ಶಿವಮೊಗ್ಗ

ಕೆಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ

Published On :

ಸೊರಬ: ವಾಕ್ಸಮರಕ್ಕೆ ಸೀಮಿತವಾಗಿದ್ದ ರಾಜಕೀಯ ಸಮರ ಈಗ ಕೈ ಕೈ ಮಿಲಾವಣೆ ಹಂತಕ್ಕೆ ತಲುಪಿದೆ. ಇಲ್ಲಿನ ಸಾಗರ ರಸ್ತೆಯಲ್ಲಿ ತೆರಳುತ್ತಿದ್ದ ಕೆಜೆಪಿ ಕಾರ್ಯಕರ್ತ ಪಾಂಡು ಎಂಬುವರ ಮೇಲೆ ಕೆಲ ವ್ಯಕ್ತಿಗಳ ಗುಂಪೊಂದು ಹಲ್ಲೆ ನಡೆಸಿದೆ.   ಹಲ್ಲೆ ನಡೆಸಿದವರು ಜೆಡಿಎಸ್ ಕಾರ್ಯಕರ್ತರೆಂದು ಗುರುತಿಸಲಾದ ಓಂಕಾರ, ಜಗದೀಶ, ಮೋಹನ ಎಂದು ತಿಳಿದುಬಂದಿದ್ದು, ಇನ್ನೊಬ್ಬರ ಹೆಸರು ಗೊತ್ತಾಗಿಲ್ಲ.  ಕುಪ್ಪೆ ಗ್ರಾಮದ ಬಳಿ ಬುಧವಾರ ರಾತ್ರಿ ಈ ಘಟನೆ ನಡೆದಿದ್ದು, ಪಾಂಡು ಅಲಿಯಾಸ್ ರಾಮಚಂದ್ರ ತೀವ್ರವಾಗಿ ಗಾಯಗೊಂಡಿದ್ದಾರೆ.
ಹಾಲಪ್ಪ ಪ್ರತಿಭಟನೆ: ವಿಷಯ ತಿಳಿಯುತ್ತಿದ್ದಂತೆ ತಾಲೂಕು ಕೇಂದ್ರದಲ್ಲಿದ್ದ ಹಾಲಪ್ಪ ಆಗಮಿಸಿ ಪಾಂಡು ಅವರಿಗೆ ಸೂಕ್ತ ಚಿಕಿತ್ಸೆ ಕೊಡಿಸಿದರಲ್ಲದೆ, ತಕ್ಷಣವೇ ಪೊಲೀಸ್ ಠಾಣೆಗೆ ತೆರಳಿ ಪ್ರತಿಭಟನೆಗೆ ಮುಂದಾದರು.  ಈ ವಿಧಾನಸಭಾ ಕ್ಷೇತ್ರದಲ್ಲಿ ಕೆಲವು ರಾಜಕೀಯ ವ್ಯಕ್ತಿಗಳು ಭಯಭೀತ ವಾತಾವರಣ ನಿರ್ಮಿಸಲು ಹೊರಟಿದ್ದು, ನಿರ್ಭೀತ ಚುನಾವಣೆಗೆ ಸೂಕ್ತ ವ್ಯವಸ್ಥೆ ಮಾಡುವಂತೆ ಮನವಿ ಮಾಡಿದರು. ಅಲ್ಲದೆ ತಮ್ಮ ಪಕ್ಷದ ಕಾರ್ಯಕರ್ತರು ಈ ಘಟನೆಯಿಂದ ಭಯಭೀತರಾಗಿದ್ದು, ರಕ್ಷಣಾ ವ್ಯವಸ್ಥೆಯನ್ನು ಬಿಗಿಗೊಳಿಸುವಂತೆ ಮನವಿ ಮಾಡಿದರು.
ರಕ್ಷಣೆ ಭರವಸೆ: ಈ ಸಂದರ್ಭದಲ್ಲಿ ನೂರಾರು ಕೆಜೆಪಿ ಕಾರ್ಯಕರ್ತರು ಠಾಣೆ ಮುಂದೆ ಜಮಾಯಿಸಿದ್ದರು. ಸೂಕ್ತ ರಕ್ಷಣೆ ಭರವಸೆಯನ್ನು ಪೊಲೀಸ್ ಅಧಿಕಾರಿಗಳು ನೀಡಿದರು.  ಸೋಲಿನ ಭೀತಿಯಿಂದ ಹತಾಶಕ್ಕೆ ಒಳಗಾಗಿರುವ ಜೆಡಿಎಸ್, ಕೆಜೆಪಿ ಕಾರ್ಯಕರ್ತರನ್ನು ಬೆದರಿಸುವ ಕಾರ್ಯಕ್ಕೆ ಹೊರಟಿದೆ ಎಂದು ಹರತಾಳು ಹಾಲಪ್ಪ ಆರೋಪಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.