ಶಿವಮೊಗ್ಗ

ಸ್ಮಾರ್ಟ್ ಕಾರ್ಡ್ ಅವಧಿ ವಿಸ್ತರಣೆ

Published On :

ಶಿವಮೊಗ್ಗ: ರಾಷ್ಟ್ರೀಯ ಸ್ವಾಸ್ಥ್ಯ ಬಿಮಾ ಯೋಜನೆಯಡಿ ಶಿವಮೊಗ್ಗ ಜಿಲ್ಲೆಯಲ್ಲಿ 2012-13ನೇ ಸಾಲಿಗೆ ಫಲಾನುಭವಿಗಳ ನೋಂದಣಿ ಮಾಡಿ ಸ್ಮಾರ್ಟ್ ಕಾರ್ಡ್‌ನ್ನು ವಿತರಿಸಲಾಗಿರುತ್ತದೆ.
 ಈ ಸ್ಮಾರ್ಟ್ ಕಾರ್ಡ್ ಅವಧಿಯು ಆಗಸ್ಟ್- 2013ರ ವರೆಗೆ ವಿಸ್ತರಿಸಲಾಗಿದೆ ಎಂದು ಕಾರ್ಮಿಕ ಆಯುಕ್ತರು ತಿಳಿಸಿದ್ದಾರೆ. ಆದ್ದರಿಂದ ಆರ್‌ಎಸ್‌ಬಿವೈ ಸ್ಮಾರ್ಟ್ ಕಾರ್ಡ್ ಅವಧಿಯು ಆಗಸ್ಟ್-2013ರವರೆಗೂ ಜಾರಿಯಲ್ಲಿರುತ್ತದೆಂದು, ಸದರಿ ಕಾರ್ಡ್‌ಗಳನ್ನು ಉಪಯೋಗಿಸಿ ರಾಷ್ಟ್ರೀಯ ಸ್ವಾಸ್ಥ್ಯ ಬಿಮಾ ಯೋಜನೆಯಡಿ ಫಲಾನುಭವಿಗಳು ಆರೋಗ್ಯ ವಿಮೆ ಸೌಲಭ್ಯವನ್ನು ಆಗಸ್ಟ್ ವರೆಗೆ ಪಡೆಯಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸರ್ಕಾರಿ ನೌಕರರಿಂದ ಅರ್ಜಿ ಆಹ್ವಾನ
ಶಿವಮೊಗ್ಗ: ಕರ್ನಾಟಕ ಲೋಕಸೇವಾ ಆಯೋಗವು 2013ನೇ ಸಾಲಿನ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆಗಳಿಗೆ ಮೇ 8ರಂದು ಅಧಿಸೂಚನೆಯನ್ನು ಹೊರಡಿಸಿ, ಅರ್ಹ ಸರ್ಕಾರಿ ನೌಕರರಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅಭ್ಯರ್ಥಿಗಳು ಮೇ 10ರಿಂದ ಜೂನ್ 10ರೊಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ತತ್ಸಂಬಂಧ ಸಿಂಡಿಕೇಟ್ ಬ್ಯಾಂಕ್‌ನ ಶಾಖೆಗಳಲ್ಲಿ ಶುಲ್ಕ ಪಾವತಿಸಲು ಜೂನ್ 13 ಕೊನೆ ದಿನವಾಗಿರುತ್ತದೆ. ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಆಯೋಗದ ವೆಬ್‌ಸೈಟ್ ಡಿಡಿಠಣಣ್ಞಠಡ್ಛ.್ಞಛ್ಠ.ಟ್ಝ್ಛಿ.್ಝಟಿ ಹಾಗೂ ಆಯೋಗದ ಕೇಂದ್ರ ಕಚೇರಿ, ಬೆಂಗಳೂರು ಮತ್ತು ಪ್ರಾಂತೀಯ ಕಚೇರಿಗಳಾದ ಬೆಳಗಾವಿ, ಗುಲ್ಬರ್ಗ, ಮೈಸೂರು ಮತ್ತು ಶಿವಮೊಗ್ಗದ ಕಚೇರಿಗಳಲ್ಲಿ ಪ್ರಕಟಣಾ ಫಲಕದಲ್ಲಿ ಪ್ರಕಟಿಸಲಾಗಿದೆ ಎಂದು ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಕೆ.ಆರ್. ಸುಂದರ್ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.