ಶಿವಮೊಗ್ಗ

ಸಾಮೂಹಿಕ ವಿವಾಹ: ನೋಂದಣಿ ಕಡ್ಡಾಯ

Published On :

ಶಿವಮೊಗ್ಗ: ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯ ಸುತ್ತೋಲೆ ಅನ್ವಯ ಸಂಘಗಳು, ಸಂಸ್ಥೆಗಳು, ಖಾಸಗಿ ಟ್ರಸ್ಟ್‌ಗಳು, ದೇವಸ್ಥಾನದ ಟ್ರಸ್ಟ್‌ಗಳು, ಸೊಸೈಟಿಗಳು ಹಾಗೂ ಖಾಸಗಿ ವ್ಯಕ್ತಿಗಳು ಸಾಮೂಹಿಕ ವಿವಾಹಗಳನ್ನು ಆಯೋಜಿಸುವ ಕುರಿತು ಕಂದಾಯ ಇಲಾಖೆಯಿಂದ ಸಾಮೂಹಿಕ ವಿವಾಹ ನಡೆಸುವ ಬಗ್ಗೆ ಮಾರ್ಗಸೂಚಿಯನ್ನು ಹೊರಡಿಸಿದ್ದು, ಈ ಮಾರ್ಗಸೂಚಿಯಲ್ಲಿ ವಿಧಿ ವಿಧಾನಗಳನ್ನು ಹಾಗೂ ನೋಂದಣಿಯನ್ನು ಸಹ ತಿಳಿಸಿದ್ದು, ಅದರಂತೆ ನಡೆಸುವಂತೆ ಸೂಚಿಸಿದೆ. ಆಯೋಜಕರು ಜಿಲ್ಲಾ ನೋಂದಣಾಧಿಕಾರಿಗಳ ಬಳಿ ನೋಂದಾಯಿಸುವ ಸಂದರ್ಭದಲ್ಲಿ ಆಯೋಜಕರ ಹೆಸರು, ವಿಳಾಸ ಹಾಗೂ ವಿಳಾಸದ ಪ್ರಮಾಣ ಪತ್ರ, ಟ್ರಸ್ಟ್ ಅಥವಾ ಸೋಸೈಟಿಗಳಾಗಿದ್ದಲ್ಲಿ ನೋಂದಣಿ ಪ್ರಮಾಣ ಪತ್ರ, ಸಾಮೂಹಿಕ ವಿವಾಹಗಳ ಸಂದರ್ಭದಲ್ಲಿ ಯಾವುದೇ ಬಾಲ್ಯ ವಿವಾಹಗಳು ನಡೆಯುವುದಿಲ್ಲವೆಂಬ ಪ್ರಮಾಣ ಪತ್ರ, ಇಲ್ಲದೇ ಸಾಮೂಹಿಕ ವಿವಾಹ ನಡೆಸುವಂತಿಲ್ಲವೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ. ಮಾಹಿತಿಗೆ ದೂ.249034 ಸಂಪರ್ಕಿಸಬಹುದು.

ಶಿಕಾರಿಪುರ ಹಾಸ್ಟಲ್‌ಗೆ ಅರ್ಜಿ ಆಹ್ವಾನ
ಶಿವಮೊಗ್ಗ: ಶಿಕಾರಿಪುರ ತಾಲೂಕಿನಲ್ಲಿ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಇಲಾಖೆ ವತಿಯಿಂದ ನಡೆಯುತ್ತಿರುವ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್‌ನಂತರದ ವಿದ್ಯಾರ್ಥಿ ನಿಲಯಗಳಲ್ಲಿ ಹಾಗೂ ಖಾಸಗಿ ವಿದ್ಯಾರ್ಥಿ ನಿಲಯಗಳಲ್ಲಿ 2013-14ನೇ ಸಾಲಿಗೆ ಖಾಲಿ ಇರುವ ಸ್ಥಾನಗಳನ್ನು ಭರ್ತಿ ಮಾಡಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಮೆಟ್ರಿಕ್ ಪೂರ್ವ ಬಾಲಕ, ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ವಿದ್ಯಾರ್ಥಿಗಳು ಜೂನ್ 10ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.