ವಿಧಾನಸಭಾ ಚುನಾವಣೆಗೆ ಸಕಲ ಸಜ್ಜು
ಕ.ಪ್ರ,ವಾರ್ತೆ, ಭದ್ರಾವತಿ, ಮೇ.4
ಭದ್ರಾವತಿ ಕೈಗಾರಿಕಾ ನಗರಿಯು ಭಾನುವಾರ ನಡೆಯುವ ವಿಧಾನಸಭಾ ಚುನಾವಣೆಗೆ ಸಜ್ಜಾಗಿದೆ. ಪಟ್ಟಣದ ಸರ್ ಎಂ.ವಿ. ಕಲಾ ಮತ್ತು ವಾಣಿಜ್ಯ ಕಾಲೇಜನ್ನು ಮಸ್ಟರಿಂಗ್ ಕೇಂದ್ರವಾಗಿಸಿದ್ದು, ಚುನಾವಣಾ ಕಾರ್ಯಕ್ಕಾಗಿ ನೇಮಿಸಿರುವ ಶೇ.10 ಮೀಸಲು ಸಿಬ್ಬಂದಿ ಸೇರಿದಂತೆ 1,233 ಮಂದಿ ಸಿಬ್ಬಂದಿ ಶನಿವಾರ ಮಧ್ಯಾಹ್ನದಿಂದಲೇ ತಮ್ಮ ಕರ್ತವ್ಯಕ್ಕೆ ಹಾಜರಾಗಲು ಸಿದ್ಧತೆ ನಡೆಸಿದ್ದರು.
ಭದ್ರಾವತಿ ವಿಧಾನಸಭಾ ಕ್ಷೇತ್ರ 112ರಲ್ಲಿ ಒಟ್ಟು 238 ಮತಗಟ್ಟೆಗಳನ್ನು ಸ್ಥಾಪಿಸಿದ್ದು, 98,733 ಪುರುಷರು ಮತ್ತು 1,00,042 ಮಹಿಳಾ ಮತದಾರರು ಸೇರಿದಂತೆ ಒಟ್ಟು 1,98,775 ಮತದಾರರು ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ಮತದಾರರ ಪಟ್ಟಿಯಲ್ಲಿದ್ದಾರೆ. ಕಳೆದ ಬಾರಿ ಮೇ 16, 2008ರಂದು ನಡೆದ ವಿಧಾಸಭಾ ಚುನಾವಣೆಯಲ್ಲಿ 1,25,391 ಮತದಾರರು ತಮ್ಮ ಹಕ್ಕನ್ನು ಚಲಾಯಿಸಿದ್ದರು.
ಈ ಬಾರಿ ಒಟ್ಟು 17 ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ದೊಣಬಘಟ್ಟ ಗ್ರಾಪಂ ಮತಗಟ್ಟೆ ಸಂಖ್ಯೆ 19 ಅತಿ ಹೆಚ್ಚಿನ ಮತದಾರರನ್ನು ಹೊಂದಿರುವ ಮತಗಟ್ಟೆಯಾಗಿದ್ದು, ಇಲ್ಲಿ 961 ಪುರುಷರು ಮತ್ತು 854 ಮಹಿಳೆಯರು ಸೇರಿದಂತೆ ಒಟ್ಟು 1815 ಮತದಾರರಿದ್ದಾರೆ.
ಮತಗಟ್ಟೆ ಸಂಖ್ಯೆ 9, ಬಂಡಿಗುಡ್ಡದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 46 ಪುರುಷರು ಮತ್ತು 55 ಮಹಿಳೆಯರು ಸೇರಿದಂತೆ 101 ಮತದಾರರಿದ್ದು, ಇದು ಅತಿ ಕಡಮೆ ಮತದಾರರನ್ನು ಹೊಂದಿರುವ ಮತಗಟ್ಟೆಯಾಗಿದೆ. ಇನ್ನು ಮತದಾನಕ್ಕೆ ಕ್ಷಣಗಣನೆ ಶುರುವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

