ಅಭಿನಂದನೆ
ಶಿವಮೊಗ್ಗ: ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಈಡಿಗ ಸಮುದಾಯದಿಂದ ಸ್ಪರ್ಧಿಸಿ, ಜಯಗಳಿಸಿದ ಎಲ್ಲಾ ಶಾಸಕರಿಗೆ, ಹಿರಿಯ ಮುಖಂಡ ಕಾಗೋಡು ತಿಮ್ಮಪ್ಪ, ಮಧುಬಂಗಾರಪ್ಪ, ವಸಂತ ಬಂಗೇರ, ಮಾಲಿಕಯ್ಯ ಗುತ್ತೇದಾರ, ಗೋಪಾಲ ಪೂಜಾರಿ, ಸುನಿಲ್ಕುಮಾರ್ ಆಯ್ಕೆಯಾಗಿ ಸಮಾಜಕ್ಕೆ ವಿಶೇಷ ಗೌರವ ತಂದಿದ್ದಾರೆ ಎಂದು ಪ್ರೊ.ಎಚ್. ಕಲ್ಲನ್ ಅಭಿನಂದಿಸಿದ್ದಾರೆ.
ಕಾರ್ಮಿಕರ ದಿನಾಚರಣೆ
ಶಿವಮೊಗ್ಗ: ಹಮಾಲಿ ಕಾರ್ಮಿಕರ ಸಂಘ ಮೇ 11, 12ರಂದು ನಗರದ ಗೋಪಿ ವೃತ್ತದಲ್ಲಿ ಕಾರ್ಮಿಕರ ದಿನಾಚರಣೆಯನ್ನು ಆಚರಿಸಲಿದೆ. ಮುಖ್ಯ ಅತಿಥಿಯಾಗಿ ಕಾಂಗ್ರೆಸ್ ಸೇವಾದಳದ ಸದಸ್ಯ ವೈ.ಎಚ್. ನಾಗರಾಜ್ ಆಗಮಿಸುವರು. 11ರಂದು ಬೆಳಗ್ಗೆ 9.30ರಿಂದ ನಗರದ ಬಸ್ಸ್ಟ್ಯಾಂಡ್, ಗೋಪಿ ಸರ್ಕಲ್ ಮಾರ್ಗವಾಗಿ ಮೆರವಣಿಗೆ ನಡೆಯಲಿದೆ ಎಂದು ಬಿ. ಬಷೀರ್ ತಿಳಿಸಿದ್ದಾರೆ.
ನೂತನ ಭರತ ನಾಟ್ಯ ಶಾಲೆ
ಶಿವಮೊಗ್ಗ: ನಟನಂ ಬಾಲ ನಾಟ್ಯ ಕೇಂದ್ರದಲ್ಲಿ ಭರತನಾಟ್ಯ ತರಬೇತಿ ಪಡೆಯುತ್ತಿದ್ದ ಎಸ್.ಎನ್. ಮೇಘನ ಅವರು ಮೇ 13ರಂದು ನಗರದಲ್ಲಿ ನೂತನ ಭರತನಾಟ್ಯ ಶಾಲೆಯನ್ನು ಆರಂಭಿಸಲಿದ್ದಾರೆ. ಕೇಂದ್ರದ ಎಸ್. ಕೇಶವಕುಮಾರ್ ಅವರ ಬಳಿ ಭರತನಾಟ್ಯ ತರಬೇತಿ ಪಡೆದು ರಾಜ್ಯಾದ್ಯಂತ ಪ್ರತಿಷ್ಠಿತ ವೇದಿಕೆಗಳಲ್ಲಿ ಪ್ರದರ್ಶನ ನೀಡಿದ್ದು, ಸಹ್ಯಾದ್ರಿ ಉತ್ಸವ, ಹಾವೇರಿಯ ಜಿಲ್ಲಾ ಉತ್ಸವ, ಜಿಂದಾಲ್ನಲ್ಲಿ ರಾಮನವಮಿ, ಕೃಷ್ಣ ಜನ್ಮಾಷ್ಟಮಿ, ಅಖಿಲ ಭರತ ನಾಟ್ಯ ಉತ್ಸವ ಹೀಗೆ ಸುಮಾರು 250ಕ್ಕೂ ಹೆಚ್ಚು ಕಾರ್ಯಕ್ರಮಗಳಲ್ಲಿ ಭರತ ನಾಟ್ಯ ಪ್ರದರ್ಶನ ನೀಡಿದ್ದಾರೆ. ವಿವರಗಳಿಗಾಗಿ- 7829622486.
ನೇತ್ರ ತಪಾಸಣೆ ಶಿಬಿರ
ಶಿವಮೊಗ್ಗ: ನಗರದ ವಾಸನ್ ಕಣ್ಣಿನ ಆಸ್ಪತ್ರೆಯಲ್ಲಿ ಮೇ 12ರಿಂದ 31ರ ವರೆಗೆ ಉಚಿತ ನೇತ್ರ ತಪಾಸಣೆ ಶಿಬಿರ ಹಮ್ಮಿಕೊಳ್ಳಲಾಗಿದೆ. ಎಲ್ಲಾ ತಾಯಂದಿರು ಶಿಬಿರದಲ್ಲಿ ಪಾಲ್ಗೊಳ್ಳಬಹುದು. ಕಣ್ಣಿನ ಶಸ್ತ್ರ ಚಿಕಿತ್ಸೆಗೆ ವಿಶೇಷ ರಿಯಾಯಿತಿಯನ್ನು ನೀಡಲಾಗುವುದು ಎಂದು ಆಸ್ಪತ್ರೆ ತಿಳಿಸಿದೆ. ವಿವರಗಳಿಗಾಗಿ- 08182-398900.
ಕೃತಜ್ಞತೆ
ಭದ್ರಾವತಿ: ತಮಗೆ ಭದ್ರಾವತಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ಅವಕಾಶ ಸಿಕ್ಕಿದ್ದು ಅನೇಕ ಕಾರಣಗಳಿಂದ ತಾವು ಜಯಗಳಿಸಲು ಸಾಧ್ಯವಾಗಿಲ್ಲ. ಆದಾಗ್ಯೂ ಕ್ಷೇತ್ರದಿಂದ ತಮಗೆ ಸಹಕರಿಸಿದ ಎಲ್ಲರಿಗೂ ಹಾಗೂ ಭದ್ರಾವತಿ ಜನತೆಗೂ ತಾವು ಕೃತಜ್ಞತೆ ಸಲ್ಲಿಸುವುದಾಗಿ ಕೇಂದ್ರ ಮಾಜಿ ಸಚಿವ ಸಿ.ಎಂ. ಇಬ್ರಾಹಿಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಜಿ ಆಹ್ವಾನ
ಚಿಕ್ಕಮಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆಯ ಸರ್ಕಾರಿ ಪ್ರೌಢಶಾಲೆ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಸಿ.ಬಿ.ಎಡ್. ಸಹ ಶಿಕ್ಷಕರು ವಲಯ ವರ್ಗಾವಣೆ, ಬದಲಾವಣೆಗೆ ಅರ್ಜಿ ಆಹ್ವಾನಿಸಿದೆ.
ಸಿ ವಲಯದಲ್ಲಿ ದೀರ್ಘಾವಧಿ ಸೇವೆ ಸಲ್ಲಿಸಿದ ಶಿಕ್ಷಕರು ಬಿ ವಲಯಕ್ಕೆ ಹಾಗೂ ಬಿ ವಲಯದಲ್ಲಿ ದೀರ್ಘಾವಧಿ ಸೇವೆ ಸಲ್ಲಿಸಿದ ಶಿಕ್ಷಕರು ಎ ವಲಯಕ್ಕೆ ವರ್ಗಾವಣೆ ಬಯಸಿದ್ದಲ್ಲಿ ಅರ್ಜಿ ಸಲ್ಲಿಸಬಹುದು. ಸೇವಾ ಜೇಷ್ಠತೆ ಆಧಾರದ ಮೇಲೆ ಕೌನ್ಸಿಲಿಂಗ್ ಮುಖಾಂತರ ನಿಯುಕ್ತಿಗೊಳಿಸಲಾಗುವುದು. ಅರ್ಜಿಗಳನ್ನು ಸಂಬಂಧಪಟ್ಟ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮೇ 13 ರೊಳಗೆ ಸಲ್ಲಿಸಬಹುದಾಗಿದೆ. ಮೇ 14 ರಂದು ಸಂಜೆ 4 ಗಂಟೆಗೆ ಡಿ.ಡಿ.ಪಿ.ಐ ಕಚೇರಿಯಲ್ಲಿ ತಾತ್ಕಾಲಿಕ ಪಟ್ಟಿ ಪ್ರಕಟಿಸಲಾಗುವುದು. ಆಕ್ಷೇಪಣೆ ಸಲ್ಲಿಸಲು ಮೇ 15 ಕಡೆಯ ದಿನ. ಮೇ 16 ರಂದು ಕೌನ್ಸಿಲಿಂಗ್ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ಆಯಾ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಅಥವಾ ಡಿಡಿಪಿಐ ಕಚೇರಿ ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.
ಅರ್ಜಿ ಆಹ್ವಾನ
ತೋಟಗಾರಿಕೆ ಇಲಾಖೆ ವತಿಯಿಂದ ಮೂಡಿಗೆರೆಯ ಬೀಜುವಳ್ಳಿ ತೋಟಗಾರಿಕಾ ತರಬೇತಿ ಕೇಂದ್ರದಲ್ಲಿ ಉಚಿತವಾಗಿ ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿ ಆಯೋಜಿಸಿದೆ. ತರಬೇತಿ ಜೂನ್ 1 ರಿಂದ 2014ರ ಮಾರ್ಚ್ 31ರವರೆಗೆ ನಡೆಯಲಿದ್ದು, ಅರ್ಜಿ ಸಲ್ಲಿಸಲು ಮೇ 14 ಕೊನೆಯದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಮೀಪದ ತೋಟಗಾರಿಕಾ ಕಚೇರಿ ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಿದೆ.
ಅರ್ಜಿ ಆಹ್ವಾನ
ಚಿಕ್ಕಮಗಳೂರು: ಮೈಸೂರಿನ ಚಾಮರಾಜೇಂದ್ರ ಸರ್ಕಾರಿ ದೃಶ್ಯ ಕಲಾ ಕಾಲೇಜಿನ ಪ್ರಥಮ ಮೂಲ ತರಗತಿ, ಪ್ರಥಮ ಬಿ.ಎಫ್.ಎ.ಗೆ ಪ್ರಸ್ತುತ ಶೈಕ್ಷಣಿಕ ವರ್ಷದ ಸೇರ್ಪಡೆಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜೂ. 4 ಕೊನೆಯ ದಿನವಾಗಿದ್ದು, ಜೂ. 11 ರಂದು ಬೆಳಿಗ್ಗೆ 11 ಗಂಟೆಗೆ ಅರ್ಹತಾ ಪರೀಕ್ಷೆ ಹಾಗೂ 2 ಗಂಟೆಗೆ ವೈಯಕ್ತಿಕ ಸಂದರ್ಶನವನ್ನು ನಡೆಸಲಾಗುವುದು. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಚಿಕ್ಕಮಗಳೂರು ತಾಲ್ಲೂಕಿನಲ್ಲಿ ಸಮಾಜ ಕಲ್ಯಾಣ ಇಲಾಖೆ ಹಾಗೂ ಗಿರಿಜನ ಕಲ್ಯಾಣ ಇಲಾಖೆಯ ಸಯ್ಯಾಜಿರಾವ್ ರಸ್ತೆ, ಮೈಸೂರು. ದೂರವಾಣಿ ಸಂಖ್ಯೆ- 0821 2438931 ಸಂಪರ್ಕಿಸಲು ಈ ಸಂದರ್ಭದಲ್ಲಿ ಪ್ರಕಟಣೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

