ಅಂಬೇಡ್ಕರ್, ಬಾಬೂಜಿ ದಿನಾಚರಣೆ
ಕ.ಪ್ರ.ವಾರ್ತೆ, ಶಿವಮೊಗ್ಗ, ಮೇ 6
ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾನಿಲಯದಲ್ಲಿ ಅಂಬೇಡ್ಕರ್ ಹಾಗೂ ಬಾಬು ಜಗಜೀವನ್ ರಾಮ್ ಜಯಂತಿ ಆಚರಿಸಲಾಯಿತು.
ಸಹ್ಯಾದ್ರಿ ಕಾಲೇಜಿನ ಸಸ್ಯಶಾಸ್ತ್ರ ಮತ್ತು ಬೀಜ ತಂತ್ರಜ್ಞಾನ ವಿಭಾಗದ ಸಹ ಪ್ರಾಧ್ಯಾಪಕ ಡಾ.ಎನ್. ರಾಜೇಶ್ವರಿ ಕಾರ್ಯಕ್ರಮ ಉದ್ಘಾಟಿಸಿ, ಅಂಬೇಡ್ಕರ್ ಸಾಮಾಜಿಕ ಮತ್ತು ಆರ್ಥಿಕ ಸಮಾನತೆಯನ್ನು ತರುವ ನಿಟ್ಟಿನಲ್ಲಿ ಶಿಕ್ಷಣ, ಸಂಘಟನೆ, ಹೋರಾಟದ ಹಿನ್ನಲೆಯಲ್ಲಿ ದಲಿತರ ಉದ್ಧಾರಕ್ಕಾಗಿ ಶ್ರಮಿಸಿದ್ದಾರೆ. ಅಲ್ಲದೇ, ವಿಶ್ವದಲ್ಲೇ ದೊಡ್ಡದಾದ ಸಂವಿಧಾನದ ರಚನೆಯ ಜವಾಬ್ದಾರಿಯನ್ನು ಹೊತ್ತು ಸಂವಿಧಾನ ಶಿಲ್ಪಿ, ಆಧುನಿಕ ಮನು ಎಂದೆನಿಸಿಕೊಂಡಿದ್ದಾರೆ ಎಂದರು.
ಸಹಾಯಕ ಪ್ರಾಧ್ಯಾಪಕ ಡಾ. ಮೋಹನ್ ಚಂದ್ರಗುತ್ತಿ ಮಾತನಾಡಿ, ಅಂಬೇಡ್ಕರ್ ಅವರನ್ನು ದೈವತ್ವಕ್ಕೇರಿಸುವ ಪುರೋಹಿತ ಶಾಹಿಯ ಸಂಚು ನಡೆಯುತ್ತಿದೆ. ಆದರೆ, ಇದನ್ನು ಧಿಕ್ಕರಿಸಿ ಅವರನ್ನು ತುಳಿತದಿಂದ ಎದ್ದು ಬಂದ ಮಾನವ ಶಕ್ತಿ ಎಂದು ಗ್ರಹಿಸಬೇಕಿದೆ. ಹಾಗೇ ಮಾಡುವುದರಿಂದ ಅತ್ಯಂತ ಕೆಳ ವರ್ಗದ ಮಕ್ಕಳು ಅವರನ್ನು ಮಾರ್ಗದರ್ಶಿಯನ್ನಾಗಿ ಸ್ವೀಕರಿಸುತ್ತಾರೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾನಿಲಯದ ವಿಶೇಷಾಧಿಕಾರಿ ಡಾ.ಪಿ ಸಾಲಿಮಠ್ ವಹಿಸಿದ್ದರು.
ವೇದಿಕೆಯಲ್ಲಿ ಕೃಷಿ ವಿವಿ ಡೀನ್ ಡಾ.ಜಿ.ಆರ್. ರಾಮಸ್ವಾಮಿ, ವಿದ್ಯಾರ್ಥಿ ಕಲ್ಯಾಣ ನಿರ್ದೇಶಕ ಡಾ. ಎಂ.ಎಸ್. ವಿಘ್ನೇಶ್, ಡಾ. ಸತ್ಯನಾರಾಯಣ ರೆಡ್ಡಿ,
ಡಾ. ಎಂ.ಎಸ್. ಗಣೇಶ್ ಬಾಬು, ಡಾ. ಕೆ.ಟಿ. ಗುರುಮೂರ್ತಿ, ವಿಶ್ವವಿದ್ಯಾನಿಲಯದ ಎಲ್ಲಾ ಬೋಧಕ ವರ್ಗ, ಬೋಧಕೇತರ ವರ್ಗ, ವಿದ್ಯಾರ್ಥಿಗಳು ಮತ್ತಿತರರು ಇದ್ದರು.
--
ಮೀನುಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ
ಶಿವಮೊಗ್ಗ: ಭದ್ರಾವತಿ ತಾಲೂಕಿನ ಬಿ.ಆರ್. ಪ್ರಾಜೆಕ್ಟ್ನಲ್ಲಿರುವ ಮೀನುಗಾರಿಕೆ ತರಬೆತಿ ಕೇಂದ್ರದಲ್ಲಿ ಆಸಕ್ತ ಗ್ರಾಮೀಣ 40 ಪುರುಷರಿಗೆ 2 ತಿಂಗಳ ಕಾಲ ಮೀನುಗಾರಿಕೆ ತರಬೇತಿ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ತರಬೇತಿ ಅವಧಿಯಲ್ಲಿ ಮಾಸಿಕ ಒಂದು ಸಾವಿರ ರು. ಶಿಷ್ಯ ವೇತನ ನೀಡಲಾಗುವುದಲ್ಲದೆ, ಮೀನುಮರಿ ಉತ್ಪಾದನೆ, ಪಾಲನೆ, ಹಂಚಿಕೆ, ಮೀನು ಸಾಕಾಣಿಕೆ, ಬಲೆ ಹೆಣೆಯುವುದು, ದುರಸ್ತಿ ಮಾಡುವುದು, ಹರಿಗೋಲು ನಡೆಸುವುದು, ಮೀನು ಹಿಡಿಯುವುದು, ಅಲಂಕಾರಿಕ ಮೀನು ಉತ್ಪಾದನೆ, ಪಾಲನೆ ಇತ್ಯಾದಿ ಬಗ್ಗೆ ತರಬೇತಿ ನೀಡಲಾಗುವುದು. ಆಸಕ್ತರು ಮಾಹಿತಿಯನ್ನು ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿರುವ ಮೀನುಗಾರಿಕೆ ಕಚೇರಿಯಿಂದ ಅರ್ಜಿ ನಮೂನೆ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಮೇ 29ರೊಳಗಾಗಿ ಮೀನುಗಾರಿಕೆ ಸಹಾಯಕ ನಿರ್ದೇಶಕರು (ಶ್ರೇಣಿ-1), ಮೀನುಗಾರಿಕೆ ತರಬೇತಿ ಕೇಂದ್ರ, ಬಿ.ಆರ್. ಪ್ರಾಜೆಕ್ಟ್ ಇವರಿಗೆ ಸಲ್ಲಿಸಲು ಕೋರಿದೆ. ವಿವರಗಳಿಗೆ ಜಿಲ್ಲಾ ಮಟ್ಟದ ತಾಲೂಕು ಮಟ್ಟದ ಮೀನುಗಾರಿಕೆ ಕಚೇರಿಗಳು, ಜಿಲ್ಲಾ ಪಂಚಾಯಿತಿ, ಜಿಲ್ಲಾಧಿಕಾರಿಗಳ ಕಚೇರಿ ನೋಟಿಸ್ ಬೋರ್ಡ್ನಲ್ಲಿ ನೋಡಬಹುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

