ಸ್ವಸ್ತಿಶ್ರೀ ದೇವೇಂದ್ರಕೀರ್ತಿ ದತ್ತಿ ಪ್ರಶಸ್ತಿ
ಶಿವಮೊಗ್ಗ: ಜಿಲ್ಲೆಯ ಹೊಂಬುಜ ಶ್ರೀ ಜೈನಮಠದ ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮಿಗಳು ಪೂಜ್ಯ ಸ್ವಸ್ತಿಶ್ರೀ ದೇವೇಂದ್ರಕೀರ್ತಿ ಪ್ರಶಸ್ತಿಗಾಗಿ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ದತ್ತಿಯನ್ನು ಸ್ಥಾಪಿಸಿದ್ದು, ಈ ದತ್ತಿಯಿಂದ ಸಂಗ್ರಹವಾಗುವ ಬಡ್ಡಿ ಹಣದಿಂದ ಜೈನಧರ್ಮಕ್ಕೆ ಸಂಬಂಧಿಸಿದ ಶ್ರೇಷ್ಠ ಗ್ರಂಥವೊಂದಕ್ಕೆ 2012-13ನೇ ಸಾಲಿಗೆ 6 ಸಾವಿರ ರು. ನಗದು ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಲಿದ್ದಾರೆ. ಈ ಸ್ಪರ್ಧೆ 2012 ಜನವರಿಯಿಂದ 2013ನೇ ಡಿಸೆಂಬರ್ವರೆಗೆ ಕನ್ನಡದಲ್ಲಿ ಪ್ರಕಟವಾದ ಜೈನಧರ್ಮದ ಇತಿಹಾಸ, ಸಾಹಿತ್ಯ, ಸಂಸ್ಕೃತಿ ಹಾಗೂ ಕಲೆಗೆ ಸಂಬಂಧಿಸಿದ ಪುಸ್ತಕಗಳನ್ನು ಕಳುಹಿಸಬೇಕು.
ಪ್ರತಿ ಪ್ರವೇಶಕ್ಕೆ ಮೂರು ಪುಸ್ತಕಗಳನ್ನು ಕಳುಹಿಸಬೇಕು, ಸ್ಪರ್ಧೆಗೆ ಯಾರೂ ಬೇಕಾದರೂ ಸ್ಪರ್ಧಿಸಬಹುದು, ಜೈನ ಧರ್ಮದ ಇತಿಹಾಸ, ಸಾಹಿತ್ಯ, ಸಂಸ್ಕೃತಿ ಹಾಗೂ ಕಲೆಗೆ ಸಂಬಂಧಿಸಿದ ಎಲ್ಲಾ ರೀತಿಯ ಸಂಶೋಧನಾ ಗ್ರಂಥಗಳು, ಇತರ ಭಾಷೆಗಳಿಂದ ಕನ್ನಡ ಅನುವಾದಗೊಂಡ ಗ್ರಂಥಗಳು, ಶಾಸ್ತ್ರ ಗ್ರಂಥಗಳಿಗೆ ಬರೆದ ಟೀಕಾ ಗ್ರಂಥಗಳು ಹಾಗೂ ಜೈನ ಜಾನಪದಾಧಿಗಮಕಕ್ಕೆ (ಜೈನ್ ಫ್ಲೋಕ್ಲೋರ್) ಸಂಬಂಧಿಸಿದ ಗ್ರಂಥಗಳು ಪ್ರಶಸ್ತಿಯ ಪರಿಶೀಲನೆಗೆ ಅರ್ಹವಾಗಿರುತ್ತದೆ, ಒಂದಕ್ಕಿಂತ ಹೆಚ್ಚು ಪುಸ್ತಕಗಳು ಅತ್ಯುತ್ತಮವೆಂದು ಪರಿಗಣಿತವಾದರೆ ಬಹುಮಾನದ ಹಣವನ್ನು ಹಂಚಿ ವಿತರಿಸುವ ಹಕ್ಕು ಪರಿಷತ್ತಿಗಿರುತ್ತದೆ. ಸ್ಪರ್ಧೆಗೆ ಬಂದ ಪುಸ್ತಕಗಳನ್ನು ಹಿಂದಿರುಗಿಸಲಾಗುವುದಿಲ್ಲ.
ಬಹುಮಾನದ ಬಗ್ಗೆ ಪರಿಷತ್ತು ನೇಮಿಸುವ ತೀರ್ಪುಗಾರರ ಶಿಫಾರಸ್ಸು ಅಂತಿಮವಾಗಿರುತ್ತದೆ. ಸ್ಪರ್ಧೆಗೆ ಪುಸ್ತಕಗಳನ್ನು ಕಳುಹಿಸಲು ಕೊನೆಯ ದಿನಾಂಕ ಜೂ.30. ಗೌರವ ಕಾರ್ಯದರ್ಶಿಗಳು, ಕನ್ನಡ ಸಾಹಿತ್ಯ ಪರಿಷತ್ತು, ಪಂಪ ಮಹಾಕವಿ ರಸ್ತೆ, ಚಾಮರಾಜಪೇಟೆ, ಬೆಂಗಳೂರು-18 ಈ ವಿಳಾಸಕ್ಕೆ ಕಳುಹಿಸಬಹುದು.
ಮಾಹಿತಿಗೆ 080-26623584 ಸಂಪರ್ಕಿಸಬಹುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

