ಶಿವಮೊಗ್ಗ

ಭದ್ರಾವತಿಯಲ್ಲಿ ಶೇ. 66

Published On :

ಕ.ಪ್ರ.ವಾರ್ತೆ, ಭದ್ರಾವತಿ, ಮೇ 5
 ಭಾನುವಾರ ಭದ್ರಾವತಿ ವಿಧಾನಸಭಾ ಕ್ಷೇತ್ರ 112ಕ್ಕೆ ಸಂಬಂಧಿಸಿದ 238 ಮತಗಟ್ಟೆಗಳಲ್ಲಿ ಮತದಾನ ಶಾಂತಿಯುತವಾಗಿ ನೆರವೇರಿತು.
 ಮತಗಟ್ಟೆಗಳು ಬೆಳಗ್ಗೆ 7ರಿಂದಲೇ ತೆರೆದಿದ್ದರೂ ಮತದಾನ ಚುರುಕಿನಿಂದ ನಡೆದಿದ್ದು ಬೆಳಗ್ಗೆ 10ರ ನಂತರವೇ. ನಗರ ಪ್ರದೇಶದಲ್ಲಿ ಬೆಳಗ್ಗೆ ಮತದಾನ ಪ್ರಕ್ರಿಯೆ ಸ್ವಲ್ಪ ನೀರಸವಾಗಿತ್ತು. ಮಧ್ಯಾಹ್ನದ ನಂತರ ಸ್ವಲ್ಪ ಚೇತರಿಸಿಕೊಂಡು ಮತದಾನ ಸಂಜೆ 4 ಗಂಟೆ ನಂತರ 6 ಗಂಟೆವರೆಗೆ ಶೇಕಡ 56 ರಷ್ಟು ಆಗಿತ್ತು. ಗ್ರಾಮಾಂತರ ಪ್ರದೇಶದಲ್ಲಿ ಮತದಾರರು ಲವಲವಿಕೆಯಿಂದ ಮತದಾನದಲ್ಲಿ ಭಾಗವಹಿಸಿದ್ದು ಶೇಕಡ 66ರಷ್ಟು ಮತದಾನವಾಗಿದ್ದು ಕಂಡುಬಂದಿತು.
ಶತಾಯುಷಿಗಳ ಮತದಾನ: ಮತಗಟ್ಟೆ ಸಂಖ್ಯೆ 106ರಲ್ಲಿ ಎ.ಕೆ.ಕಾಲೋನಿ ವಾಸಿ 120 ವರ್ಷದ ಹಳದಮ್ಮ ತಮ್ಮ ಕುಟುಂಬದ ಸದಸ್ಯರ ಸಹಾಯದೊಂದಿಗೆ ಮತಗಟ್ಟೆಗೆ ಬಂದು ಮತದಾನ ಮಾಡಿದರು.
 ಮತಗಟ್ಟೆ 122 ಸೈಂಟ್ ಚಾರ್ಲ್ಸ್ ಕನ್ನಡ ಶಾಲೆಯಲ್ಲಿ ಪಾರ್ವತಮ್ಮ ಎಂಬ ಪಾರ್ಶ್ವವಾಯು ಪೀಡಿತ ಮಹಿಳೆ ವಾಕರ್ಸ್ ಹಾಯದಿಂದ ಮತಗಟ್ಟೆಗೆ ಬಂದರು. ಅಲ್ಲಿ ಜನರು ಅವರನ್ನು ಎತ್ತಿಕೊಂಡು ಹೋಗಿ ಮತದಾನ ಮಾಡಿಸಿದರು.
 ಶ್ರೀರಾಮನಗರದಲ್ಲಿ ದೀಪಕ್ ಎಂಬ ಅಂಗವಿಕಲ ಯುವಕ ತಂದೆಯ ನೆರವಿನಿಂದ ಮತಗಟ್ಟೆಗೆ ಬಂದು ಮತದಾನ ಮಾಡಿದರು. ದೀಪಕ್ ಇದೇ ಪ್ರಥಮ ಬಾರಿಗೆ ಮತದಾನ ಮಾಡುತ್ತಿರುವುದಾಗಿ ಸುದ್ದಿಗಾರರಿಗೆ ತಿಳಿಸಿದರು.  ಸಿ.ಎಂ.ಇಬ್ರಾಹಿಂ ಬೆಳಗ್ಗೆ 8 ಗಂಟೆಗೆ ಅನ್ವರ್ ಕಾಲೋನಿಯ ಸರ್ಕಾರಿ ಉರ್ದು ಪ್ರಾಥಮಿಕ ಶಾಲೆಯಲ್ಲಿನ ಮತಗಟ್ಟೆಯಲ್ಲಿ ತಮ್ಮ ಮತ ಚಲಾಯಿಸಿದರು. ಪಕ್ಷೇತರ ಅಭ್ಯರ್ಥಿ ಬಿ.ಕೆ.ಸಂಗಮೇಶ್ವರ್ ಬೆಳಗ್ಗೆ ಸುಮಾರು 11 ಗಂಟೆಗೆ ನಗರಸಭೆಯಲ್ಲಿನ ಮತಗಟ್ಟೆಯಲ್ಲಿ ಮತದಾನ ಮಾಡಿದರು.
--

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.