ಬಿಎಫ್‌ಎ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
ಶಿವಮೊಗ್ಗ: ಮೈಸೂರಿನಲ್ಲಿರುವ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜಿನಲ್ಲಿ ಪ್ರಥಮ ಮೂಲ ತರಗತಿ ಅಥವಾ ಪ್ರಥಮ ಬಿ.ಎಫ್.ಎ. ತರಗತಿಗಳ ಪ್ರವೇಶಕ್ಕಾಗಿ 2013-14ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಅರ್ಜಿ ಆಹ್ವಾನಿಸಿದೆ. ಪ್ರಥಮ ಮೂಲ ತರಗತಿ- ಪ್ರಥಮ ಬಿ.ಎಫ್.ಎ. ತರಗತಿಗೆ ಚಿತ್ರಕಲೆ, ಶಿಲ್ಪಕಲೆ, ಅಚ್ಚುಕಲೆ (ಗ್ರಾಫಿಕ್ಸ್), ಅನ್ವಯಕಲೆ, :,ಾಯಚಿತ್ರ ಮತ್ತು ಛಾಯಾ ಪತ್ರಿಕೋದ್ಯಮ ಹಾಗೂ ಕಲಾ ಇತಿಹಾಸ ಇವುಗಳಿರುತ್ತವೆ. ಪ್ರಥಮ ಮೂಲ ತರಗತಿಗೆ ವಿದ್ಯಾರ್ಹತೆ ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದು, 22 ವರ್ಷ ಗರಿಷ್ಟ ವಯೋವುತಿಯವರಾಗಿರಬೇಕು. ಪ್ರಥಮ ಬಿಎಫ್‌ಎ ತರಗತಿಗೆ ದ್ವಿತೀಯ ಮೂಲ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದು, 24 ವರ್ಷ ಗರಿಷ್ಟ ವಯೋವುತಿಯವರಾಗಿರಬೇಕು.
ಪ್ರಥಮ ಮೂಲ ತರಗತಿ- ಪ್ರಥಮ ಬಿಎಫ್‌ಎ ತರಗತಿಗಳಿಗೆ ಅರ್ಜಿ ಸಲ್ಲಿಸಲು ಜೂನ್ 4 ಅಂತಿಮ ದಿನವಾಗಿರುತ್ತದೆ. ಜೂನ್ 11ರಂದು ಬೆಳಿಗ್ಗೆ 11 ಗಂಟೆಗೆ ಅರ್ಹತಾ ಪರೀಕ್ಷೆ ಹಾಗೂ ಮಧ್ಯಾಹ್ನ 2 ಗಂಟೆಗೆ ವೈಯಕ್ತಿಕ ಸಂದರ್ಶನ ನಡೆಸಲಾಗುವುದು. ಶುಲ್ಕ ಪಾವತಿಗೆ ಜೂನ್ 15ರಂದು ಅಂತಿಮವಾಗಿರುತ್ತದೆ. ತರಗತಿಗಳು ಜೂನ್ 17ರಂದು ಪ್ರಾರಂಭವಾಗಲಿದೆ ಎಂದು ಕಾವಾ ಮೈಸೂರಿನ ಡೀನ್‌ರವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

