ಎಸ್ಸೆಸ್ಸೆಲ್ಸಿ: ಜಿಲ್ಲೆಗೆ 29 ನೇ ಸ್ಥಾನ
ಕ.ಪ್ರ.ವಾರ್ತೆ , ಶಿವಮೊಗ್ಗ , ಮೇ 7
ರಾಜ್ಯದೆಲ್ಲೆಡೆ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಜಿಲ್ಲೆಯ 15 ಸರ್ಕಾರಿ ಶಾಲೆ, 2 ಅನುದಾನಿತ ಶಾಲೆ, 34 ಅನುದಾನಿತ ಶಾಲೆಗಳು ಸೇರಿದಂತೆ 51 ಶಾಲೆಗಳು ಶೇ. 100 ರಷ್ಟು ಫಲಿತಾಂಶ ಪಡೆದಿದ್ದು, ಶೇ.77.87 ರಷ್ಟು ಪಡೆದುಕೊಂಡು ರಾಜ್ಯದಲ್ಲಿ 29ನೇ ಸ್ಥಾನದಲ್ಲಿದೆ.
ಜಿಲ್ಲೆಯಲ್ಲಿ ಪರೀಕ್ಷೆಗೆ ಕುಳಿತ 23,801 ವಿದ್ಯಾರ್ಥಿಗಳ ಪೈಕಿ 18,535 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
11,569 ಬಾಲಕರು ಹಾಗೂ 12,232 ವಿದ್ಯಾರ್ಥಿನಿಯರು ಪರೀಕ್ಷೆ ಎದುರಿಸಿದ್ದು, ಇದರಲ್ಲಿ 8,576 ಬಾಲಕರು ಹಾಗೂ 9,956 ವಿದ್ಯಾರ್ಥಿನಿಯರು ಉತ್ತೀರ್ಣರಾಗಿದ್ದಾರೆ.
ಜಿಲ್ಲೆಯ 424 ಶಾಲೆಗಳ ಪೈಕಿ 238 ಶಾಲೆಗಳಲ್ಲಿ ಶೇ.80 ಕ್ಕಿಂತ ಹೆಚ್ಚು ಫಲಿತಾಂಶ ಬಂದಿದ್ದು, 121 ಶಾಲೆಗಳಲ್ಲಿ ಶೇ. 60ರಿಂದ 80 ರಷ್ಟು, 49 ಶಾಲೆಗಳಲ್ಲಿ ಶೇ. 40ರಿಂದ 60ರಷ್ಟು, 15 ಶಾಲೆಗಳಲ್ಲಿ ಶೇ.40ಕ್ಕಿಂತ ಕಡಿಮೆ ಹಾಗೂ 1 ಶಾಲೆಯಲ್ಲಿ (ಅನುದಾನ ರಹಿತ) ಶೂನ್ಯ ಫಲಿತಾಂಶ ಬಂದಿದೆ.
ಶೂನ್ಯ ಫಲಿತಾಂಶ: ಸೊರಬ ತಾಲೂಕಿನ ಹುರುಳಿ ಗ್ರಾಮದ ಶ್ರೀ ಮಾರುತಿ ಪ್ರೌಢಶಾಲೆ ಶೂನ್ಯ ಫಲಿತಾಂಶ ಪಡೆದು ಕೊನೆಯ ಸ್ಥಾನದಲ್ಲಿದೆ. ಈ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ 5 ಬಾಲಕ ಹಾಗೂ 3 ಬಾಲಕಿಯರು ಸೇರಿದಂತೆ ಎಂಟು ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದಾರೆ.
ಈ ಸಂಬಂಧ ಕನ್ನಡಪ್ರಭ ಡಿಡಿಪಿಐ ಎನ್.ಎಸ್. ಕುಮಾರ್ ಅವರನ್ನು ಸಂಪರ್ಕಿಸಿದಾಗ, ಈ ಬಾರಿ ಕಡಿಮೆ ಫಲಿತಾಂಶ ಬಂದಿದ್ದು, ಯಾವ ಶಾಲೆಗಳಲ್ಲಿ ಕಡಿಮೆ ಫಲಿತಾಂಶ ಎಂಬುದರ ಬಗ್ಗೆ ಮಾಹಿತಿ ಪಡೆದು ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಆಯಾ ತಾಲೂಕಿನ ಶಿಕ್ಷಣಾಧಿಕಾರಿಗಳು, ಶಾಲೆಯ ಮುಖ್ಯಸ್ಥರು ಸೇರಿದಂತೆ ಅಧಿಕಾರಿಗಳೊಂದಿಗೆ ಚರ್ಚಿಸಿ ಮುಂದಿನ ಶೈಕ್ಷಣಿಕ ವರ್ಷಕ್ಕೆ ಹೆಚ್ಚು ಫಲಿತಾಂಶ ಪಡೆಯುವಂತೆ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

