8ನೇ ತರಗತಿ ಉನ್ನತಿಕರಿಸುವ ಪ್ರಕ್ರಿಯೆಗೆ ತಡೆ
ಶಿವಮೊಗ್ಗ: ಮಕ್ಕಳ ಶಿಕ್ಷಣ ಹಕ್ಕು ಕಾಯ್ದೆ-2009ರಂತೆ ಸರ್ಕಾರವು ಪ್ರಾಥಮಿಕ ಶಿಕ್ಷಣವನ್ನು 1-8ನೇ ತರಗತಿಯವರೆಗೆ ನಡೆಸಲು ಹಂತ-ಹಂತವಾಗಿ ಅಗತ್ಯ ಕ್ರಮ ಕೈಗೊಳ್ಳುತ್ತಿದ್ದು, ಈ ನಿಟ್ಟಿನಲ್ಲಿ 2013-14ನೇ ಸಾಲಿನಲ್ಲಿ ಉದ್ದೇಶಿಸಿದ್ದ 1 ರಿಂದ 7ನೇ ತರಗತಿ ನಡೆಯುತ್ತಿದ್ದ ಸರ್ಕಾರಿ, ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ 8ನೇ ತರಗತಿಯನ್ನು ಉನ್ನತೀಕರಿಸುವ ಪ್ರಕ್ರಿಯೆಯನ್ನು ಸದ್ಯಕ್ಕೆ ತಡೆ ಹಿಡಿಯಲಾಗಿದೆ.
ಆದರೆ ಸರ್ವ ಶಿಕ್ಷಣ ಅಭಿಯಾನ ಯೋಜನೆಯಡಿ ಈವರೆಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ 8ನೇ ತರಗತಿಗಳನ್ನು ಉನ್ನತೀಕರಿಸಿ ನಡೆಸುತ್ತಿರುವ ಶಾಲೆಗಳಲ್ಲಿ ಯಥಾ ಪ್ರಕಾರ 8ನೇ ತರಗತಿಗಳು ಮುಂದುವರೆಯುತ್ತವೆ.
ಬದಲಾವಣೆ ಇರುವುದಿಲ್ಲ: ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರೌಢಶಾಲೆಗಳಲ್ಲಿ 8 ರಿಂದ 10ನೇ ತರಗತಿಯವರೆಗೆ ನಡೆಯುತ್ತಿರುವ ಸಂದರ್ಭದಲ್ಲಿ 8ನೇ ತರಗತಿಯನ್ನು ಹಿರಿಯ ಪ್ರಾಥಮಿಕ ಶಾಲಾ ವಿಭಾಗ ಎಂದು ಪರಿಗಣಿಸಿ ಪ್ರತ್ಯೇಕವಾಗಿ ದಾಖಲಾತಿ ವಹಿ, ಹಾಜರಾತಿ ವಹಿ ಇತ್ಯಾದಿಗಳನ್ನು ನಿರ್ವಹಿಸುವುದು ಹಾಗೂ ಪ್ರೌಢಶಾಲೆಯ ಎಲ್ಲಾ ಮೂಲಭೂತ ಸೌಕರ್ಯಗಳನ್ನು ನೀಡಿ ಪ್ರೌಢಶಾಲಾ ಶಿಕ್ಷಕರುಗಳಿಂದಲೇ ಬೋಧನೆಯನ್ನು ನಡೆಸಬೇಕಾಗಿರುತ್ತದೆ.ದಾಖಲಾತಿಗಳನ್ನು 8ನೇ ತರಗತಿಗೆ ಸಂಬಂಧಿಸಿದಂತೆ ಪ್ರತ್ಯೇಕವಾಗಿ ನಿರ್ವಹಿಸುವುದನ್ನು ಹೊರತುಪಡಿಸಿ ಇತರೆ ಯಾವುದೇ ಬದಲಾವಣೆಗಳು ಇರುವುದಿಲ್ಲ.
ಅನುದಾನರಹಿತ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಈಗಾಗಲೇ ಇಲಾಖೆಯಿಂದ ಅನುಮತಿ ಪಡೆದು ಮಾಧ್ಯಮವಾರು 1 ರಿಂದ 7ನೇ ತರಗತಿ ನಡೆಸುತ್ತಿದ್ದು, ಇದೀಗ ಆಡಳಿತ ಮಂಡಳಿಯವರು ಅದೇ ಶಾಲೆಯಲ್ಲಿ 8ನೇ ತರಗತಿಯನ್ನು ಪ್ರಸಕ್ತ ವರ್ಷದಿಂದ ಮುಂದುವರೆಸಿ ಪ್ರಾರಂಭಿಸಲು ಇಚ್ಚಿಸಿದಲ್ಲಿ ಕ್ಷೇತ್ರ ಶಿಕ್ಷಣಾಧಿಕರಿಗಳ ಮೂಲಕ ಪ್ರಸ್ತಾವನೆಯನ್ನು ಉಪನಿರ್ದೇಶಕರಿಗೆ ಸಲ್ಲಿಸಿ ಇಲಾಖೆಯಿಂದ ಅನುಮತಿ ಪಡೆದುಕೊಳ್ಳುವಂತೆ ಈ ಮೂಲಕ ತಿಳಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿಗೆ ಕರ್ತವ್ಯದ ಸಮಯದಲ್ಲಿ ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ.
ಶಿಕಾರಿಪುರ ಮಹಿಳಾ ಹೊಲಿಗೆ ತರಬೇತಿ ಅರ್ಜಿ ಆಹ್ವಾನ
ಶಿವಮೊಗ್ಗ: ಶಿಕಾರಿಪುರ ಪಟ್ಟಣದಲ್ಲಿ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಇಲಾಖೆ ವತಿಯಿಂದ ನಡೆಯುತ್ತಿರುವ ಮಹಿಳಾ ಹೊಲಿಗೆ ತರಬೇತಿ ಕೇಂದ್ರದಲ್ಲಿ ಹೊಲಿಗೆ ತರಬೇತಿ ಪಡೆಯಲು ತಾಲೂಕಿನ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ತರಬೇತಿಗೆ ಸೇರ ಬಯಸುವ ಅಭ್ಯರ್ಥಿಗಳು ಹಿಂದುಳಿದ ವರ್ಗಗಳಿಗೆ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳಿಗೆ ಸೇರಿದವರಾಗಿರಬೇಕು. ಪರಿಶಿಷ್ಟ ಜಾತಿ, ಪಂಗಡ ಅಭ್ಯರ್ಥಿಗಳನ್ನು ಹೊರತುಪಡಿಸಿ ಉಳಿದ ಪ್ರವರ್ಗಗಳ ಅಭ್ಯರ್ಥಿಗಳ ಕುಟುಂಬದ ವಾರ್ಷಿಕ ಆದಾಯ 44,500 ಮಿತಿಯೊಳಗಿರಬೇಕು. 18ರಿಂದ 35 ವರ್ಷದೊಳಗಿನ ವಯೋವುತಿ ಹೊಂದಿರಬೇಕು. ಆಸಕ್ತರು ಹೆಚ್ಚಿನ ವಿವರ ಹಾಗೂ ಅರ್ಜಿ ನಮೂನೆಗಳನ್ನು ಶಿಕಾರಿಪುರ ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳಲ್ಲಿ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಜೂ.5ರೊಳಗೆ ಸಲ್ಲಿಸಲು ಕೋರಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

