ಶಿವಮೊಗ್ಗ

ನೀರು ಪೂರೈಕೆ ಘಟಕಕ್ಕೆ ಕಾಗೋಡು ಭೇಟಿ

Published On :

ಕ.ಪ್ರ.ವಾರ್ತೆ, ಸಾಗರ, ಮೇ 9
ಚುನಾವಣಾ ಫಲಿತಾಂಶದ ಮಾರನೆ ದಿನವೇ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಕಾಗೋಡು ತಿಮ್ಮಪ್ಪನವರು ಜನರ ಸಮಸ್ಯೆಗಳತ್ತ ಮುಖ ಮಾಡಿದ್ದಾರೆ.
   ನಗರಕ್ಕೆ ನೀರು ಪೂರೈಕೆ ಮಾಡುವ ನೀರು ಶುದ್ಧೀಕರಣ ಘಟಕಕ್ಕೆ ಗುರುವಾರ ಪತ್ರಕರ್ತರೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಘಟಕದ ಅಸಮರ್ಪಕ ನಿರ್ವಹಣೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಇದರಿಂದ ನೀರು ಸರಬರಾಜು ಮಾಡಿದರೆ ಜನರು ಅನಾರೋಗ್ಯಕ್ಕೆ ತುತ್ತಾಗುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದರು.
ಹಣ ಬಿಡುಗಡೆಗೆ ಕ್ರಮ: ಸದರಿ ಘಟಕವು ಶಿಥಿಲಾವಸ್ಥೆಯಲ್ಲಿದೆ. ತುರ್ತು ರಿಪೇರಿಗೆ 20 ಲಕ್ಷ ಪ್ರಸ್ತಾವನೆಯನ್ನು ಸ್ಥಳೀಯ ಅಭಿಯಂತರರು ಸಲ್ಲಿಸಿದ್ದರೂ ಈವರೆಗೆ ಹಣ ಬಿಡುಗಡೆ ಮಾಡಿಲ್ಲ. ಈಗಾಗಲೇ ಶುದ್ಧೀಕರಣ ಘಟಕವನ್ನು ಪೂರ್ಣವಾಗಿ ಪುನರ್ ನಿರ್ಮಾಣ ಮಾಡಲು ಸುಮಾರು 60 ರಿಂದ 70 ಲಕ್ಷ ವೆಚ್ಚದ ಯೋಜನೆ ಸಿದ್ಧಗೊಂಡಿದೆ. ಅದನ್ನು ತುರ್ತು ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ತಾಲೂಕಿನಾದ್ಯಂತ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿದ್ದು, ನೀರಿಲ್ಲದೇ ಜನರು ಪರಿತಪಿಸುತ್ತಿದ್ದಾರೆ. ಕುಡಿಯುವ ನೀರು ಪೂರೈಕೆ ಸಂಬಂಧ ತುರ್ತು ನಿಗಾವಹಿಸಬೇಕಾಗಿದ್ದ ಟಾಸ್ಕ್ ಫೋರ್ಸ್ ಸಮಿತಿ ಅಧ್ಯಕ್ಷರಾಗಿದ್ದ ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು ಅವರ ನಿರ್ಲಕ್ಷದಿಂದ ನೀರು ಪೂರೈಕೆ ಸಂಬಂಧ ಯಾವುದೇ ಕ್ರಮ ಕೈಗೊಂಡಿಲ್ಲ. ಕುಡಿಯುವ ನೀರು ಪೂರೈಕೆಗೆ ನೀತಿಸಂಹಿತೆಯ ಅಡ್ಡಿ ಇಲ್ಲದಿದ್ದರೂ ಅಧಿಕಾರಿಗಳೂ ನಿರ್ಲಕ್ಷ್ಯ ತೋರಿದ್ದಾರೆ ಎಂದು ವಿಷಾದಿಸಿದರು.
ಟ್ಯಾಂಕರ್ ನೀರಿಗೆ ವ್ಯವಸ್ಥೆ: ಈಗಾಗಲೇ ನಗರ ಪ್ರದೇಶದಲ್ಲಿ 22 ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುತ್ತಿದ್ದು, ಇನ್ನೂ 10 ಟ್ಯಾಂಕರ್ ವ್ಯವಸ್ಥೆ ಮಾಡುವಂತೆ ಪೌರಾಯುಕ್ತರಿಗೆ ಸೂಚನೆ ನೀಡಲಾಗಿದೆ.
ಗ್ರಾಮಾಂತರ ಪ್ರದೇಶದಲ್ಲಿ ಸಹ ನೀರಿನ ಸಮಸ್ಯೆಯಿದ್ದು, ಅಲ್ಲಿಯೂ ಟ್ಯಾಂಕರ್‌ಗಳ ಮೂಲಕ ನೀರು ಸರಬರಾಜು ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಕುಡಿಯುವ ನೀರು ಪೂರೈಕೆ ಮಾಡಲು ತುರ್ತು ಹಣ ಬಿಡುಗಡೆ ಮಾಡುವಂತೆ ಜಿಲ್ಲಾಧಿಕಾರಿಗಳ ಮೇಲೆ ಒತ್ತಡ ಹೇರಲಾಗುವುದು ಎಂದು ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.