ಶಿವಮೊಗ್ಗ

ಘಟಾನುಘಟಿಗಳ ಸೋಲು

Published On :

ಕ.ಪ್ರ.ವಾರ್ತೆ, ಶಿವಮೊಗ್ಗ, ಮೇ 8
ಸೋತ ಪ್ರಮುಖರಲ್ಲಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪರಿಗೆ ಮೊದಲ ಸ್ಥಾನ. ಶಿವಮೊಗ್ಗ ಕ್ಷೇತ್ರದಲ್ಲಿ ಇವರ ಸೋಲು ಬಿಜೆಪಿಗೆ ಭಾರಿ ಅಘಾತ ನೀಡಿದೆ.
ಕಾಂಗ್ರೆಸ್ ಬಹು ನಿರೀಕ್ಷೆ ಇಟ್ಟುಕೊಂಡಿದ್ದ ಮಾಜಿ ಕೇಂದ್ರ ಸಚಿವ ಸಿ.ಎಂ. ಇಬ್ರಾಹಿಂ ಅವರು ಭದ್ರಾವತಿಯಲ್ಲಿ ಸೋಲು ಕಂಡಿದ್ದಾರೆ. ಕಾಂಗ್ರೆಸ್ ಟಿಕೆಟ್ ಸಿಗದೆ ಕೊನೆಯ ಕ್ಷಣದಲ್ಲಿ ಪಕ್ಷೇತರರಾಗಿ ಕಣಕ್ಕಿಳಿದು ಕೆಜೆಪಿ ಬೆಂಬಲ ಪಡೆದಿದ್ದ ಸಂಗಮೇಶ್‌ಗೆ ಗೆಲವು ಸಾಧ್ಯವಾಗಿಲ್ಲ.
ಕೆಜೆಪಿ ಅಭ್ಯರ್ಥಿ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥ ಗೌಡ ತೀರ್ಥಹಳ್ಳಿಯಲ್ಲಿ ಸೋಲು ಕಂಡಿದ್ದಾರೆ. ಮತ್ತೆ ಮೇಲೇಳುವ ಪ್ರಯತ್ನ ನಡೆಸಿದ್ದ ಬಿಜೆಪಿಯ ಆರಗ ಜ್ಞಾನೇಂದ್ರ ಅವರಿಗೂ ಗೆಲವು ಸಿಕ್ಕಿಲ್ಲ.
ಇನ್ನು ಕೊನೆಯ ಕ್ಷಣದಲ್ಲಿ ಜೆಡಿಎಸ ಟಿಕೆಟ್ ಪಡೆದು ಕಣಕ್ಕಿಳಿದಿದ್ದ ಬೇಳೂರು ಗೋಪಾಲಕೃಷ್ಣ ಅವರಿಗೆ ಸಾಗರ ಕ್ಷೇತ್ರದಲ್ಲಿ ಈ ಹಿಂದಿನ ಎರಡು ಚುನಾವಣೆಯಲ್ಲಿ ಆದಂತೆ ಸೋದರ ಮಾವ ಕಾಗೋಡು ತಿಮ್ಮಪ್ಪ ಅವರನ್ನು ಸೋಲಿಸಲು ಸಾಧ್ಯವಾಗಿಲ್ಲ. ಸಜ್ಜನ ರಾಜಕಾರಣಿ ಕೆಜೆಪಿಯ ಬಿ.ಆರ್. ಜಯಂತ್ ಎರಡನೇ ಸ್ಥಾನಕ್ಕೆ ತೃಪ್ತಿ ಪಡಬೇಕಾಗಿದೆ.
ಮಾಜಿ ಸಚಿವ ಹರತಾಳು ಹಾಲಪ್ಪ ಅವರು ಸೊರಬದಿಂದ ಮತ್ತೆ ಯಡಿಯೂರಪ್ಪ ಅವರ ನೆರಳಿನಲ್ಲಿ ಮತ್ತೆ ಅರಳುವ ಪ್ರಯತ್ನ ಫಲ ನೀಡಿಲ್ಲ. ಸಾರೇಕೊಪ್ಪ ಬಂಗಾರಪ್ಪ ಅವರ ಪ್ರಭಾವಳಿ ಅವರ ಪುತ್ರ ಮಧು ಬಂಗಾರಪ್ಪ ಅವರಿಗೆ ಸಿಕ್ಕರೆ, ಸಹೋದರ ಕುಮಾರ್ಬ್‌ಂಗಾರಪ್ಪ ಇದೇ ಕ್ಷೇತ್ರದಿಂದ ಸೋಲು ಕಂಡಿದ್ದಾರೆ.
ಹಿರಿಯ ರಾಜಕಾರಣಿ ಜಿ. ಬಸವಣ್ಯಪ್ಪ ಅವರು 6ನೇ ಬಾರಿ ಗೆಲ್ಲುವ ಪ್ರಯತ್ನ ಫಲ ನೀಡಿಲ್ಲ. ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಿಂದ ಸೋತಿದ್ದಾರೆ. ಅದೇ ರೀತಿ ಕಾಂಗ್ರೆಸ್‌ನ ಕರಿಯಣ್ಣ ಅವರಿಗೂ ಈ ಕ್ಷೇತ್ರದಿಂದ ಗೆಲ್ಲಲು ಸಾಧ್ಯವಾಗಿಲ್ಲ.
ಯಡಿಯೂರಪ್ಪ ಅವರನ್ನು ಸೋಲಿಸಲೇಬೇಕೆಂದು ಭಾರಿ ಶ್ರಮ ಪಟ್ಟಿದ್ದ ಕಾಂಗ್ರೆಸ್‌ನ ಶಾಂತವೀರಪ್ಪಗೌಡರಿಗೆ ಕೊನೆಗೂ ಗೆಲವು ಸಾಧ್ಯವಾಗಲಿಲ್ಲ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.