ಶಿವಮೊಗ್ಗ

ಗೋಕಟ್ಟೆ ಕಾಮಗಾರಿ ಕಳಪೆ: ಪರಿಶೀಲನೆ

Published On :

ಕ.ಪ್ರ.ವಾರ್ತೆ, ಸಾಗರ, ಮೇ.6 ಜಲಾನಯನ ಇಲಾಖೆ ತಾಲೂಕಿನ ವಿವಿಧೆಡೆ ನಿರ್ಮಿಸಿರುವ ಗೋಕಟ್ಟೆ ಕಾಮಗಾರಿ ಕಳಪೆಯಾಗಿರುವ ಬಗ್ಗೆ ರೈತರು ದೂರು ನೀಡಿರುವ ಹಿನ್ನೆಲೆಯಲ್ಲಿ ಮಾಜಿ ಸಚಿವ ಕಾಗೋಡು ತಿಮ್ಮಪ್ಪ  ಸೋಮವಾರ ಕಾಗೆಹಳ್ಳದಲ್ಲಿ ನಿರ್ಮಿಸಿರುವ ಗೋಕಟ್ಟೆ ಪರಿಶೀಲಿಸಿದರು.
 ಇಲಾಖೆ ಹೂದಲು ಮಣ್ಣುಬಳಸಿ ಗೋಕಟ್ಟೆ ನಿರ್ಮಿಸಿರುವುದನ್ನು ಗಮನಿಸಿದ ಕಾಗೋಡು ತಿಮ್ಮಪ್ಪ ಕಾಮಗಾರಿ ಕಳಪೆಯಾಗಿರುವುದನ್ನು ಖಚಿತಪಡಿಸಿಕೊಂಡರು. ಸರ್ಕಾರ ಪ್ರತಿ ಗೋಕಟ್ಟೆ ನಿರ್ಮಾಣಕ್ಕೆ ಸುಮಾರು 2ಲಕ್ಷಕ್ಕಿಂತ ಹೆಚ್ಚಿನ ಹಣ ನೀಡುತ್ತಿದ್ದು, ಇಲಾಖೆ ಇದನ್ನು ಸಮರ್ಪಕವಾಗಿ ಬಳಸಬೇಕಿತ್ತು. ಇಲ್ಲಿಯೂ ಭ್ರಷ್ಟಾಚಾರ ನಡೆದಿರುವುದು ಕಂಡುಬರುತ್ತಿದೆ ಎಂದರು.
 ಸ್ಥಳದಲ್ಲಿಯೇ ಇಲಾಖೆ ಜಿಲ್ಲಾಮಟ್ಟದ ಅಧಿಕಾರಿಗಳಿಗೆ ದೂರವಾಣಿ ಮೂಲಕ ಮಾತನಾಡಿದ ಅವರು, ತಕ್ಷಣ ಕಳಪೆ ಕಾಮಗಾರಿ ನಡೆದಿರುವ ಬಗ್ಗೆ ಪರಿಶೀಲಿಸಿ ಸಂಬಂಧಿಸಿದವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
--
ಉತ್ತಮ ಪುಸ್ತಕ ಪ್ರಶಸ್ತಿಗೆ ಅರ್ಜಿ ಆಹ್ವಾನ
ಶಿವಮೊಗ್ಗ: ಬೀದರ್‌ನಲ್ಲಿ ನಡೆದ 72ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಡಾ. ಶಾಂತರಸ ಹೆಂಬೇರಾಳು ಅವರು ತಮ್ಮ ಧರ್ಮಪತ್ನಿ ದಿವಂಗತ ಲಕ್ಷ್ಮೀದೇವಿ ಅವರ ಹೆಸರಿನಲ್ಲಿ ಒಂದು ಲಕ್ಷದ ಐವತ್ತು ಸಾವಿರ ರು.ಗಳನ್ನು ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ದತ್ತಿಯನ್ನು ಸ್ಥಾಪಿಸಿದ್ದಾರೆ.
ಈ ದತ್ತಿಯಿಂದ ಸಂಗ್ರಹವಾಗುವ ಬಡ್ಡಿ ಹಣದಿಂದ ಕನ್ನಡ ಮಹಿಳಾ ಬರಹಗಾರರ ವಿವಿಧ ಪ್ರಕಾರಗಳ ಪುಸ್ತಕಗಳಿಗೆ 5 ಸಾವಿರ ರು. ನಗದು ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಲಿದ್ದಾರೆ.
ಈ ಸ್ಪರ್ಧೆ ಮಹಿಳಾ ಸಾಹಿತಿಗಳಿಗೆ ಮಾತ್ರ ಮೀಸಲಾಗಿರುವುದರಿಂದ ಇದರಲ್ಲಿ ಪಾಲ್ಗೊಳ್ಳಲು ಇಚ್ಚಿಸುವವರು 2011-12ನೇ ಸಾಲಿನಲ್ಲಿ ಸಂಕೀರ್ಣ ಪ್ರಕಾರಕ್ಕೆ ನೀಡುತ್ತಿದ್ದು, 2002ನೇ ಜನವರಿ ತಿಂಗಳಿಂದ 2012ನೇ ಡಿಸೆಂಬರ್ ತಿಂಗಳವರೆಗೆ ಅವಧಿಯಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟವಾದ ಮಹಿಳೆಯರು ಸಂಕೀರ್ಣ (ಪ್ರಬಂಧ, ವಿಮರ್ಶೆ, ಸಂಶೋಧನೆಗೆ ಸಂಬಂಧಪಟ್ಟ ಇತರೆ ಯಾವುದೇ ಪ್ರಕಾರಕ್ಕೆ ಸಂಬಂಧಪಟ್ಟ ಲೇಖನಗಳ ಸಂಗ್ರಹ) ಮಾಡಿರುವ ಪುಸ್ತಕವಾಗಿರಬೇಕು, ಪ್ರತಿ ಪ್ರವೇಶಕ್ಕೆ ಮೂರು ಪುಸ್ತಕಗಳನ್ನು ಕಳುಹಿಸಬೇಕು, ಸ್ಪರ್ಧೆಗೆ ಬಂದ ಪುಸ್ತಕಗಳನ್ನು ಹಿಂದಿರುಗಿಸಲಾಗುವುದಿಲ್ಲ, ಬಹುಮಾನದ ಬಗ್ಗೆ ಪರಿಷತ್ತು ನೇಮಿಸುವ ತೀರ್ಪುಗಾರರ ಶಿಫಾರಸ್ಸು ಅಂತಿಮವಾಗಿರುತ್ತದೆ.
ಒಂದಕ್ಕಿಂತ ಹೆಚ್ಚು ಪುಸ್ತಕಗಳು ಅತ್ಯುತ್ತಮವೆಂದು ಪರಿಗಣಿತವಾದರೆ ಬಹುಮಾನದ ಹಣವನ್ನು ಹಂಚಿ ವಿತರಿಸುವ ಹಕ್ಕು ಪರಿಷತ್ತಿಗಿರುತ್ತದೆ.
ಸ್ಪರ್ಧೆಗೆ ಪುಸ್ತಕಗಳನ್ನು ಕಳುಹಿಸಲು ಕೊನೆಯ 2013ರ ಜೂನ್ 30. ಗೌರವ ಕಾರ್ಯದರ್ಶಿಗಳು, ಕನ್ನಡ ಸಾಹಿತ್ಯ ಪರಿಷತ್ತು, ಪಂಪ ಮಹಾಕವಿ ರಸ್ತೆ, ಚಾಮರಾಜಪೇಟೆ, ಬೆಂಗಳೂರು-18 ಈ ವಿಳಾಸಕ್ಕೆ ಕಳುಹಿಸಬಹುದು.
ಮಾಹಿತಿಗೆ ದೂ- 080-26623584 ಸಂಪರ್ಕಿಸಬಹುದು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.