ವೃತ್ತಿ ನೈಪುಣ್ಯತೆ ಹೆಚ್ಚಿಸಿಕೊಳ್ಳಿ
ಶಿವಮೊಗ್ಗ: ವೈದ್ಯಕೀಯ ಕ್ಷೇತ್ರದಲ್ಲಿ ಪ್ರತಿ ನಿತ್ಯ ಹೊಸ ರೀತಿಯ ಔಷಧಿ ಹುಟ್ಟಿಕೊಳ್ಳುತ್ತಿದ್ದು, ವೈದ್ಯ ತನ್ನ ನೈಪುಣ್ಯತೆ ಹೆಚ್ಚಿಸಿಕೊಳ್ಳಬೇಕಾದರೆ ಪ್ರತಿ ನಿತ್ಯ ಅಫ್ಡೇಟ್ ಆಗಬೇಕು ಎಂದು ಎಸ್ಐಎಂಎಸ್ ಕಾಲೇಜಿನ ಪ್ರಾಂಶುಪಾಲ ಡಾ.ಕೆ.ಎಸ್. ಗಂಗಾಧರ್ ಅಭಿಪ್ರಾಯಪಟ್ಟರು.
ರಾಷ್ಟ್ರೀಯ ಔಷಧ ಮಹಾವಿದ್ಯಾಲಯ ನಗರದ ಆಚಾರ್ಯ ತುಳಸಿ ವಾಣಿಜ್ಯ ಕಾಲೇಜಿನ ಚಂದನ ಸಭಾಂಗಣದಲ್ಲಿ ಆಯೋಜಿಸಿದ್ದ ಫಾರ್ಮ ಫೆಸ್ಟ್-2013 ಮತ್ತು ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಎಸ್.ಆರ್. ನಾಗಪ್ಪಶ್ರೇಷ್ಠಿ ಅವರ ಜನ್ಮ ಶತಮಾನೋತ್ಸವ ಸಮಾರಂಭದಲ್ಲಿ ಅವರು, ಪ್ರಸ್ತತ ದಿನಗಳಲ್ಲಿ ವಿಜ್ಞಾನ ಕ್ಷೇತ್ರದ ಬಗ್ಗೆ ಎಷ್ಟು ತಿಳಿದರು ಸಾಲದು. ಇಲ್ಲವಾದಲ್ಲಿ ವೈದ್ಯಕೀಯ ಕ್ಷೇತ್ರದಲ್ಲಿ ಯಶಸ್ವಿಯಾಗಲು ಸಾಧ್ಯವಿಲ್ಲ ಎಂದರು.
ವಿಷಪೂರಿತ ಔಷಧಿ: ವೈದ್ಯಕೀಯ ಕ್ಷೇತ್ರದ ಅನುಭವ ಏನು ಮಾಡಬೇಕು ಎನ್ನುವುದಕ್ಕಿಂತ ಏನು ಮಾಡಬಾರದು ಎಂಬುದನ್ನು ತಿಳಿಸುತ್ತದೆ. ವಿಷಪೂರಿತ(ಸೈಡ್ ಎಫೆಕ್ಟ್) ಔಷಧಿಗಳ ಬಗ್ಗೆ ತಿಳಿದುಕೊಳ್ಳಬಹುದು. ಯುವ ವೈದ್ಯರಿಂದ ಮತ್ತಷ್ಟು ಸಂಶೋಧನೆಗಳು ಆಗಬೇಕಿದೆ ಎಂದರು.
ಇಂದಿನ ದಿನಗಳಲ್ಲಿ ಓದಿನ ವಿಷಯಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಮೇಲೆ ಒತ್ತಡಗಳು ಹೆಚ್ಚಾಗುತ್ತಿದ್ದು, ಓದು ಮತ್ತು ತಂತ್ರಜ್ಞಾನದ ಬಗ್ಗೆ ಚಿಂತಿಸುತ್ತಾ ಬದುಕಿನ ಮೌಲ್ಯಗಳನ್ನು ತಿಳಿದುಕೊಳ್ಳುವಲ್ಲಿ ವಿಫಲರಾಗಿದ್ದಾರೆ. ಇಂದಿನ ಮಕ್ಕಳಲ್ಲಿ ಆತ್ಮಸ್ಥೈರ್ಯ ಕಡಿಮೆಯಾಗುತ್ತಿರುವುದು ಆತಂಕ ತಂದಿದೆ ಎಂದರು.
ಪ್ರಪಂಚದ ಜ್ಞಾನ: ಸದಾ ತಂತ್ರಜ್ಞಾನ, ಓದಿನ ಬಗ್ಗೆ ಚಿಂತಿಸುವ ಮಕ್ಕಳಲ್ಲಿ ಹೊರಗಿನ ಪ್ರಪಂಚದ ಜ್ಞಾನ ಕಡಿಮೆ ಇರುತ್ತದೆ.
ಒಂದು ಶಿಕ್ಷಣ ಸಂಸ್ಥೆಯನ್ನು ಹುಟ್ಟುಹಾಕುವುದು ಬಹಳ ಕಷ್ಟದ ಕೆಲಸ. ಈ ಸಂದರ್ಭದಲ್ಲಿ ರಾಷ್ಟ್ರೀಯ ಶಿಕ್ಷಣ ಸಂಸ್ಥೆಯಂತಹ ದೊಡ್ಡ ಮಟ್ಟದ ಸಂಸ್ಥೆಯನ್ನು ಹುಟ್ಟಿಹಾಕಿರುವ ಎಸ್.ಆರ್. ನಾಗಪ್ಪಶ್ರೇಷ್ಠಿ ಅವರಿಗೆ ನಾವು ಚಿರಋಣಿಯಾಗಿರಬೇಕು ಎಂದರು.
ಇದೇ ವೇಳೆ ರಾಷ್ಟ್ರೀಯ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಎಸ್.ಆರ್. ನಾಗಪ್ಪ ಶ್ರೇಷ್ಠಿ ಅವರ ಹಳೆಯ ಭಾವಚಿತ್ರಗಳನ್ನು ಪ್ರಾತ್ಯಕ್ಷಿಕೆ ಮೂಲಕ ವಿದ್ಯಾರ್ಥಿಗಳಿಗೆ ತಿಳಿಸಲಾಯಿತು. ರಾಷ್ಟ್ರೀಯ ಔಷಧ ಮಹಾವಿದ್ಯಾಲಯದ ಪ್ರಾಂಶುಪಾಲ ಪ್ರೊ.ಐ.ಜೆ. ಕುಪಾಸ್ಟ್, ರಾಷ್ಟ್ರೀಯ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಎಸ್.ವಿ. ತಿಮ್ಮಯ್ಯ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

