ಶಿವಮೊಗ್ಗ

ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತೇನೆ

Published On :

ಕ.ಪ್ರ.ವಾರ್ತೆ, ಶಿವಮೊಗ್ಗ,  ಮೇ 9
ಚುನಾವಣೆ ಸಂದರ್ಭದಲ್ಲಿ ಮಾತ್ರ ಎದುರಾಳಿಗಳಿರುತ್ತಾರೆಯೇ ಹೊರತು ಬೇರೆ ಸಂದರ್ಭದಲ್ಲಿ ಅಲ್ಲ. ಈಗ ಯಾರೂ ನನಗೆ ಶತ್ರುಗಳಲ್ಲ. ಎಲ್ಲ ಮತದಾರರ ಪ್ರತಿನಿಧಿಯಾಗಿ ಕ್ಷೇತ್ರದ ಅಭಿವೃದ್ಧಿಗೆ ಪ್ರಯತ್ನಿಸುತ್ತೇನೆ ಎಂದು ಶಿವಮೊಗ್ಗ ಕ್ಷೇತ್ರದ ನೂತನ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಹೇಳಿದ್ದಾರೆ.
ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸದ್ಯದಲ್ಲಿಯೇ ನೂತನ ನಗರಸಭೆ ಅಸ್ತಿತ್ವಕ್ಕೆ ಬರಲಿದೆ. ಕಸ ವಿಲೇವಾರಿ ತೆರಿಗೆ, ನೀರಿನ ಕಂದಾಯ ಕುರಿತಂತೆ ಹಲವು ಸಮಸ್ಯೆಗಳಿವೆ. ನಿವೇಶನರಹಿತರಿಗೆ ನಿವೇಶನ, ಮನೆಗಳ ನಿರ್ಮಾಣ ಬಾಕಿ ಇದೆ. ಆದ್ಯತೆಯ ಮೇಲೆ ಇವುಗಳತ್ತ ಗಮನ ಹರಿಸಲಾಗುವುದು ಎಂದು ಹೇಳಿದರು.
ಶಿವಮೊಗ್ಗ ನಗರಸಭೆಯನ್ನು ನಗರಪಾಲಿಕೆಯಾಗಿಸುವತ್ತ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಬಾಕಿ ಇರುವ ಎಲ್ಲ ಅಭಿವೃದ್ಧಿ ಕಾಮಗಾರಿಗಳನ್ನು ಪ್ರಾಮಾಣಿಕವಾಗಿ ಪೂರ್ಣಗೊಳಿಸಲಾಗುವುದು ಎಂದರು.
ಚುನಾವಣೆ ಸಂದರ್ಭದಲ್ಲಿ ನೀಡಿದ ಭರವಸೆಗಳನ್ನು ಈಡೇರಿಸಲಾಗುವುದು. ಮಾತು ಕಡಿಮೆ, ಕೆಲಸ ಜಾಸ್ತಿ ಎಂಬುದು ನನ್ನ ಆಶಯವಾಗಲಿದೆ ಎಂದು ತಿಳಿಸಿದರು.
ಕೃತಜ್ಞತೆಗಳು: ನಗರದ ವಿವಿಧ ಸಂಘಸಂಸ್ಥೆಗಳು, ಪಕ್ಷದ ಎಲ್ಲಾ ಮುಖಂಡರು, ಕಾರ್ಯಕರ್ತರು ಒಂದಾಗಿ ನನ್ನ ಗೆಲವಿಗೆ ಕಾರಣಕರ್ತರಾಗಿದ್ದಾರೆ. ಅವರೆಲ್ಲರಿಗೂ ನನ್ನ ಕೃತಜ್ಞತೆಗಳು ಎಂದ ಅವರು, ಎಲ್ಲಾ ಮತದಾರರಿಗೂ ಅಭಿನಂದನೆ ಸಲ್ಲಿಸಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಸ್.ಪಿ. ದಿನೇಶ್, ಜಿಲ್ಲೆಯಲ್ಲಿ ಮೂವರು ಶಾಸಕರನ್ನು ಮತದಾರರು ಗೆಲ್ಲಿಸಿ ಕಳುಹಿಸಿದ್ದಾರೆ. ಜಿಲ್ಲೆಯ ಎಲ್ಲಾ ಮತದಾರರಿಗೆ ಕೃತಜ್ಞತೆ ಸಲ್ಲಿಸುವುದಾಗಿ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮುಖಂಡರಾದ ಇಸ್ಮಾಯಿಲ್ ಖಾನ್, ಸುಂದರೇಶ್, ರುದ್ರೇಶ್ ಸೇರಿದಂತೆ ಹಲವರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.