ಕಾಗೋಡು ಗೆಲವು: ಸಂಭ್ರಮಿಸಿದ ಕಾರ್ಯಕರ್ತರು
ಸಾಗರ: ಬುಧವಾರ ಬೆಳಗ್ಗೆ ಕಾಗೋಡು ತಿಮ್ಮಪ್ಪನವರ ಗೆಲುವು ಘೋಷಣೆಯಾಗುತ್ತಿದ್ದಂತೆ ಸಾಗರ ಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮಕ್ಕೆ ಪಾರವೇ ಇರಲಿಲ್ಲ. ಕೆಲವೇ ನಿಮಿಷಗಳಲ್ಲಿ ಪಟ್ಟಣದ ಎಲ್ಲ ಬೀದಿಗಳಲ್ಲಿ ಕಾರ್ಯಕರ್ತರು ವಿಜೃಂಭಿಸುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.
ಕಾಗೋಡು ಗೆಲುವಿನ ಸುದ್ದಿ ತಿಳಿಯುತ್ತಿದ್ದಂತೆ ಪಟ್ಟಣದ ಎಲ್ಲ ರಸ್ತೆಗಳು ಕಾಂಗ್ರೆಸ್ ಕಚೇರಿಯತ್ತ ಮುಖ ಮಾಡಿದ್ದವು. ಗಾಂಧಿಮಂದಿರಕ್ಕೆ ತಂಡೋಪತಂಡವಾಗಿ ಹರಿದುಬಂದ ಕಾರ್ಯಕರ್ತರು, ಕಾಗೋಡರ ಅಭಿಮಾನಿಗಳು ಹರ್ಷೋದ್ಘಾರ ಮಾಡಿ, ಪರಸ್ಪರ ಬಣ್ಣ ಎರಚಿಕೊಂಡು, ಪಟಾಕಿ ಸಿಡಿಸಿ, ಕುಣಿದು ಕುಪ್ಪಳಿಸಿ ಸಂಭ್ರಮಿಸಿದರು.
ಮೆರವಣಿಗೆ: ಪ್ರಮುಖ ಬೀದಿಗಳಲ್ಲಿ ಉತ್ಸಾಹದಿಂದ ಮೆರವಣಿಗೆ ನಡೆಸಿದ ಅಭಿಮಾನಿಗಳು ಪ್ರಮುಖ ವಣತ್ತಗಳಲ್ಲಿ ಪಟಾಕಿ ಸಿಡಿಸಿ, ಜಯಕಾರ ಕೂಗಿ ವಿಜಯೋತ್ಸವ ಆಚರಿಸಿದರು. ಇಡೀ ದಿನ ಕಾಂಗ್ರೆಸ್ ಕಚೇರಿಯಲ್ಲಿ ಜನಜಾತ್ರೆ ಸೇರಿತ್ತು. ಸಂಜೆ ಕಾಗೋಡು ತಿಮ್ಮಪ್ಪನವರು ಸಾಗರ ಪಟ್ಟಣಕ್ಕೆ ಆಗಮಿಸುತ್ತಿದ್ದಂತೆ ಶಿವಮೊಗ್ಗ ರಸ್ತೆಯಲ್ಲಿರುವ ಪ್ರವಾಸಿ ಮಂದಿರದ ಎದುರಿನಲ್ಲಿ ಸಾವಿರಾರು ಜನರು ಜಮಾಯಿಸಿ ತಮ್ಮ ನೆಚ್ಚಿನ ನಾಯಕನನನು ಬರಮಾಡಿಕೊಂಡು ಹಾರ ತುರಾಯಿ ಹಾಕಿ ಸ್ವಾಗತಿಸಿದರು. ತಿಮ್ಮಪ್ಪನವರನ್ನು ಮೆರವಣಿಗೆಯ ಮೂಲಕ ಪಕ್ಷದ ಕಚೇರಿಯವರೆಗೆ ಕರೆತರಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

