ಅಲ್ಪಸಂಖ್ಯಾತರ ಅಭಿವೃದ್ಧಿಯಲ್ಲಿ ಬಿಜೆಪಿ ದಾಖಲೆ:
ಶಿವಮೊಗ್ಗ: ಕೆಲವರು ಬಿಜೆಪಿಯನ್ನು ಕೋಮುವಾದಿ ಪಕ್ಷವೆಂದು ಕರೆದರು, ಆದರೆ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಅಲ್ಪಸಂಖ್ಯಾತರ ಅಭಿವೃದ್ಧಿ ದಾಖಲೆ ಪ್ರಮಾಣದಲ್ಲಿ ಹಣ ಬಿಡುಗಡೆ ಮಾಡಿದ್ದು, ವಿವಿಧ ಯೋಜನೆ ಅನುಷ್ಠಾನಕ್ಕೆ ತಂದಿದೆ ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ನಿಕಟಪೂರ್ವ ಅಧ್ಯಕ್ಷ ಅಬೂಬಕ್ಕರ್ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2005-06ರಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಸಿಗುತ್ತಿದ್ದುದು 35 ಕೋಟಿ. ಆದರೆ, 2008-09ರಲ್ಲಿ 128.98 ಕೋಟಿ, ನಂತರ ವರ್ಷದಿಂದ ವರ್ಷಕ್ಕೆ ಹೆಚ್ಚಳವಾಗಿ 2012-13ರಲ್ಲಿ 407 ಕೋಟಿ ರುಪಾಯಿ ಸಿಕ್ಕಿದೆ. ಇದು ಒಂದು ಸಮುದಾಯದ ಬೆಳವಣಿಗೆಗೆ ಅನುಕೂಲ ಮಾಡಿಕೊಟ್ಟಂತಾಗಿದೆ ಎಂದು ತಿಳಿಸಿದರು.
ಬಿಜೆಪಿಯಿಂದ ಕೆಲಸ: ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ, ಬುದ್ಧ, ಸಿಖ್, ಪಾರ್ಸಿಗಳ ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಗತಿ ಸುಧಾರಣೆ, ಸಾಮಾಜಿಕ ನ್ಯಾಯ ಮತ್ತು ಅವರನ್ನು ಮುಖ್ಯವಾಹಿನಿಗೆ ತರುವ ಏಕೈಕ ಉದ್ದೇಶದಿಂದ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಮತ್ತು ಕ್ರಿಶ್ಚಿಯನ್ ಅಭಿವೃದ್ಧಿ ಪರಿಷತ್ ಮೂಲಕ ಕಳೆದ ಐದು ವರ್ಷಗಳಲ್ಲಿ ಬಿಜೆಪಿ ಸರ್ಕಾರ ಸಾಕಷ್ಟು ಕೆಲಸ ಮಾಡಿದೆ ಎಂದರು.
ಈ ನಿಗಮವು ಪ್ರಾರಂಭವಾಗಿ 27 ವರ್ಷವಾಗಿದ್ದರೂ ಕಳೆದ 22 ವರ್ಷಗಳಲ್ಲಿ 130832 ಫಲಾನುಭವಿಗಳಿಗೆ 264.81 ಕೋಟಿ ನೀಡಿದ್ದರೆ,
ನಮ್ಮ ಸರ್ಕಾರ ಕಳೆದ ಐದು ವರ್ಷಗಳಲ್ಲಿ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಮೂಲಕ 189904 ಫಲಾನುಭವಿಗಳಿಗೆ 327.94 ಕೋಟಿ ಮೊತ್ತದ ಯೋಜನೆಗಳನ್ನು ನೀಡಿ ಜನಪರ ಸರ್ಕಾರ ಎಂಬ ಹೆಮ್ಮೆಗೆ ಪಾತ್ರವಾಗಿದೆ ಎಂದು ಮಾಹಿತಿ ನೀಡಿದರು.
ಕಳೆದ ಐದು ವರ್ಷಗಳಲ್ಲಿ ಅನೇಕ ಯೋಜನೆಗಳು ಅನುಷ್ಠಾನಗೊಂಡಿದ್ದು, ಅವುಗಳ ಪೈಕಿ ಹಜ್ಘರ್ ಸ್ಥಾಪನೆ, ಮಸೀದಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೇಶ್ ಇಮಾಮ್, ಹಾಫಿಜ್, ನಾಜೀರ, ಮೌಜನ್ಗಳಿಗೆ ಗೌರವ ಧನ, ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಉನ್ನತ ವಿದ್ಯಾಭ್ಯಾಸಕ್ಕೆ ಶೇ.2ರ ಬಡ್ಡಿ ದರದಲ್ಲಿ ಸಾಲ, ವಿದ್ಯಾರ್ಥಿ ವೇತನ, 320 ಶಾದಿಮಹಲ್, ಸಮುದಾಯ ಭವನ ನಿರ್ಮಾಣ, ವಸತಿ ನಿಲಯ ಸ್ಥಾಪನೆ ಸೇರಿದಂತೆ ಮಸೀದಿ, ಖಬರಸ್ಥಾನ, ದರ್ಗಾ ಜೀರ್ಣೋದ್ದಾರಗಳನ್ನೂ ಮಾಡಲಾಗಿದೆ ಎಂದು ವಿವರಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

