ಕೃತಜ್ಞತೆ ಅರ್ಪಿಸಿದ ಆರಗ ಜ್ಞಾನೇಂದ್ರ
ತೀರ್ಥಹಳ್ಳಿ: ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಆರಗ ಜ್ಞಾನೇಂದ್ರ ಕ್ಷೇತ್ರದ ಮತದಾರರಿಗೆ ಕೃತಜ್ಞತೆ ಅರ್ಪಿಸಿದ್ದಾರೆ.
ಚುನಾವಣೆಯಲ್ಲಿ ಸೋಲು, ಗೆಲುವು ಎರಡನ್ನೂ ಕಂಡಿರುವ ತಮಗೆ ಸೋಲು ಸವಾಲಾಗುತ್ತದೆ ಎಂದು ತಿಳಿದಿದ್ದು, ಅದನ್ನು ಸ್ವೀಕರಿಸಿ ಎಂದಿನಂತೆ ಜನರ ಸೇವೆ ಮಾಡುತ್ತೇನೆ ಎಂದು ಈ ಸಂದರ್ಭದಲ್ಲಿ ತಿಳಿಸಿದ್ದಾರೆ.
ಎಸ್ಸೆಸ್ಸೆಎಲ್ಸಿಯಲ್ಲಿ ಉತ್ತಮ ಫಲಿತಾಂಶ
ತೀರ್ಥಹಳ್ಳಿ: ಈ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಸರ್ಕಾರಿ ಪದವಿಪೂರ್ವ ಪ್ರೌಢಶಾಲಾ ವಿದ್ಯಾರ್ಥಿಗಳು ಗಣನೀಯ ಸಾಧನೆ ಮಾಡಿ ಶಾಲೆಗೆ ಕೀರ್ತಿತಂದಿದ್ದಾರೆ. 39 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 70 ಪ್ರಥಮ ದರ್ಜೆ, 49 ದ್ವಿತೀಯ ದರ್ಜೆ ಹಾಗೂ 68 ತೃತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.
ಅನನ್ಯ ಎಂ.ಡಿ ಶೇ.96 ಅಂಕ, ಇಂಚರ ಯು.ಆರ್.ಶೇ.95.68, ಹೆಚ್.ವಿ ವಿಂದ್ಯಾ ಶೇ.95.68 ಅಂಕ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ. ಶಾಲೆಯ ಪ್ರಾಂಶುಪಾಲರು, ಆಡಳಿತವರ್ಗ, ಹಾಗೂ ಶಿಕ್ಷಕ ವೃಂದ ವಿದ್ಯಾರ್ಥಿಗಳನ್ನು ಅಭಿವಂದಿಸಿದ್ದಾರೆ.
ಮತದಾರರಿಗೆ ಕೃತಜ್ಞತೆ
ತೀರ್ಥಹಳ್ಳಿ: ಕೆಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಆರ್.ಎಂ. ಮಂಜುನಾಥಗೌಡರು ಕ್ಷೇತ್ರದ ಮತದಾರರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ತೀರ್ಥಹಳ್ಳಿ ಕ್ಷೇತ್ರದಲ್ಲಿ ಪಕ್ಷ ಸಂಘಟನೆ ಚೆನ್ನಾಗಿಯೇ ಆಗಿದ್ದ, ಕ್ಷೇತ್ರದ ಮತದಾರರು ಎರಡನೇ ಸ್ಥಾನಕ್ಕೆ ತಂದಿದ್ದಾರೆ. ಸೋಲಿನಿಂದ ಬೇಸರವಿಲ್ಲ. ಶಾಸಕರಾಗಿ ಚುನಾಯಿತರಾದ ಕಿಮ್ಮನೆ ರತ್ನಾಕರ್ ಅವರಿಗೆ ಕ್ಷೇತ್ರದ ಅಭಿವೃದ್ಧಿ ಕೆಲಸದಲ್ಲಿ ಸಹಕರಿಸುತ್ತೇನೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

