ಶಿವಮೊಗ್ಗ

ಬಸವ ಜಯಂತಿ ಆಚರಣೆಗೆ ಸಿದ್ಧತೆ

Published On :

ಕ.ಪ್ರ.ವಾರ್ತೆ, ಶಿವಮೊಗ್ಗ,  ಮೇ 9
ಮೇ 13ರಂದು ವಿಶ್ವ ಮಾನವ ಜಗಜ್ಯೋತಿ ಬಸವೇಶ್ವರ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸಲು ಜಿಲ್ಲಾಡಳಿತ ಸಿದ್ಧತೆ ನಡೆಸಿದೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಸಭೆ, ನಗರಾಭಿವೃದ್ಧಿ ಪ್ರಾಧಿಕಾರ ಹಾಗೂ ಶ್ರೀ ಬಸವೇಶ್ವರ ವೀರಶೈವ ಸಮಾಜ ಸೇವಾ ಸಂಘ ಸಂಯುಕ್ತ ಆಶ್ರಯದಲ್ಲಿ ಬಸವ ಜಯಂತಿ ಅದ್ಧೂರಿ ಆಚರಣೆಗೆ ಜಿಲ್ಲಾಡಳಿತ ಗುರುವಾರ ವೀರಶೈವ ಸಮಾಜ ಹಾಗೂ ವಿವಿಧ ಸಮುದಾಯದ ಮುಖಂಡರೊಂದಿಗೆ ಪೂರ್ವ ಸಿದ್ಧತಾ ಸಭೆ ನಡೆಸಿತು.
ಮೆರವಣಿಗೆ: ಮೇ 13ರಂದು ಸಂಜೆ 4 ಗಂಟೆಗೆ ಗಾಂಧಿ ಬಜಾರ್‌ನಲ್ಲಿರುವ ಬಸವೇಶ್ವರ ದೇವಸ್ಥಾನದಿಂದ ವೀರಗಾಸೆ, ಡೊಳ್ಳು, ಹಲಗೆ, ಮಂಗಳವಾದ್ಯ ಮುಂತಾದ ವಾದ್ಯಗಳೊಂದಿಗೆ ಮೆರವಣಿಗೆ ಶಿವಪ್ಪನಾಯಕ ವೃತ್ತ, ನೆಹರು ರಸ್ತೆ, ಗೋಪಿ ಸರ್ಕಲ್, ಕೋರ್ಟ್ ಸರ್ಕಲ್ ಮೂಲಕ ಕುವೆಂಪು ರಂಗಮಂದಿರಕ್ಕೆ ಬಂದು ಸೇರಲಿದೆ.
ಕುವೆಂಪು ರಂಗಮಂದಿರದಲ್ಲಿ ಸಂಜೆ 6ಕ್ಕೆ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಬೆಕ್ಕಿನಕಲ್ಮಠದ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ, ಬಸವಕೇಂದ್ರದ ಬಸವ ಮರುಳಸಿದ್ಧ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಅಲ್ಲದೆ, ಜಿಲ್ಲೆಯ ಸಂಸದರು, ವಿಧಾನ ಪರಿಷತ್ ಸದಸ್ಯರು, ಜಿಲ್ಲಾ ಪಂಚಾಯ್ತಿ ಅಧ್ಯಕ್ಷರು, ನೂತನವಾಗಿ ಚುನಾಯಿತರಾದ ಶಾಸಕರನ್ನು ಆಹ್ವಾನಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.
ವಿಶೇಷ ಉಪನ್ಯಾಸ: ಧಾರವಾಡದ ಖ್ಯಾತ ವಚನ ಗಾಯಕರಾದ ಸುಜಾತ ಗೌರವ್ ಅವರಿಂದ ವಚನ ಗಾಯನ ಹಾಗೂ ಇಂದೂಮತಿ ಸಾಲಿಮಠ್ ಅವರಿಂದ ಬಸವೇಶ್ವರರ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ತೀರ್ಮಾನಿಸಲಾಯಿತು.
ಸಭೆಯ ಅಧ್ಯಕ್ಷತೆಯನ್ನು ಅಪರ ಜಿಲ್ಲಾಧಿಕಾರಿ ಎಂ.ಕೆ. ಶ್ರೀರಂಗಯ್ಯ ವಹಿಸಿದ್ದರು. ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ. ಬಸವರಾಜು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎನ್. ಹರಿಕುಮಾರ್, ಸಮಾಜದ ಮುಖಂಡರಾದ ಸುಭಾಷ್, ದಿನೇಶ್, ವಿವಿಧ ಸಂಘ-ಸಂಸ್ಥೆಗಳ ಮುಖ್ಯಸ್ಥರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.