ್ದರು. ನಂತರ ಮದುವೆ ಮುಗಿಸಿಕೊಂಡು ರಾತ್ರಿ ರೈಲಿನಲ್ಲಿ ಹೋಗುಲು ನಗರದ ಮುಖ್ಯ ರೈಲ್ವೆ ನಿಲ್ದಾಣಕ್ಕೆ ಬಂದಿದ್ದು, ರೈಲು ತಪ್ಪಿದರಿಂದ ರಾತ್ರಿ ನಿಲ್ದಾಣದಲ್ಲೇ ಇದ್ದರು. ಈ ವೇಳೆ ಅಲ್ಲಿಯೇ ಪಾರ್ಕ್‌ನಲ್ಲಿ ಕೆಲಸ ಮಾಡುತ್ತಿದ್ದ ಜಗದೀಶ್ ಮತ್ತು ವಿಜಯ್‌ಕುಮಾರ್ ಕುಡಿದ ಆಮಲಿನಲ್ಲಿ ಯುವತಿಯನ್ನು ಕೆಣಕ್ಕಿದ್ದಾರೆ.
ತಕ್ಷಣ ಯುವತಿ ಪೊಲೀಸರನ್ನು ಕೂಗಿದರಿಂದ ಪೊಲೀಸರು ಮಧ್ಯ ಪ್ರವೇಶಿಸಿ ಲಾಠಿ ಏಟು ಕೊಟ್ಟು ಇಬ್ಬರನ್ನು ಕಳುಹಿಸಿದ್ದಾರೆ.
ಆದರೆ, ಇಷ್ಟಕ್ಕೆ ಸುಮ್ಮನಾಗದ ಯುವಕರು ಪುನಾ ಬಂದು ಯುವತಿಯ ಮೇಲೆ ಕಡ್ಡಿಯಿಂದ ಹೊಡೆದಿದ್ದಾರೆ. ಯುವತಿ ತಕ್ಷಣ ತನ್ನ ಆರ್‌ಎಸ್‌ಎಸ್ ಕಾರ್ಯಕರ್ತರಿಗೆ ಕರೆ ಮಾಡಿದ್ದು, ಅವರು ಆಗಮಿಸಿ ಯುವಕರಿಗೆ ಹಿಗ್ಗಾಮುಗ್ಗಾ ತಳಿಸಿದ್ದಾರೆ.
ನಂತರ ಕಾರ್ಯಕರ್ತರು ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದು, ಆರೋಪಿಗಳನ್ನು 15 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪ್ರಕರಣ ರೈಲ್ವೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

