15ರಂದು ಕ್ರಿಕೆಟ್ ಅಕಾಡೆಮಿ ಉದ್ಘಾಟನೆ
ಶಿವಮೊಗ್ಗ: ಜಿಲ್ಲೆಯ ಪ್ರಸಿದ್ಧ ಕ್ರಿಕೆಟ್ ಪಟು ದಿ. ಎಂ.ವಿ. ಶೇಷಾಚಲ ಶೆಟ್ಟಿ ಅವರ ಹೆಸರಿನಲ್ಲಿ ಕ್ರಿಕೆಟ್ ಆಕಾಡೆಮಿ ಸ್ಥಾಪಿಸುತ್ತಿದ್ದು, ಮೇ 15ರಂದು ಉದ್ಘಾಟನೆಗೊಳ್ಳಲಿದೆ ಎಂದು ಆಕಾಡೆಮಿಯ ಅಧ್ಯಕ್ಷ ಡಿ.ಎಸ್. ಅರುಣ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಗರದ ಎನ್ಇಎಸ್ ಮೈದಾನದಲ್ಲಿ 15ರಂದು ನಡೆಯುವ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಶಿಕ್ಷಣ ಸಮಿತಿಯ ಕಾರ್ಯದರ್ಶಿ ಎಸ್.ವಿ. ತಿಮ್ಮಯ್ಯ, ವಿಧಾನಪರಿಷತ್ ಸದಸ್ಯ ಡಿ.ಎಚ್. ಶಂಕರಮೂರ್ತಿ ಹಾಗೂ ದಿ. ಎಂ.ವಿ.ಎಸ್. ಶೆಟ್ಟಿ ಅವರ ಕುಟುಂಬ ಸದಸ್ಯರು ಉಪಸ್ಥಿತರಿರುವರು ಎಂದು ತಿಳಿಸಿದರು.
ತರಬೇತಿ: ಶೇಷಾಚಲ ಅವರು ಮೂರು ವರ್ಷಗಳ ಹಿಂದೆ ನಿಧನರಾಗಿದ್ದು, ಇದೀಗ ಅವರ ಹೆಸರಿನಲ್ಲಿ ಅಕಾಡೆಮಿ ಸ್ಥಾಪಿಸಿವುದರ ಮೂಲಕ 16 ವರ್ಷದೊಳಗಿನ ಮಕ್ಕಳಿಗೆ ಬೇಸಿಗೆ ಶಿಬಿರ ಹಾಗೂ ವರ್ಷವಿಡಿ ಕ್ರಿಕೆಟ್ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದರು.
ಮೂರು ವಿವಿಧ ಹಂತದಲ್ಲಿ ತರಬೇತಿ ಏರ್ಪಡಿಸಲಾಗಿದ್ದು, ಆಸಕ್ತರು ವಿವರಗಳಿಗಾಗಿ-9886942617, 9844087990 ಸಂಪರ್ಕಿಸಲು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

